ರಾಯ​ಚೂರು ಜಿಲ್ಲೆಯಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆ ಪ್ರಸ್ತಾವಕ್ಕೆ ಕೇಂದ್ರದಿಂದ ಶೀಘ್ರ ಅನುಮತಿ, ಬೋಸರಾಜು

By Kannadaprabha NewsFirst Published Aug 4, 2023, 11:00 PM IST
Highlights

ಹಿಂದುಳಿದ ಜಿಲ್ಲೆಗಳಾಗಿರುವ ಕಲ್ಯಾಣ ಕರ್ನಾಟಕದ ಯಾದಗಿರಿ ಮತ್ತು ರಾಯಚೂರು ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸಲ್ಲಿಸಿರುವ ಪ್ರಸ್ತಾಪಗಳಿಗೆ ಶೀಘ್ರ ಒಪ್ಪಿಗೆ ನೀಡುವಂತೆ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. 

ರಾಯ​ಚೂರು(ಆ.04):  ರಾಯ​ಚೂರು ಜಿಲ್ಲೆಯಲ್ಲಿ 22.25 ಕೋಟಿ ವೆಚ್ಚದಲ್ಲಿ ಕೆಟಗರಿ 2, ಟೈಪ್‌ ಬಿ ವಿಜ್ಞಾನ ಕೇಂದ್ರ ಸ್ಥಾಪನೆ ಪ್ರಸ್ತಾಪವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಇದಕ್ಕೆ ಶೀಘ್ರದಲ್ಲಿ ಒಪ್ಪಿಗೆ ನೀಡುವ ಭರವಸೆ ಕೇಂದ್ರ ಸಚಿವರು ನೀಡಿದ್ದಾರೆ ಎಂದು ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌ ಬೋಸರಾಜು ತಿಳಿಸಿದರು.

ಗುರು​ವಾರ ನವ​ದೆ​ಯ​ಲಿ​ಯಲ್ಲಿ ಕೇಂದ್ರ ಪ್ರವಾಸೋದ್ಯಮ, ಸಂಸ್ಕೃತಿ ಸಚಿವ ಜಿ.ಕಿಶನ್‌ ರೆಡ್ಡಿ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಭಗವಂತ ಖುಬಾ ಹಾಗೂ ಇಲಾಖೆಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ನಂತರ ಮಾತನಾಡಿದರು. ಹಿಂದುಳಿದ ಜಿಲ್ಲೆಗಳಾಗಿರುವ ಕಲ್ಯಾಣ ಕರ್ನಾಟಕದ ಯಾದಗಿರಿ ಮತ್ತು ರಾಯಚೂರು ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸಲ್ಲಿಸಿರುವ ಪ್ರಸ್ತಾಪಗಳಿಗೆ ಶೀಘ್ರ ಒಪ್ಪಿಗೆ ನೀಡುವಂತೆ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ 22.25 ಕೋಟಿ ರುಪಾಯಿಗಳ ಅನುದಾನದಲ್ಲಿ ಕೆಟಗರಿ-3, ಟೈಪ್‌-ಬಿ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲು ಅಗತ್ಯವಿರುವ ಶೇ.50 ರಷ್ಟು ಅನುದಾನ ರಾಜ್ಯ ಸರ್ಕಾರ ಭರಿಸುವ ಒಪ್ಪಿಗೆಯನ್ನು ನೀಡಿದೆ. ಕೇಂದ್ರ ಸ್ಥಾಪನೆಗೆ ನ್ಯಾಷನಲ್‌ ಕೌನ್ಸಿಲ್‌ ಆಫ್‌ ಸೈನ್ಸ್‌ ಮ್ಯೂಸಿಯಂ ಎತ್ತಿದ್ದಂತಹ ಪ್ರಶ್ನೆಗಳಿಗೆ ಉತ್ತರವನ್ನು ನೀಡಲಾಗಿದೆ. ಕೇಂದ್ರ ಸ್ಥಾಪನೆಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ರಾಜ್ಯ ಸರ್ಕಾರ ನೀಡಲು ಸಿದ್ಧವಿದೆ ಎಂದರು.

BIG3:ಗರ್ಭಿಣಿಯರು, ನವಜಾತ ಶಿಶುಗಳ ಅಪೌಷ್ಠಿಕತೆ ನಿವಾರಿಸುವ ಜಿಲ್ಲಾಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳೇ ಇಲ್ಲ

ಏಮ್ಸ್‌ಗಾಗಿ ಕೇಂದ್ರ ಸಚಿವರಿಗೆ ಮನವಿ:

ರಾಯಚೂರಿಗೆ ಬಹು ಅವಶ್ಯವಿರುವ ಏಮ್ಸ್‌ ಮಂಜೂರಾತಿ ಪ್ರಕ್ರಿಯೆಯನ್ನ ಚುರುಕುಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರಕ್ಕೆ ಒತ್ತಡ ಹೇರುವಂತೆ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಕಲ್ಯಾಣ ಕರ್ನಾಟಕ ಜಿಲ್ಲೆಗಳನ್ನ ಪ್ರತಿನಿಧಿಸುವ ಸಚಿವ ಭಗವಂತ ಖೂಬಾ ಅವರನ್ನ ಭೇಟಿಯಾಗಿ, ರಾಯಚೂರಿನಲ್ಲಿ ಏಮ್ಸ್‌ ನ ಅವಶ್ಯಕತೆಯ ಬಗ್ಗೆ ಮನವರಿಕೆ ಮಾಡಿಕೊಡಲಾಯಿತು. ಈ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಮನ್ಸೂಖ್‌ ಮಂಡವಿಯಾ ಅವರಿಗೆ ಪತ್ರವನ್ನು ಬರೆದಿದ್ದಾರೆ. ಈ ಭಾಗದ ಜನರ ಚಿಕಿತ್ಸೆಗಾಗಿ ಏಮ್ಸ್‌ ಅವಶ್ಯಕತೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮನವೊಲಿಸಬೇಕು ಎಂದು ಸಚಿವರು ಕೇಂದ್ರ ಸಚಿವರಿಗೆ ಮನವಿ ಮಾಡಲಾ​ಗಿದೆ ಎಂದರು. ಈ ಸಂದರ್ಭದಲ್ಲಿ ರಾಯಚೂರು ಸಂಸದ ರಾಜಾ ಅಮರೇಶ್‌ ನಾಯಕ್‌ ಉಪಸ್ಥಿತರಿದ್ದರು.

click me!