'ಶೀಘ್ರದಲ್ಲೇ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ'

By Kannadaprabha NewsFirst Published Jul 24, 2021, 3:54 PM IST
Highlights
  • ಮುಖ್ಯಮಂತ್ರಿ ಬದಲಾವಣೆ, ಮಂತ್ರಿ ಮಂಡಲ ಪುನರ್ ರಚನೆ ಸೇರಿದಂತೆ ಬಿಜೆಪಿ ಸರ್ಕಾರದಲ್ಲಿ ಹಲವು ಸಮಸ್ಯೆ 
  •  ರಾಜ್ಯದಲ್ಲಿ ಅವಧಿಗೂ ಮುನ್ನ ವಿಧಾನಸಭಾ ಚುನಾವಣೆ ನಡೆಯಲಿದೆ
  • ಮುಂದಿನ ವರ್ಷವೇ ಚುನಾವಣೆ ನಡೆದರೂ ಆಶ್ಚರ್ಯವಿಲ್ಲ

ನಾಗಮಂಗಲ (ಜು.24): ಮುಖ್ಯಮಂತ್ರಿ ಬದಲಾವಣೆ, ಮಂತ್ರಿ ಮಂಡಲ ಪುನರ್ ರಚನೆ ಸೇರಿದಂತೆ ಬಿಜೆಪಿ ಸರ್ಕಾರದಲ್ಲಿ ಹಲವು ಸಮಸ್ಯೆ ಎದುರಾಗಿರುವುದರಿಂದ ರಾಜ್ಯದಲ್ಲಿ ಅವಧಿಗೂ ಮುನ್ನ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಭವಿಷ್ಯ ನುಡಿದರು. 

ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲವನ್ನು  ಗಮನಿಸಿದರೆ ವಿಧಾನಸಭಾ ಚುನಾವಣೆಗೆ ಎರಡು  ವರ್ಷ ಕಾಯಬೇಕಿಲ್ಲ. ಮುಂದಿನ ವರ್ಷವೇ ಚುನಾವಣೆ ನಡೆದರೂ ಆಶ್ಚರ್ಯವಿಲ್ಲ ಎಂದರು. 

ಸಿಎಂ ಹುದ್ದೆ ತ್ಯಜಿಸಲು 2 ವರ್ಷ ಹಿಂದೆಯೇ ಒಪ್ಪಂದ: ಬಿಜೆಪಿ ಸಂಸದನ ಸ್ಫೋಟಕ ಹೇಳಿಕೆ!

ಒಂದು ವೇಳೆ ಅವಧಿಗೂ ಮುನ್ನವೇ ಚುನಾವಣೆ ನಡೆದರೆ ಸ್ಪಷ್ಟ ಬಹುಮತದೊಂದಿಗೆ  ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ ಸಹ ಮುಖ್ಯಮಂತ್ರಿ ಬದಲಾವಣೆಗೆ ಒಂದು ಗುಂಪು ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂದು ಮತ್ತೊಂದು ಗುಂಪು ಹಾಗೂ 17 ಮಂದಿ ವಲಸೆ ಹೋಗಿರುವುದು ಸೇರಿದಂತೆ ತ್ರಿಶಂಕು ಸ್ಥಿತಿ ನಿರ್ಮಾಣವಾಗಿದೆ. 

ಬಿಜೆಪಿ ಸರ್ಕಾರಕ್ಕೆ ರಾಜ್ಯದ ಜನರ ಹಿತರಕ್ಷಣೆಗಿಂತ ಅಧಿಕಾರ ಮತ್ತು ಕುರ್ಚಿ ದಕ್ಕಿಸಿಕೊಳ್ಳುವುದೇ ಮುಖ್ಯವಾಗಿದೆ ಎಂದು ದೂರಿದರು. 

ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಹಿಂದೆಂದು ಕಂಡರಿಯದ ಸಮಸ್ಯೆಗಳು ಆಗಿವೆ. ಕೊರೋನಾ ನಿಯಂತ್ರಣ ಹಾಗೂ ಉತ್ತರ ಕರ್ನಾಟಕದ ನೆರೆ ಹಾವಳಿ ನೆರವಿನ ವಿಚಾರದಲ್ಲಿ ಸರ್ಕಾರ ವಿಫಲವಾಗಿದೆ ಎಂದರು.

click me!