ರಾಯಚೂರು: ಶಾಲೆಯ ನೀರಿನ ಟ್ಯಾಂಕ್‌ನಲ್ಲಿ ನಾಗರ ಹಾವು ಪ್ರತ್ಯಕ್ಷ, ಕಕ್ಕಾಬಿಕ್ಕಿಯಾದ ವಿದ್ಯಾರ್ಥಿಗಳು..!

By Girish Goudar  |  First Published Dec 1, 2022, 10:55 AM IST

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬುದ್ದಿನ್ನಿ ಎಸ್ ಗ್ರಾಮದಲ್ಲಿ ನಡೆದ ಘಟನೆ, ಹಾವು ಕಂಡು ಭಯಭೀತರಾದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು 


ರಾಯಚೂರು(ಡಿ.01):  ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್‌ನಲ್ಲಿ ನಾಗರ ಹಾವು ಪ್ರತ್ಯಕ್ಷವಾದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬುದ್ದಿನ್ನಿ ಎಸ್ ಗ್ರಾಮದಲ್ಲಿ ಇಂದು(ಗುರುವಾರ) ನಡೆದಿದೆ. ನೀರಿನ ಟ್ಯಾಂಕ್‌ನಲ್ಲಿ ಹಾವು ಕಂಡು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಯಭೀತರಾಗಿದ್ದರು. 

ಬುದ್ದಿನ್ನಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿದ್ದ ನಾಗರಹಾವನ್ನು ಊರಗತಜ್ಞ ಶಾಂತಯ್ಯಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿದ್ದಾರೆ. 

Tap to resize

Latest Videos

ಸಿಂಧನೂರು: ಮದ್ಯಪಾನಕ್ಕೆ ಅವಕಾಶ ನೀಡದಿದ್ದಕ್ಕೆ ಪಿಸ್ತೂಲ್‌ನಿಂದ ಫೈರ್‌, ವ್ಯಕ್ತಿ ಬಂಧನ

ನೀರಿನ ಟ್ಯಾಂಕ್‌ನಲ್ಲಿದ್ದ ನಾಗರಹಾವು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ ಊರಗತಜ್ಞ ಶಾಂತಯ್ಯಸ್ವಾಮಿ. ನಾಗರಹಾವು ರಕ್ಷಣೆಯಿಂದ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ನಿಟ್ಟುಸಿರು ಬಿಟ್ಟಿದ್ದಾರೆ. 
 

click me!