ಮಾಸ್ಕ್‌ ಧರಿಸದೇ ಟ್ರೈನಿಂಗ್‌: ಸಾಫ್ಟ್‌ವೇರ್‌ ತರಬೇತಿ ಸಂಸ್ಥೆ ಸ್ಥಗಿತ

By Kannadaprabha News  |  First Published Apr 4, 2021, 8:10 AM IST

ಮೂವರು ವಿದ್ಯಾರ್ಥಿಗಳಿಗೆ ಬಿಬಿಎಂಪಿ ದಂಡ| ಕೋವಿಡ್‌ ನಿಯಮ ಪಾಲನೆ ಮಾಡಿದ ಸಂಸ್ಥೆ ಆಡಳಿತ ಮಂಡಳಿಗೆ ನೋಟಿಸ್‌| ಮುಂದಿನ ಆದೇಶದ ವರೆಗೆ ಸಂಸ್ಥೆಯ ಶೈಕ್ಷಣಿಕ ಚಟುವಟಿಕೆ ಸ್ಥಗಿತಗೊಳಿಸಲು ಸೂಚನೆ| ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸೇರಿ 40 ಮಂದಿಗೆ ಆರ್‌ಟಿಪಿಸಿಆರ್‌ ಪರೀಕ್ಷೆ| 


ಬೆಂಗಳೂರು(ಏ.04): ಮಾಸ್ಕ್‌, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್‌ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ರಾಜಾಜಿನಗರ 3ನೇ ಬ್ಲಾಕ್‌ನಲ್ಲಿರುವ ಕ್ಯೂಸ್ಪೈಡರ್‌ ಸಾಫ್ಟ್‌ವೇರ್‌ ತರಬೇತಿ ಸಂಸ್ಥೆಯನ್ನು ಸ್ಥಗಿತಗೊಳಿಸಲು ಬಿಬಿಎಂಪಿ ಆದೇಶಿಸಿದೆ.

ಕೋವಿಡ್‌ ನಿಯಮ ಉಲ್ಲಂಘಿಸಿ ಸಂಸ್ಥೆಯು ಶೈಕ್ಷಣಿಕ ತರಗತಿಗಳನ್ನು ನಡೆಸುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಶನಿವಾರ ಆರೋಗ್ಯ ವೈದ್ಯಾಧಿಕಾರಿ ಮಂಜುಳಾ ಅವರ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿತು. ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್‌ ಧರಿಸದೆ ಕೋವಿಡ್‌ ನಿಯಮ ಉಲ್ಲಂಘಿಸುತ್ತಿರುವುದು ಕಂಡು ಬಂದ ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸಿದ ಮೂರು ವಿದ್ಯಾರ್ಥಿಗಳಿಗೆ 750 ದಂಡ ವಿಧಿಸಲಾಯಿತು.

Latest Videos

undefined

ಕೊರೋನಾ ಕಾಟ: ಬೆಂಗ್ಳೂರಲ್ಲಿ ಸತತ 2ನೇ ದಿನವೂ 3000+ ಕೇಸ್‌..!

ಕೋವಿಡ್‌ ನಿಯಮ ಪಾಲನೆ ಮಾಡಿದ ಸಂಸ್ಥೆ ಆಡಳಿತ ಮಂಡಳಿಗೆ ಅಧಿಕಾರಿಗಳು ನೋಟಿಸ್‌ ನೀಡಿದ್ದು, ಮುಂದಿನ ಆದೇಶದ ವರೆಗೆ ಸಂಸ್ಥೆಯ ಶೈಕ್ಷಣಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ಸೂಚನೆ ನೀಡಿದರು. ಜೊತೆಗೆ ಮೊಬೈಲ್‌ ಯೂನಿಟ್‌ ಮೂಲಕ ಸ್ಥಳದಲ್ಲಿದ್ದ ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸೇರಿ 40 ಮಂದಿಗೆ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಲಾಯಿತು.
 

click me!