ಡಿಸಿ ಎಂ.ಜಿ. ಹಿರೇಮಠ ಆದೇಶ| ಕರ್ತವ್ಯ ನಿರತ ಅಧಿಕಾರಿ ಹೊರತು ಪಡಿಸಿ ಜನರಿಗೆ ಅವಕಾಶವಿಲ್ಲ| ಬಫರ್‌ಝೋನ್‌ನ ಮೊದಲ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ತೀವ್ರ ಬಫರ್‌ಝೋನ್ ಇರಲಿದ್ದು ಅಲ್ಲಿ ಪ್ರತಿ ಮನೆ ಮನೆಗಳಲ್ಲೂ ಆರೋಗ್ಯ ತಪಾಸಣೆ|
ಗದಗ(ಜೂ.25): ಕೋವಿಡ್-19 ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸದ್ಯ ಜಿಲ್ಲೆಯ 4 ಪ್ರದೇಶಗಳು ನಿಯಂತ್ರಿತ ಪ್ರದೇಶಗಳಾಗಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶಿಸಿದ್ದಾರೆ. ಗದಗ-ಬೆಟಗೇರಿ ನಗರಸಭೆಯ ವಾರ್ಡ್ ನಂ. 1ರ ಎಸ್.ಎಂ. ಕೃಷ್ಣಾ ನಗರದಲ್ಲಿ ಕೊರೋನಾ ಪಾಸಿಟಿವ್ ಆಗಿರುವ ವ್ಯಕ್ತಿಯ ಮನೆಯ ಸುತ್ತ 100 ಮೀ. ಪ್ರದೇಶವನ್ನು ನಿಯಂತ್ರಿತ ಎಂದು ಗುರುತಿಸಿ, ಸುತ್ತಲಿನ 5 ಕಿ.ಮೀ. ವ್ಯಾಪ್ತಿಯ ಸುತ್ತಳೆಯ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಲಾಗಿದೆ, ನಗರಸಭೆಯ ಕಿರಿಯ ಅಭಿಯಂತರ ಎಚ್.ಎ. ಬಂಡಿವಡ್ಡರ ಅವರನ್ನು ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ.
ರೋಣ ತಾಲೂಕಿನ ಕುರಡಗಿ ಗ್ರಾಮದ ವಾರ್ಡ್ ನಂ. 2ರ 100 ಮೀಟರ್ ಸುತ್ತಲಿನ ಪ್ರದೇಶವನ್ನು ನಿಯಂತ್ರಿತ ಪ್ರದೇಶ ಎಂದು ಮತ್ತು ಆ ಪ್ರದೇಶದ ವ್ಯಾಪ್ತಿಯ ಸುತ್ತಲಿನ 7 ಕಿಮೀ ವ್ಯಾಪ್ತಿಯ ಸುತ್ತಳೆಯ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಿ, ರೋಣ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷಕುಮಾರ್ ಪಾಟೀಲ ಅವರನ್ನು ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ.
undefined
ಕೇಂದ್ರ- ರಾಜ್ಯ ಸರ್ಕಾರದ ನಡೆಗೆ ಖಂಡನೆ: ಕಳಸಾ ಬಂಡೂರಿ ಹೋರಾಟಗಾರರ ಆಕ್ರೋಶ
ಶಿರಹಟ್ಟಿ ಪಪಂ ವ್ಯಾಪ್ತಿಯ ವಾರ್ಡ್ ನಂ. 6ರ ಮಟ್ಟಿಭಾವಿ ಪ್ಲಾಟ್, ಆಝಾದ್ ಕಾಲನಿ ಭಾಗದ 100 ಮೀಟರ್ ಸುತ್ತಲಿನ ವ್ಯಾಪ್ತಿಯನ್ನು ನಿಯಂತ್ರಿತ ಪ್ರದೇಶವೆಂದು ಘೋಷಿಸಿ, ಪ್ರದೇಶ ವ್ಯಾಪ್ತಿಯ ಸುತ್ತಲಿನ 5 ಕಿ.ಮೀ. ವ್ಯಾಪ್ತಿಯ ಸುತ್ತಳತೆಯ ಬಫರ್ ಝೋನ್ ಎಂದು ಘೋಷಿಸಿ ಶಿರಹಟ್ಟಿತಹಸೀಲ್ದಾರ ಯಲ್ಲಪ್ಪ ಗೋಣೆಣ್ಣವರ ಅವರನ್ನು ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ.
ಶಿರಹಟ್ಟಿ ತಾಲೂಕಿನ ಮಜ್ಜೂರ ಗ್ರಾಪಂ ವ್ಯಾಪ್ತಿಯ ವಾರ್ಡ್ ನಂ. 1 ಶಿವಾಜಿನಗರ ಭಾಗದ 100 ಮೀಟರ್ ಸುತ್ತಲಿನ ಪ್ರದೇಶವನ್ನು ನಿಯಂತ್ರಿತ ಪ್ರದೇಶವೆಂದು ಘೋಷಿಸಿ ಹಾಗೂ ಪ್ರದೇಶ ವ್ಯಾಪ್ತಿಯ ಸುತ್ತಲಿನ 7 ಕಿ.ಮೀ. ವ್ಯಾಪ್ತಿಯ ಸುತ್ತಳತೆಯ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಿ ಶಿರಹಟ್ಟಿತಾಪಂ ಕಾರ್ಯನಿರ್ವಾಹಕ ಅಧಿಕಾರಿ ನಿಂಗಪ್ಪ ಓಲೇಕಾರ್ ಅವರನ್ನು ಇನ್ಸಿಡೆಂಟ್ ಕಮಾಂಡರ್ ಎಂದು ನೇಮಿಸಲಾಗಿದೆ.
