ಮೈಸೂರು (ಮೇ.19): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವೀಡಿಯೋ ಸಂವಾದದ ವೇಳೆ ಕೊರೋನಾ ಸೋಂಕಿನ ಪ್ರಮಾಣ ಕಡಿಮೆ ಮಾಡಲು ಹಮ್ಮಿಕೊಂಡಿರುವ ವಿನೂತನ ಪ್ರಯತ್ನಗಳ ಬಗ್ಗೆ ತಿಳಿಸುವಂತೆ ಕೇಳಿದ್ದು ಮೈಸೂರು ಜಿಲ್ಲೆಯಲ್ಲಿ ಆರಂಭಿಸಿರುವ ಕೋವಿಡ್ ಮಿತ್ರ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕಳುಹಿಸಿ ಕೊಡಲಾಗುವುದು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.
ಪ್ರಾಣಿಗಳಿಗೂ ಕೊರೋನಾ ಆತಂಕ: ಸಚಿವ ಸೋಮಶೇಖರ್ ಖುದ್ದು ಮೈಸೂರು ಝೂಗೆ ಭೇಟಿ ..
ಮೈಸೂರು ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ಶೇ.50ರಷ್ಟುಕೋವಿಡ್ ಪ್ರಕರಣಗಳು ದಾಖಲಾಗುತ್ತಿದ್ದು, ಚಿಕಿತ್ಸೆಗೆ ನೆರವಾಗಲು 150 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಕೋವಿಡ್ ಮಿತ್ರಗಳನ್ನಾಗಿ ಪರಿವರ್ತಿಸಲಾಗಿದೆ ಎಂದರು.
ಈ ವಿನೂತನ ಪರಿಕಲ್ಪನೆಯನ್ನು ಕೇಂದ್ರಕ್ಕೆ ಕಳುಹಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ರೋಹಿಣಿ ಹೇಳಿದರು.