ಸರಳ ಸಜ್ಜನಿಕೆಯ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ: ಸಿಎಂ ಬೊಮ್ಮಾಯಿ ಸಂತಾಪ

Published : Feb 09, 2023, 11:04 AM IST
ಸರಳ ಸಜ್ಜನಿಕೆಯ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ: ಸಿಎಂ ಬೊಮ್ಮಾಯಿ ಸಂತಾಪ

ಸಾರಾಂಶ

ನಾಡಿನ ಅಭಿವೃದ್ಧಿಪರ ಹಾಗೂ ಸಮಾಜಮುಖಿ ಚಿಂತಕರು, ಸರಳ ಸಜ್ಜನಿಕೆಯ ವ್ಯಕ್ತಿ, ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಧಾರವಾಡ (ಫೆ.09): ನಾಡಿನ ಅಭಿವೃದ್ಧಿಪರ ಹಾಗೂ ಸಮಾಜಮುಖಿ ಚಿಂತಕರು, ಸರಳ ಸಜ್ಜನಿಕೆಯ ವ್ಯಕ್ತಿ, ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪತ್ನಿ, ಓರ್ವ ಪುತ್ರ ಹಾಗು ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿದ ಸಿಎಂ ಬೊಮ್ಮಾಯಿ ಅವರು, ಮಾಜಿ ಶಾಸಕರು ಹಾಗೂ ನನ್ನ ಆತ್ಮೀಯರಾಗಿದ್ದ ಶ್ರೀ ಶಿವಾನಂದ ಅಂಬಡಗಟ್ಟಿ ಅವರು ಹೃದಯಾಘಾತದಿಂದ ನಿಧನರಾದ ವಿಷಯ ಎಂದು ತಿಳಿದು ಅತ್ಯಂತ ದುಃಖವಾಯಿತು. ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದ ಅವರು ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ವರ್ಗಕ್ಕೆ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಸಂತಾಪ ತಿಳಿಸಿದ್ದಾರೆ. 

ಉಪ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆ: ಇನ್ನು ಶಿವಾನಂದ ಅಂಬಡಗಟ್ಟಿ ಅವರ ಅಂತ್ಯಕ್ರಿಯೆಯನ್ನು ಅವರ ಸ್ವಗ್ರಾಮ ಅಳ್ನಾವರದಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ನೆರವೇರಿಸಲಾಗುವುದು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀ ಯ ಘಟಕದ ಉಪಾಧ್ಯಕ್ಷರು ಆಗಿದ್ದ ಅವರು, 1999 ರಿಂದ 2004 ರ ಅವಧಿಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಅವರ ಸಹೋದರ ಶಶಿಧರ್ ಅಂಬಡಗಟ್ಟಿ ಅವರ ನಿಧನ ನಂತರ ನಡೆದ ಉಪ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.

PREV
Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ರಹಸ್ಯ ರಿವೀಲ್: ಪೊಲೀಸರ ಬಲೆಗೆ ಬಿದ್ದ ಮೂವರು!