'ಇನ್ನೊಂದು ತಿಂಗಳಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್‌ಗೆ ರಾಜೀನಾಮೆ'

Kannadaprabha News   | Asianet News
Published : Mar 21, 2021, 08:06 AM ISTUpdated : Mar 21, 2021, 08:36 AM IST
'ಇನ್ನೊಂದು ತಿಂಗಳಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್‌ಗೆ ರಾಜೀನಾಮೆ'

ಸಾರಾಂಶ

ಶೀಘ್ರದಲ್ಲೇ ಕಾಂಗ್ರೆಸ್ ಮುಖಂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ತ್ಯಜಿಸಲಿದ್ದಾರೆ ಎಂದು ಹೇಳಲಾಗಿದೆ. ಈ ನಿಟ್ಟಿನಲ್ಲಿ ತಯಾರಿಯನ್ನೂ ಮಾಡಿಕೊಂಡಿದ್ದಾರೆನ್ನಲಾಗಿದೆ..

ಮಸ್ಕಿ (ಮಾ.21): ಕಾಂಗ್ರೆಸ್‌ ಒಳಜಗಳದ ಪಕ್ಷವಾಗಿದ್ದು, ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ಅವರು ತಿಂಗಳಲ್ಲಿ ಆ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟೀಲ್‌ ಹೇಳಿದರು. 

ಪಟ್ಟಣದಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಬೃಹತ್‌ ಕಾರ್ಯಕರ್ತರ ಸಮಾವೇಶದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಿಜೆಪಿ ಗೆಲ್ಲುವ ಪಕ್ಷವಾಗಿದೆ, ಕಾಂಗ್ರೆಸ್‌ ಸೋಲಿನ ಪಕ್ಷವಾಗಿದೆ.

 ಸಿದ್ದರಾಮಯ್ಯ ಅವರು ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಸೇರಿದ್ದರು. ಇದೀಗ ಕಾಂಗ್ರೆಸ್‌ನಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು ಅದಕ್ಕಾಗಿ ತಿಂಗಳಲ್ಲಿ ಪಕ್ಷ ಬಿಡಲಿದ್ದಾರೆ. ಅದಕ್ಕಾಗಿಯೇ ಅವರು 90 ಜೊತೆ ಬಟ್ಟೆ ಹೊಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ ಎಂದು ವ್ಯಂಗ್ಯವಾಡಿದರು.

ಬಿಜೆಪಿ ಆಡಳಿತದಲ್ಲಿ ಸದ್ದು ಮಾಡುವುದು ಎರಡೇ: ಒಂದು ಲಂಚ, ಮತ್ತೊಂದು ಮಂಚ! ..

ಉಪಚುನಾವಣೆಯಲ್ಲಿ ಬಿಜೆಪಿ ಪಂಚಜನ್ಯ ಗಹಳೆ ಮೊಳಗಿಸಿದ್ದು, ಉಪಕದನದಲ್ಲಿ ಸಿಎಂ ಯಡಿಯೂರಪ್ಪ ಅವರು ಕೃಷ್ಣರಂತೆ ಸಾರಥಿಯಾಗಿದ್ದಾರೆ, ಬಿ.ವೈ.ವಿಜಯೇಂದ್ರ ಅವರು ಅರ್ಜುನರಾಗಿದ್ದಾರೆ. ಶ್ರೀರಾಮುಲು ಭೀಮರಾಗಿದ್ದು, ಎನ್‌.ರವಿಕುಮಾರ ಅವರು ಸಹದೇವರಾಗಿದ್ದಾರೆ. ಈ ಕುರುಕ್ಷೇತ್ರದಲ್ಲಿ ಪಾಂಡವರಿಗೆ ಗೆಲವು ಖಚಿತವಾಗಿ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!