‘ಶೀಘ್ರದಲ್ಲೇ ಎಚ್‌ಡಿಕೆ ಮತ್ತೆ ಕರ್ನಾಟಕ ಸಿಎಂ’

Published : Sep 10, 2019, 09:56 AM IST
‘ಶೀಘ್ರದಲ್ಲೇ ಎಚ್‌ಡಿಕೆ ಮತ್ತೆ ಕರ್ನಾಟಕ ಸಿಎಂ’

ಸಾರಾಂಶ

ಸದ್ಯ ದೋಸ್ತಿ ಸರ್ಕಾರ ಉರುಳಿ ಬಿಜೆಪಿ ಆಡಳಿತಕ್ಕೆ ಏರಿ ಅಧಿಕಾರ ನಿರ್ವಹಣೆ ಮಾಡುತ್ತಿದೆ. ಇದೇ ಸಂದರ್ಭದಲ್ಲಿ ಮತ್ತೆ ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿಯಲಾಗಿದೆ. 

ಹೊಳೆನರಸೀಪುರ [ಸೆ.10]: ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವ ಮೂಲಕ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಎಲ್ಲರನ್ನೂ ಅಚ್ಚರಿಯಲ್ಲಿ ಕೆಡವಿದ ಘಟನೆ ಪಟ್ಟಣದಲ್ಲಿ ಸೋಮವಾರ ನಡೆದಿದೆ. 

ಸೋಮವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಹೋದರ ಕುಮಾರಣ್ಣ ಮತ್ತೆ ಮುಖ್ಯಮಂತ್ರಿ ಆಗೋದು ಖಚಿತ. ಅದು ಹೇಗೆ ಸಾಧ್ಯ? ಯಾರೂ ತಲೆಕೆಡಿಸಿಕೊಳ್ಳಬೇಕಿಲ್ಲ. ನಾವೇನು ಮಾಡಬೇಕೆಂದು ಗೊತ್ತಿದೆ ಎಂದು ಹೇಳಿದರು. ಮತ್ತೆ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಪುನರಾರಂಭವಾಗಲಿದೆ. ಇಲ್ಲಿ ರಾಜಕೀಯ ಮಾತನಾಡುವುದು ಬೇಡ. ಹೊರಗೆ ಎಲ್ಲಾದರೂ ಮಾತನಾಡುತ್ತೇನೆ ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೋದಿ ಕ್ಷೇತ್ರದಲ್ಲೂ ಇಷ್ಟು ಪ್ರಗತಿಯಾಗಿಲ್ಲ 

ಇದೇವೇಳೆ ಹಾಸನ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದಲ್ಲೇ ನಂ.1 ಆಗಿದೆ. ಪ್ರಾಥಮಿಕ ಶಾಲೆಗಳ ಉನ್ನತೀಕರಣಕ್ಕೆ ಕೋಟಿಗಟ್ಟಲೆ ಹಣ ನೀಡಿದ್ದೇನೆ. ನನ್ನ ಕ್ಷೇತ್ರದಲ್ಲಿ 7 ಪ್ರಥಮ ದರ್ಜೆ ಕಾಲೇಜುಗಳಿದ್ದು, ಖಾಸಗಿ ಕಾಲೇಜುಗಳಿಗಿಂತ ಕಿಕ್ಕಿರಿದ ವಿದ್ಯಾರ್ಥಿಗಳು ಪ್ರವೇಶ ಪಡೆದು ವ್ಯಾಸಂಗ ನಡೆಸಿದ್ದಾರೆ. ಪ್ರಧಾನಮಂತ್ರಿ ಮೋದಿ ಕ್ಷೇತ್ರದಲ್ಲೂ ಇಷ್ಟೊಂದು ಪ್ರಗತಿಯಾಗಿಲ್ಲ ಎಂದು ರೇವಣ್ಮ ಹೇಳಿದರು.

PREV
click me!

Recommended Stories

ಸ್ಕೂಲ್ ಬಸ್ ಹರಿದು 8 ವರ್ಷದ ಬಾಲಕಿ ಸಾವು; ಚಾಲಕನ ನಿರ್ಲಕ್ಷ್ಯಕ್ಕೆ ಅಮಾಯಕ ಜೀವ ಬಲಿ
ಗೋವಾ ಮಾಲ್ ಸಮೇತ ಅರಣ್ಯದಲ್ಲಿ ಸಿಕ್ಕಿಬಿದ್ದ ವ್ಯಕ್ತಿ; ಗಾಡಿ ಹಿಡಿದ ಖಾಕಿ, ಆರೋಪಿ ಪರಾರಿ!