ಪ್ರಸಕ್ತ ಜನಸಂಖ್ಯೆ ಆಧಾರದ ಮೇಲೆ ಒಕ್ಕಲಿಗ ಸಮುದಾಯಕ್ಕೆ ನೀಡಲಾಗಿರುವ ಮೀಸಲಾತಿಯನ್ನು ಶೇ.4ರಿಂದ ಶೇ.15ಕ್ಕೆ ಮೀಸಲಾತಿ ನೀಡಬೇಕು| ಒಕ್ಕಲಿಗ ಅಭಿವೃದ್ಧಿ ಪ್ರಾಧಿಕಾರ ರಚನೆಗಾಗಿ ಸರ್ಕಾರದ ಮೇಲೆ ಒತ್ತಡ ತರಲು ಒಕ್ಕಲಿಗರ ಸಂಘದ ಸಭೆಯಲ್ಲಿ ನಿರ್ಣಯ: ಸೋಮೇಶ್ವರನಾಥ ಶ್ರೀ|
ಮೈಸೂರು(ಡಿ.07): ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸದಿದ್ದರೆ ಪ್ರತ್ಯೇಕ ರಾಜ್ಯ ಕೇಳಬೇಕಾಗುತ್ತದೆ ಎಂದು ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಎಚ್ಚರಿಸಿದ್ದಾರೆ.
ನಗರದ ಬೋಗಾದಿಯ ಆದಿಚುಂಚನಗಿರಿ ಶಾಖಾ ಮಠದಲ್ಲಿ ಭಾನುವಾರ ನಡೆದ ಒಕ್ಕಲಿಗರ ಸಭೆಯಲ್ಲಿ ಮಾತನಾಡಿ, ಒಕ್ಕಲಿಗರಿಗೆ ಮೀಸಲಾತಿ ನೀಡದೆ ತುಳಿದರೆ ನಮ್ಮ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯ ಕೇಳಬೇಕಾಗುತ್ತದೆ. ಮೈಸೂರು, ಮಂಡ್ಯ, ಹಾಸನ, ಬೆಂಗಳೂರು ಭಾಗದಲ್ಲಿ ಒಕ್ಕಲಿಗ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದರು.
ಸರ್ಕಾರಕ್ಕೆ ಒಕ್ಕಲಿಗ ಸಮಾಜದವರಿಂದಲೇ ಶೇ.60ರಷ್ಟುಆದಾಯ ಬರುತ್ತಿದೆ. ಮೈಸೂರು ಮತ್ತು ಬೆಂಗಳೂರು ಅಭಿವೃದ್ಧಿ ಹೊಂದಲು ಒಕ್ಕಲಿಗ ಸಮುದಾಯದವರು ತಮ್ಮ ಜಮೀನು ನೀಡಿದ್ದಾರೆ. ಇಷ್ಟೆಲ್ಲಾ ಇದ್ದರೂ ಶೇ.4 ಮೀಸಲಾತಿ ನೀಡಿರುವುದು ಸರಿಯಲ್ಲ ಎಂದರು.
undefined
ಒಕ್ಕಲಿಗರ ನಿಗಮ ರಚನೆಗೆ ನನ್ನ ಬೆಂಬಲ: ಡಿಸಿಎಂ ಅಶ್ವತ್ಥ್ ನಾರಾಯಣ್
ಮೀಸಲಾತಿ ಶೇ.15ಕ್ಕೆ ಹೆಚ್ಚಿಸಲು ಆಗ್ರಹಿಸಿ ಸಭೆ ನಿರ್ಣಯ
ಪ್ರಸಕ್ತ ಜನಸಂಖ್ಯೆ ಆಧಾರದ ಮೇಲೆ ಒಕ್ಕಲಿಗ ಸಮುದಾಯಕ್ಕೆ ನೀಡಲಾಗಿರುವ ಮೀಸಲಾತಿಯನ್ನು ಶೇ.4ರಿಂದ ಶೇ.15ಕ್ಕೆ ಮೀಸಲಾತಿ ನೀಡಬೇಕು, ಒಕ್ಕಲಿಗ ಅಭಿವೃದ್ಧಿ ಪ್ರಾಧಿಕಾರ ರಚನೆಗಾಗಿ ಸರ್ಕಾರದ ಮೇಲೆ ಒತ್ತಡ ತರಲು ಮೈಸೂರಲ್ಲಿ ನಡೆದ ಒಕ್ಕಲಿಗರ ಸಂಘದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.