‘ಮೋದಿಗೆ ತಕ್ಕ ಪ್ರತ್ಯುತ್ತರ ಕೊಡುವ ನಾಯಕ ಸಿದ್ದು’

By Kannadaprabha News  |  First Published May 16, 2023, 5:08 AM IST

ಪ್ರಧಾನಿ ಮೋದಿಯವರಿಗೆ ತಕ್ಕ ಪ್ರತ್ಯುತ್ತರ ಕೊಡುವ ಶಕ್ತಿಯಿರುವ ಏಕೈಕ ಹಾಗೂ ಹಾಲಿ ಅತಿ ಹೆಚ್ಚು ಶಾಸಕರ ಬೆಂಬಲವಿರುವ ಕಾಂಗ್ರೆಸ್‌ ಮುಖಂಡ ಸಿದ್ದರಾಮಯ್ಯನವರಾಗಿದ್ದು, ಅವರನ್ನು ಕೂಡಲೇ ಕಾಂಗ್ರೆಸ್‌ ಹೈಕಮಾಂಡ್‌ ಕರ್ನಾಟಕದ ಮುಖ್ಯಮಂತ್ರಿಯನ್ನಾಗಿ ಘೋಷಿಸಬೇಕೆಂದು ಕುರುಬ ಸಮಾಜದ ಮುಖಂಡರು ತುಮಕೂರಿನಲ್ಲಿ ಒತ್ತಾಯಿಸಿದರು.


  ತುಮಕೂರು : ಪ್ರಧಾನಿ ಮೋದಿಯವರಿಗೆ ತಕ್ಕ ಪ್ರತ್ಯುತ್ತರ ಕೊಡುವ ಶಕ್ತಿಯಿರುವ ಏಕೈಕ ಹಾಗೂ ಹಾಲಿ ಅತಿ ಹೆಚ್ಚು ಶಾಸಕರ ಬೆಂಬಲವಿರುವ ಕಾಂಗ್ರೆಸ್‌ ಮುಖಂಡ ಸಿದ್ದರಾಮಯ್ಯನವರಾಗಿದ್ದು, ಅವರನ್ನು ಕೂಡಲೇ ಕಾಂಗ್ರೆಸ್‌ ಹೈಕಮಾಂಡ್‌ ಕರ್ನಾಟಕದ ಮುಖ್ಯಮಂತ್ರಿಯನ್ನಾಗಿ ಘೋಷಿಸಬೇಕೆಂದು ಕುರುಬ ಸಮಾಜದ ಮುಖಂಡರು ತುಮಕೂರಿನಲ್ಲಿ ಒತ್ತಾಯಿಸಿದರು.

ತುಮಕೂರಿನ ಬಿ.ಎಚ್‌. ರಸ್ತೆಯಲ್ಲಿರುವ ಕಾಳಿದಾಸ ವಿದ್ಯಾವರ್ಧಕ ಸಂಘದ ಕಚೇರಿ ಮುಂಭಾಗ ಜಮಾಯಿಸಿದ ಕಾಳಿದಾಸ ವಿದ್ಯಾವರ್ಧಕ ಸಂಘ, ಜಿಲ್ಲಾ ಕುರುಬರ ಸಂಘ, ಸಂಗೊಳ್ಳಿ ರಾಯಣ್ಣನ ಸಂಘ, ಕನಕ ಪತ್ತಿನ ಸಹಕಾರ ಸಂಘ, ಕನಕ ಪತ್ತಿನ ಮಹಿಳಾ ಸಹಕಾರ ಸಂಘ, ಕವಿರತ್ನ ಕಾಳಿದಾಸ ಸಂಘ ಸೇರಿದಂತೆ ವಿವಿಧ ಕುರುಬರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮುಖಂಡರು ಈ ಬಾರಿ ಸಿದ್ದರಾಮಯ್ಯನವರನ್ನೇ ಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ತೊಂದರೆಯಾಗಲಿದೆ ಎಂಬ ಎಚ್ಚರಿಕೆಯನ್ನು ನೀಡಿದರು.

