ನ.11ರ ಉದ್ದೇಶಿತ ಕೆಂಪೇಗೌಡ ಪ್ರತಿಮೆ ಉದ್ಘಾಟನೆಯ ಭಾಗವಾಗಿ ನಡೆಯುತ್ತಿರುವ ಪವಿತ್ರ ಮೃತ್ತಿಕಾ ಸಂಗ್ರಹಣಾ ಅಭಿಯಾನವು ತಲಕಾಡು ಗಂಗರ ಅಪ್ರತಿಮ ರಾಜನಾದ ಶ್ರೀಪುರುಷನ ಸಮಾಧಿ ಇರುವ ಟಿ.ನರಸೀಪುರ ತಾಲ್ಲೂಕಿನ ಮುಡುಕುತೊರೆಯಲ್ಲಿ ಮಂಗಳವಾರ ನಡೆಯಲಿದೆ ಎಂದು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಬೆಂಗಳೂರು (ಅ.31): ನ.11ರ ಉದ್ದೇಶಿತ ಕೆಂಪೇಗೌಡ ಪ್ರತಿಮೆ ಉದ್ಘಾಟನೆಯ ಭಾಗವಾಗಿ ನಡೆಯುತ್ತಿರುವ ಪವಿತ್ರ ಮೃತ್ತಿಕಾ ಸಂಗ್ರಹಣಾ ಅಭಿಯಾನವು ತಲಕಾಡು ಗಂಗರ ಅಪ್ರತಿಮ ರಾಜನಾದ ಶ್ರೀಪುರುಷನ ಸಮಾಧಿ ಇರುವ ಟಿ.ನರಸೀಪುರ ತಾಲ್ಲೂಕಿನ ಮುಡುಕುತೊರೆಯಲ್ಲಿ ಮಂಗಳವಾರ ನಡೆಯಲಿದೆ ಎಂದು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಕಾರ್ಯಕ್ರಮದಲ್ಲಿ ಮೈಸೂರು ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಚಾಮರಾಜನಗರ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಂಸದ ಪ್ರತಾಪ ಸಿಂಹ ಭಾಗವಹಿಸಲಿದ್ದಾರೆ ಎಂದಿದ್ದಾರೆ.
8ನೇ ಶತಮಾನದಲ್ಲಿ 62 ವರ್ಷಗಳ ಕಾಲ ವೈಭವದ ಆಳ್ವಿಕೆ ನಡೆಸಿದ ಶ್ರೀಪುರುಷನು ಸೇನಾಚತುರನಾಗಿದ್ದ. ಕಂಚಿಯ ಪಲ್ಲವರು ಮತ್ತು ಮಾನ್ಯಖೇಟದ ರಾಷ್ಟ್ರಕೂಟರ ವಿರುದ್ಧ ಗಳಿಸಿದ ಜಯಗಳು ಗಂಗ ವಂಶದ ಚರಿತ್ರೆಯಲ್ಲಿ ಅವಿಸ್ಮರಣೀಯವಾಗಿವೆ ಎಂದು ಅವರು ಸ್ಮರಿಸಿದ್ದಾರೆ. ಮೃತ್ತಿಕಾ ಸಂಗ್ರಹಣಾದ ಭಾಗವಾಗಿ ನಾಡಪ್ರಭು ಕೆಂಪೇಗೌಡ ರಥಕ್ಕೆ ಪೂರ್ಣಕುಂಭ ಸ್ವಾಗತ ಮತ್ತಿತರ ವಿಧಿ ವಿಧಾನಗಳು ನೆರವೇರಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
2023ರ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆಲ್ಲುತ್ತೆ: ಸಚಿವ ಅಶ್ವತ್ಥ್
ಮೃತ್ತಿಕೆ ಸಂಗ್ರಹ ಅಭಿಯಾನ ವಾಹನಗಳಿಗೆ ಚಾಲನೆ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಆವರಣದ ಉದ್ಯಾನಕ್ಕೆ ಪವಿತ್ರ ಮೃತ್ತಿಕಾ (ಮಣ್ಣು) ಬಳಸುವ ಉದ್ದೆಶದಿಂದ ಮೈಸೂರಿಗೆ ಆಗಮಿಸಿದ ಕೆಂಪೇಗೌಡ ರಥಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಚಾಮುಂಡೇಶ್ವರಿ ದೇವಸ್ಥಾನ ಆವರಣದಲ್ಲಿ ಚಾಲನೆ ನೀಡಿದರು.
ಬನ್ನಿ ನಾಡ ಕಟ್ಟೋಣ ಎಂಬ ಸಂದೇಶ ಹೊತ್ತು ಬಂದ ರಥವನ್ನು ಚಾಮುಂಡಿ ಬೆಟ್ಟದಲ್ಲಿ ಪೂರ್ಣ ಕುಂಬದೊಂದಿಗೆ ಸ್ವಾಗತಿಸಲಾಯಿತು. ಈ ವೇಳೆ ಮಾತನಾಡಿದ ಸಚಿವರು, ಕೆಂಪೇಗೌಡ ಅವರ 108 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನ. 11ರಂದು ಅನಾವರಣಗೊಳಿಸಲಿದ್ದಾರೆ. ಉದ್ಯಾನಕ್ಕೆ ಜಿಲ್ಲೆಯ ನಾನಾ ಭಾಗಗಳಿಂದ ಪವಿತ್ರ ಮಣ್ಣು ಸಂಗ್ರಹಿಸಲಾಗುತ್ತದೆ. ಇದೊಂದು ಐತಿಹಾಸಿಕ ಕಾರ್ಯಕ್ರಮ ಎಂದರು.
ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ: ಕಾರ‍್ಯಕ್ರಮ ಸಿದ್ಧತೆ ಪರಿಶೀಲಿಸಿದ ಸಚಿವರು
ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ. ರಾಮದಾಸ್, ಎಲ್. ನಾಗೇಂದ್ರ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ. ಶಿವಕುಮಾರ್, ಜಿಪಂ ಸಿಇಒ ಬಿ.ಆರ್. ಪೂರ್ಣಿಮಾ, ಬಿಜೆಪಿ ಮುಖಂಡರಾದ ಗಿರಿಧರ್, ಅರುಣ್‌ಕುಮಾರ್ ಗೌಡ, ಚಾಮುಂಡಿಬೆಟ್ಟದೇಗುಲದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಮೊದಲಾದವರು ಇದ್ದರು.