ಕಾಡಾನೆ ಸಮಸ್ಯೆ ನಿವಾರಣೆ, ಹೆದ್ದಾರಿಗೆ ಶಾಶ್ವತ ಪರಿಹಾರ: ಶಾಸಕ ಸಿಮೆಂಟ್ ಮಂಜು

By Kannadaprabha NewsFirst Published May 31, 2023, 1:09 AM IST
Highlights

ನಾನು ಹೊಸದಾಗಿ ಶಾಸಕನಾಗಿ ಆಯ್ಕೆಯಾಗಿದ್ದು, ನನ್ನ 5 ವರ್ಷದ ಅವ​ಧಿಯಲ್ಲಿ ಆನೆ ಸಮಸ್ಯೆ ನಿವಾರಣೆ ಮಾಡಲು ಪ್ರಾಮಾಣಿಕವಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇನ್ನು ರಾಷ್ಟ್ರೀಯ ಹೆದ್ದಾರಿ-75 ರಸ್ತೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್‌ ಮಂಜು ಭರವಸೆ ನೀಡಿದರು.

ಹಾಸನ (ಮೇ.31) : ನಾನು ಹೊಸದಾಗಿ ಶಾಸಕನಾಗಿ ಆಯ್ಕೆಯಾಗಿದ್ದು, ನನ್ನ 5 ವರ್ಷದ ಅವ​ಧಿಯಲ್ಲಿ ಆನೆ ಸಮಸ್ಯೆ ನಿವಾರಣೆ ಮಾಡಲು ಪ್ರಾಮಾಣಿಕವಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇನ್ನು ರಾಷ್ಟ್ರೀಯ ಹೆದ್ದಾರಿ-75 ರಸ್ತೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್‌ ಮಂಜು ಭರವಸೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಕಲೇಶಪುರ ಮತ್ತು ಸುತ್ತ ಮುತ್ತ ಭಾಗದ ಪ್ರಮುಖ ಸಮಸ್ಯೆಯಾದ ಕಾಡಾನೆ ಹಾವಳಿ ನಿಯಂತ್ರಣಕ ೂ್ಕ ಎಲ್ಲರ ಸಹಕಾರದಿಂದ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯಪ್ರವೃತ್ತರಾಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆನೇಕಲ್: ಹಸು ಮೇಯಿಸುತ್ತಿದ್ದ ವೇಳೆ ಕಾಡಾನೆ ದಾಳಿ, ಸ್ಥಳದಲ್ಲೇ ಮಹಿಳೆ ಸಾವು

ಸಕಲೇಶಪುರ ತಾಲೂಕಿನಲ್ಲಿರುವ ದೋಣಿಗಲ್‌ ಸಮೀಪ ಮುಖ್ಯ ಹೆದ್ದಾರಿ ಆಗಾಗ್ಗೆ ಕುಸಿದು ಸಮಸ್ಯೆ ಆಗುತ್ತಿದೆ. ಜೂ.1 ರಿಂದ ಮಳೆಗಾಲ ಆರಂಭವಾಗುವುದರಿಂದ, ಇನ್ನು 15 ದಿನಗಳಲ್ಲಿ ಅ​ಧಿಕಾರಿಗಳ ತಂಡ ಆಗಮಿಸಿ ಪರಿಶೀಲಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಹಾಗೂ ಭೂ ಕುಸಿತದ ಬಗ್ಗೆ ಅತೀ ಶೀಘ್ರವಾಗಿ ಕೇಂದ್ರ ಸಚಿವ ಹಾಗೂ ಅ​ಧಿಕಾರಿಗಳನ್ನು ಭೇಟಿ ಮಾಡಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದರು.

ಸಂಸದ ಪ್ರತಾಪ್‌ ಸಿಂಹ ಅವರ ಸಹಾಯದೊಂದಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾ​ಧಿಕಾರದ ಸಚಿವರು ಹಾಗೂ ಅ​ಧಿಕಾರಿಗಳನ್ನು ಈಗಾಗಲೇ ಸಂಪರ್ಕಿಸಲಾಗಿದೆ. ಅತೀ ಶೀಘ್ರವಾಗಿ ಭೇಟಿ ನೀಡುವುದಾಗಿ ಕೇಂದ್ರ ನಾಯಕರು ತಿಳಿಸಿದ್ದಾರೆ. ಹಾಸನ-ಮಂಗಳೂರು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿರುವ ಶಿರಾಡಿ ಘಾಟ್‌ ರಸ್ತೆಯನ್ನು ಬಂದ್‌ ಮಾಡಲು ಬಿಡುವುದಿಲ್ಲ. ಒಂದು ಬದಿಯ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟು ಮತ್ತೊಂದು ಬದಿಯ ರಸ್ತೆ ಕಾಮಗಾರಿಗೆ ಕ್ರಮ ವಹಿಸಲಾಗುವುದು. ಮಳೆಗಾಲದಲ್ಲಿ ಮತ್ತೆ ಭೂ ಕುಸಿತ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಲಿದ್ದು, ಈ ಬಗ್ಗೆ ಸರಕಾರದ ಗಮನಕ್ಕೆ ತಂದು ಶೀಘ್ರವೇ ಸಮಸ್ಯೆ ಬಗೆ ಹರಿಸಲಾಗುವುದು ಎಂದು ಭರವಸೆ ನೀಡಿದರು.

ಅಲ್ಲದೆ ಕ್ಷೇತ್ರದ ಆಸ್ಪತ್ರೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಅಗತ್ಯ ಇರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ, ಅಗತ್ಯ ಇರುವ ಸಿಬ್ಬಂದಿಗಳ ನೇಮಕ ಮಾಡಲು ಯೋಜನೆ ರೂಪಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರ ಕ್ಷೇಮಾಭಿವೃದ್ಧಿಗೆ ಶ್ರಮ ವಹಿಸಲಾಗುವುದು ಎಂದರು.

Kodagu: ಆಹಾರ ಅರಸಿ ಬಂದ 10 ತಿಂಗಳ ಗರ್ಭಿಣಿ ಕಾಡಾನೆಯನ್ನು ಗುಂಡಿಕ್ಕಿ ಕೊಂದ ಕಿರಾತಕರು!

click me!