Tap to resize

Latest Videos

ರಾಜ್ಯದಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷಕ್ಕೆ 135 ಸ್ಥಾನಗಳ ಸ್ಪಷ್ಟಬಹುಮತ ಬರಲು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಇಬ್ಬರ ಪರಿಶ್ರಮ ಬಹಳ ದೊಡ್ಡದಿದೆ. ಅದರಲ್ಲೂ ಸಿದ್ದರಾಮಯ್ಯನವರು ಪರಿಶ್ರಮ ಜಾಸ್ತಿಯಿದ್ದು, ಈ ಬಾರಿ ಸಿದ್ದರಾಮಯ್ಯವರನ್ನೇ ಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ:

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಬೇಕು. ಅವರಿಗೆ ಹೆಚ್ಚಿನ ಶಾಸಕರ ಬೆಂಬಲವೂ ಇದೆ. ಹೈಕಮಾಂಡ್‌ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸೀಟುಗಳನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಹಾಗಾಗಿ ಸಿದ್ದರಾಮಯ್ಯನವರನ್ನೆ ಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಸುರೇಶ್‌ ಮಾತನಾಡಿ, ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡದಿದ್ದರೆ ನಮ್ಮ ಹೋರಾಟ ನಿರಂತರವಾಗಿ ಸಾಗುತ್ತದೆ. ಮುಂದಿನ ವರ್ಷ ಲೋಕಸಭಾ ಚುನಾವಣೆ ಬರುತ್ತಿದೆ. ಪ್ರಧಾನಿ ಮೋದಿಯವರ ಮಾತುಗಳಿಗೆ ತಕ್ಕ ಪ್ರತ್ಯುತ್ತರ ಕೊಡುವ ಶಕ್ತಿ ಸಿದ್ದರಾಮಯ್ಯನವರಿಗಿದೆ. ಸಿದ್ದರಾಮಯ್ಯನವರು ಎಂದರೆ ಶಕ್ತಿ. ಎಲ್ಲ ಜನಾಂಗದವರು ಸಹ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಬೇಕು ಎಂದು ಕಾಯುತ್ತಿದ್ದಾರೆ. ಹೈಕಮಾಂಡ್‌ ಕೂಡಲೇ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಕನಕ ಪತ್ತಿನ ಮಹಿಳಾ ಸಹಕಾರ ಸಂಘದ ಸುನೀತಾ ನಟರಾಜು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ 135 ಸೀಟುಗಳನ್ನು ಗೆಲ್ಲುವ ಮೂಲಕ ಜಯಭೇರಿ ಬಾರಿಸಿದೆ. ಈ ಮೂಲಕ ಸ್ಪಷ್ಟಸರ್ಕಾರ ರಚನೆಗೂ ಅವಕಾಶ ದೊರೆತಿದೆ. ಇದಕ್ಕೆಲ್ಲ ಕಾರಣಕರ್ತರಾಗಿರುವ ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದರು.

ಕಪ್ಪು ಚುಕ್ಕೆ ಇಲ್ಲದೆ ಆಡಳಿತ ನಡೆಸಿದ್ದಾರೆ:

ಸಿದ್ದರಾಮಯ್ಯನವರು ಎಲ್ಲ ವರ್ಗದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು 5 ವರ್ಷ ಯಾವುದೇ ಕಪ್ಪುಚುಕ್ಕೆ ಇಲ್ಲದೆ ಆಳ್ವಿಕೆ ನಡೆಸಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟದಂತೆ ಕ್ಯಾಬಿನೆಟ್‌ ರಚನೆ ಮಾಡಿದ್ದರು. ಈಗಾಗಲೇ 13 ಬಜೆಟ್‌ಗಳನ್ನು ಮಂಡಿಸಿದ್ದಾರೆ. ಸಿದ್ದರಾಮಯ್ಯನವರು ನಮ್ಮೆಲ್ಲರ ಹಿರಿಯಣ್ಣ. ಹೈಕಮಾಂಡ್‌ಗೆ ಎಷ್ಟೇ ಒತ್ತಡ ಇದ್ದರೂ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಿ ಕರ್ನಾಟಕದ ಉಜ್ವಲ ಭವಿಷ್ಯಕ್ಕೆ ಕಾರಣವಾಗಬೇಕು ಎಂದು ಅವರು ಮನವಿ ಮಾಡಿದರು.