ನಿಯಂತ್ರಿತ ಪ್ರದೇಶದಿಂದ ಇತರೆ ಪ್ರದೇಶಗಳಿಗೆ ಅಥವಾ ಇತರೆ ಪ್ರದೇಶಗಳಿಂದ ನಿಯಂತ್ರಿತ ಪ್ರದೇಶಕ್ಕೆ ಕರ್ತವ್ಯನಿರತ ಅಧಿಕಾರಿ ಸಿಬ್ಬಂದಿ ಹೊರತುಪಡಿಸಿ ಜನರ ಪ್ರವೇಶವನ್ನು ನಿರ್ಬಂಧಿಸಿದೆ. ಬಫರ್‌ಝೋನ್‌ನ ಮೊದಲ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ತೀವ್ರ ಬಫರ್‌ಝೋನ್ ಇರಲಿದ್ದು ಅಲ್ಲಿ ಪ್ರತಿ ಮನೆ ಮನೆಗಳಲ್ಲೂ ಆರೋಗ್ಯ ತಪಾಸಣೆ ನಡೆಸಲಾಗುವುದು. ನಿಯಂತ್ರಿತ ವಲಯಗಳಲ್ಲಿ ಎಲ್ಲ ದಿನಸಿ ಅಂಗಡಿಗಳು, ಹಾಲಿನ ಅಂಗಡಿಗಳು, ಮಾಂಸ, ಔಷಧ ಸೇರಿದಂತೆ ಎಲ್ಲ ಅಂಗಡಿಗಳನ್ನು ಕಡ್ಡಾಯವಾಗಿ ಬಂದ್ ಮಾಡಬೇಕು. ನಿಯಂತ್ರಿತ ವ್ಯಾಪ್ತಿ ಪ್ರದೇಶಗಳಲ್ಲಿ ಧಾರ್ಮಿಕ ಉರುಸು, ಜಾತ್ರೆ, ಮೆರವಣಿಗೆ, ಜನ ಗುಂಪು ಸೇರುವಿಕೆ, ಸಭೆ ಅಥವಾ ಮದುವೆ ಸಮಾರಂಭಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಅಗತ್ಯ ವಸ್ತುಗಳ ಪೂರೈಕೆಯನ್ನು ಸಂಬಂಧಿತ ಇಲಾಖೆಗಳ ಮೂಲಕವೇ ಪಡೆಯಬೇಕು. ಖಾಸಗಿ ಮೂಲಗಳಿಗೆ ಅವಕಾಶವಿಲ್ಲ. ಈ ಪ್ರದೇಶಗಳ ಜನರು ಮನೆ ಬಿಟ್ಟು ಹೊರಗೆ ಅಡ್ಡಾಡುವುದನ್ನು ನಿಷೇಧಿಸಲಾಗಿದೆ. ಈ ಪ್ರದೇಶಗಳ ಎಲ್ಲ ಶಾಲಾ, ಕಾಲೇಜು, ಕಚೇರಿಗಳನ್ನು ಮುಚ್ಚಲು, ಜನಗುಂಪು ಸೇರುವಿಕೆ, ಕರ್ತವ್ಯ ನಿರತ ವಾಹನ ಹೊರತುಪಡಿಸಿ ವಾಹನ ಸಂಚಾರವನ್ನು ನಿರ್ಬಂಧಿಸಿದೆ.
ನಿಯಂತ್ರಿತ ವಲಯ ಎಂದು ಘೋಷಣೆ ಮಾಡಿದ 28 ದಿನಗಳವರೆಗೆ ಯಾವುದೇ ಹೊಸ ಕೋವಿಡ್-19 ಪ್ರಕರಣ ವರದಿಯಾಗದೇ ಇದ್ದಲ್ಲಿ ಅಥವಾ ಆ ನಿಯಂತ್ರಿತ ವಲಯದಲ್ಲಿ ಹತ್ತಕ್ಕಿಂತ ಕಡಿಮೆ ಸಂಪರ್ಕಗಳು/ ಗೃಹ ದಿಗ್ಬಂಧನದಲ್ಲಿ ಸಕ್ರಿಯವಾಗಿದ್ದರೆ ಆಗ ಆ ನಿಯಂತ್ರಿತ ವಲಯವು ಸಾಮಾನ್ಯ ವಲಯವಾಗಿ ಮತ್ತು ಬಫರ್ ಝೋನ್ ಸಾಮಾನ್ಯ ವಲಯವಾಗಿ ಬದಲಾಗುತ್ತದೆ ಎಂದು ಗದಗ ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿರುತ್ತಾರೆ.