ಲಾಕ್‌ಡೌನ್ ಪಾಲನೆಯಲ್ಲಿ ಸರಳ ವಿವಾಹ| ಸರಳ ವಿವಾಹಕ್ಕೆ ಸಾಕ್ಷಿಯಾದ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಪಿ. ರಾಜೀವ್| ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನಂದಿಬೇವೂರು ತಾಂಡಾದಲ್ಲಿ ನಡೆದ ಮದುವೆ|
ಹರಪನಹಳ್ಳಿ(ಮೇ.25): ಕೊರೋನಾ ನಿಯಂತ್ರಣಕ್ಕಾಗಿ ಸರ್ಕಾರ ಘೋಷಿಸಿರುವ ಲಾಕ್‌ಡೌನ್ ಸಂದರ್ಭದಲ್ಲಿ ಎಲ್ಲ ನಿಯಮಗಳನ್ನು ಪಾಲನೆ ಮಾಡುತ್ತ ಅತ್ಯಂತ ಸರಳವಾಗಿ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನಂದಿಬೇವೂರು ತಾಂಡಾದಲ್ಲಿ ಭಾನುವಾರ ನಡೆದ ವಿವಾಹಕ್ಕೆ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಪಿ. ರಾಜೀವ್ ಸಾಕ್ಷಿಯಾದರು.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡದ ವರ ಮೋತಿಲಾಲ್ (ಸುರೇಶ) ಹಾಗೂ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನಂದಿಬೇವೂರು ತಾಂಡಾದ ವಧು ಸುಮಿತ್ರಾಬಾಯಿ ಅವರ ವಿವಾಹದಲ್ಲಿ ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಹಾಗೂ ಮದು ಮಗ ಸೇರಿದಂತೆ ಎಲ್ಲರೂ ಮಾಸ್ಕ್ ಧರಿಸಿ ಅತ್ಯಂತ ಸರಳವಾಗಿ ಜರುಗಿತು.
ಕ್ರೂರಿ ಕೊರೋನಾ ಅಟ್ಟಹಾಸಕ್ಕೆ ಮೂರು ಹೆಣ್ಣು ಮಕ್ಕಳು ಅನಾಥ..!
ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಪಿ. ರಾಜೀವ್, ಸ್ಥಳೀಯ ಬಿಜೆಪಿ ಮುಖಂಡ ಎಂ.ಪಿ. ನಾಯ್ಕ, ಮತ್ತು ಡಿವೈಎಸ್ಪಿ ಮಲ್ಲೇಶ ದೊಡ್ಮನಿ, ಪೇದೆ ಮಲ್ಲೇಶನಾಯ್ಕ ಹಾಜರಿದ್ದು ವಧು- ವರರಿಗೆ ಶುಭಕೋರಿದರು.