ಮಹಾರಾಷ್ಟ್ರ ಪರಿಸ್ಥಿತಿ ಉದ್ಭವವಾಗುವುದು ಬೇಡ:

ಕರ್ನಾಟಕದಲ್ಲಿ ಮಹಾರಾಷ್ಟ್ರ ಪರಿಸ್ಥಿತಿ ಉದ್ಭವವಾಗುವುದು ಬೇಡ. ಇದಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಅವಕಾಶ ನೀಡಬಾರದು ಎಂದು ಅವರು ಆಗ್ರಹಿಸಿದರು. ಡಿ.ಕೆ.ಶಿವಕುಮಾರ್‌ ಅವರೂ ಜೋಡೆತ್ತಿನ ರೀತಿ ಪಕ್ಷ ಅಧಿಕಾರಕ್ಕೆ ತರಲು ದುಡಿದಿದ್ದಾರೆ. ಅವರಿಗೆ ಇನ್ನು ಅವಕಾಶಗಳು ಇವೆ. ಹಾಗಾಗಿ ಈ ಬಾರಿ ಸಿದ್ದರಾಮಯ್ಯನವರನ್ನೇ ಮುಖ್ಯಮಂತ್ರಿ ಮಾಡಲಿ ಎಂದು ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಆಂತರಿಕ ಲೆಕ್ಕ ಪರಿಶೋಧಕ ಸಿ. ಪುಟ್ಟರಾಜು, ಮೈಲಪ್ಪ, ಟಿ.ಆರ್‌. ಸುರೇಶ್‌, ಸುನಿತಾ ನಟರಾಜು, ನಿರ್ದೇಶಕರಾದ ರಘುರಾಮ್‌, ಶಂಕರ್‌, ಶೇಷಗಿರಿ, ಎಸ್‌. ನಾಗಣ್ಣ, ಟಿ.ಎನ್‌. ಮಧುಕರ್‌, ವಕೀಲರಾದ ವಿ.ಆರ್‌. ವೆಂಕಟೇಶ್‌, ಧನರಾಜು ಸೇರಿದಂತೆ ಕುರುಬ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಅವರ ಪರಿಶ್ರಮದಿಂದ ಕಾಂಗ್ರೆಸ್‌ ಪಕ್ಷಕ್ಕೆ 135 ಸ್ಥಾನಗಳು ಲಭಿಸುವ ಮೂಲಕ ಸ್ಪಷ್ಟಬಹುಮತ ಬಂದಿದೆ. ಇದಕ್ಕೆ ಡಿಕೆಶಿಯವರ ಪರಿಶ್ರಮವೂ ಇದೆ. ಅದರಲ್ಲೂ ಸಿದ್ದರಾಮಯ್ಯನವರ ಶ್ರಮ ಜಾಸ್ತಿ ಇದೆ. ಬಿಜೆಪಿಯ ಭ್ರಷ್ಟಾಚಾರದ ಆಡಳಿತಕ್ಕೆ ತಕ್ಕಪಾಠ ಕಲಿಸಬೇಕಾದರೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಲೇಬೇಕು. ನಮ್ಮೆಲ್ಲರ ಅಪೇಕ್ಷೆ ಸಹ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಲೇಬೇಕು.

ಮೈಲಪ್ಪ ಅಧ್ಯಕ್ಷ, ಕಾಳಿದಾಸ ವಿದ್ಯಾವರ್ಧಕ ಸಂಘ

click me!