ಮಂಗಳೂರು: ನೇತ್ರಾವತಿ ಸೇತುವೆಗೆ ಸಿಸಿ ಟಿವಿ ಅಳವಡಿಕೆ

By Kannadaprabha News  |  First Published Aug 3, 2019, 2:16 PM IST

ನೇತ್ರಾವತಿ ಸೇತುವೆಯಲ್ಲಿಸಿಸಿಟಿವಿ ಅಳವಡಿಸುವ ಬಗ್ಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಭರವಸೆ ನೀಡಿದ್ದಾರೆ. ನೇತ್ರಾವತಿ ಸೇತುವೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಅಪಾಯಕಾರಿ ತಾಣವಾಗಿ ಪರಿಣಮಿಸುತ್ತದೆ. ಆತ್ಮಹತ್ಯೆಯಂತಹ ಅಹಿತಕರ ಘಟನೆಗಳಿಗೆ ಇದು ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಸಿಸಿಟಿವಿ ಅಳವಡಿಸಲು ನಿರ್ಧರಿಸಲಾಗಿದೆ.


ಮಂಗಳೂರು(ಆ.03): ಅತಿ ಉದ್ದದ, ಇತಿಹಾಸವುಳ್ಳ ನೇತ್ರಾವತಿ ಸೇತುವೆಗೆ ಸಿಸಿಟಿವಿ ಅಳವಡಿಕೆಯ ಕೂಗು ಬಹಳ ಹಿಂದಿನಿಂದಲೂ ಕೇಳಿಬಂದಿದ್ದು, ಇದೀಗ ಕಾಫಿ ಡೇ ಸಂಸ್ಥಾಪಕ, ಖ್ಯಾತ ಉದ್ಯಮಿ ಸಿದ್ದಾರ್ಥ್‌ ಸಾವಿನಿಂದ ಈ ಕೂಗು ಬಲವಾಗಿದೆ. ಇದೀಗ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಸೇತುವೆಗೆ ಸಿಸಿಟಿವಿ ಅಳವಡಿಸುವ ಕುರಿತು ಭರವಸೆ ನೀಡಿದ್ದಾರೆ.

ಮಂಗಳೂರಿನಿಂದ ಕಾಸರಗೋಡು ಭಾಗವನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪರ್ಕಿಸುವ ದಾರಿಯ ಜಪ್ಪಿನಮೊಗೇರಿನ ನೇತ್ರಾವತಿ ಸೇತುವೆ ಅಥವಾ ಉಳ್ಳಾಲ ಸೇತುವೆಗೆ ಸಿಸಿಟಿವಿ ಅಳವಡಿಸಲು ಚಿಂತನೆ ಮಾಡಿದ್ದು ಈ ಬಗ್ಗೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಯೊಂದಿಗೆ ಸಮಾಲೋಚಿಸುವುದಾಗಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದು, ಈ ಕುರಿತು ಪತ್ರಿಕಾ ಪ್ರಕಟಣೆಯನ್ನೂ ಹೊರಡಿಸಿದ್ದಾರೆ.

Tap to resize

Latest Videos

undefined

ನೇತ್ರಾವತಿ ಸೇತುವೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಅಪಾಯಕಾರಿ ತಾಣವಾಗಿ ಪರಿಣಮಿಸುತ್ತದೆ. ಆತ್ಮಹತ್ಯೆಯಂತಹ ಅಹಿತಕರ ಘಟನೆಗಳಿಗೆ ಇದು ಕಾರಣವಾಗುತ್ತಿದೆ. ಸಿ.ಸಿ. ಟಿ.ವಿ.ಗಳನ್ನು ಅಳವಡಿಸುವುದರಿಂದ ಸೇತುವೆಯ ಮೇಲೆ ನಡೆದ ದುರ್ಘಟನೆಗಳನ್ನು ತಕ್ಷಣ ಪರಿಶೀಲಿಸಲು ಅನುಕೂಲವಾಗುತ್ತದೆ.

ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದರಿಂದ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆಯ ಸಮಯ ಮತ್ತು ಶ್ರಮ ವ್ಯರ್ಥವಾಗುವುದಿಲ್ಲ. ಇನ್ನು ಮನೆಯಿಂದ ನಾಪತ್ತೆಯಾಗುವ ವ್ಯಕ್ತಿಗಳ ಬಗ್ಗೆ ಇಂತಹ ಸಿ.ಸಿ. ಟಿವಿ ಕ್ಯಾಮೆರಾಗಳ ದೃಶ್ಯಗಳು ನಾಪತ್ತೆಯಾದವರ ಮನೆಯವರಿಗೆ ಹಾಗೂ ನಾಪತ್ತೆ ಪ್ರಕರಣಗಳ ತನಿಖೆ ನಡೆಸುವ ಪೊಲೀಸ್‌ ಅಧಿಕಾರಿಗಳಿಗೆ ಅನುಕೂಲವಾಗುತ್ತದೆ ಎಂದು ಕಾಮತ್‌ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉದ್ಯಮಿ ಸಿದ್ಧಾರ್ಥ್‌ ಸಾವಿನ ಕುರಿತು ಹಲವು ಪ್ರಶ್ನೆಗಳು ಎದ್ದಿವೆ. ಇದರಿಂದ ಪೊಲೀಸ್‌ ಇಲಾಖೆಗೂ ತನಿಖೆಯಲ್ಲಿ ವಿಳಂಬವಾಗುತ್ತಿದೆ. ಒಂದು ವೇಳೆ ಸಿ.ಸಿ ಟಿವಿ ಅಳವಡಿಸುತ್ತಿದ್ದರೆ, ನೈಜತೆಯನ್ನು ಕಂಡುಹಿಡಿಯಬಹುದಿತ್ತು. ಈ ಕುರಿತು ಸಾರ್ವಜನಿಕ ವಲಯದಿಂದ ವ್ಯಕ್ತವಾದ ಸಿಸಿಟಿವಿ ಅಳವಡಿಕೆಗೆ ಆಗ್ರಹ ವ್ಯಕ್ತವಾಗಿತ್ತು.

ನೇತ್ರಾವತಿ ಸೇತುವೆ ಮೇಲೆ ವಾಹನ ಸಂಚಾರ ಅಸ್ತವ್ಯಸ್ತ

click me!