‘ನಮಗೆ ಬಹುಮತ ಇಲ್ಲ : ಆದ್ದರಿಂದಲೆ ಎಲ್ಲರಿಗೂ ಸಚಿವ ಸ್ಥಾನ ಸಿಕ್ಕಿಲ್ಲ’

By Web Desk  |  First Published Sep 9, 2019, 11:18 AM IST

ನಮಗೆ ಸಂಪೂರ್ಣ ಬಹುಮತವಿಲ್ಲ. ಆದ್ದರಿಂದ ಎಲ್ಲರಿಗೂ ಸಚಿವ ಸ್ಥಾನ ನೀಡಲು ಸಾಧ್ಯವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. 


ಕಲಬುರಗಿ [ಸೆ.09]: ನಮಗೆ ಪೂರ್ಣವಾದ ಬಹುಮತವಿಲ್ಲ. ಹೀಗಾಗಿ ಎಲ್ಲರಿಗೂ ಸಚಿವ ಸ್ಥಾನ ನೀಡಲಾಗಿಲ್ಲ. ಪೂರ್ಣ ಬಹುಮತ ಇದ್ದಿದ್ದರೆ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯಾಗಲು ಬಿಡುತ್ತಿದ್ದೇವೆಯೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಕಟೀಲ್, ಸದ್ಯ ಅನರ್ಹ 16 ಮಂದಿ ಶಾಸಕರ ಪ್ರಕರಣ ನ್ಯಾಯಾಲಯದಲ್ಲಿಯೇ ಇದೆ. ಶೀಘ್ರದಲ್ಲಿಯೇ ವಿಚಾರಣೆ ನಡೆದು. ಇದೆಲ್ಲವೂ ಮುಗಿಯಲಿದೆ ಎಂದರು. 

Tap to resize

Latest Videos

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸದ್ಯ ನಾವು ರಾಜ್ಯದಲ್ಲಿ ಸರ್ಕಾರ ರಚಿಸಿದ್ದೇವೆ. ಈಗ ಒಂದ ಬಾರಿ ಸಂಪುಟ ವಿಸ್ತರಣೆ ನಡೆದು 17 ಮಂದಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಮುಂದೆ ಎಲ್ಲಾ ಗೊಂದಲಗಳು ಬಗೆಹರಿದ ನಂತರ ಮತ್ತೊಮ್ಮೆ ಸಂಪುಟ ವಿಸ್ತರಣೆಯಾಗಲಿದೆ. ಆಗ ಎಲ್ಲರಿಗೂ ಸಚಿವ ಸ್ಥಾನ ಸಿಗಲಿದೆ ಎಂದು ನಳಿನ್ ಕುಮಾರ್ ಹೇಳಿದರು. 

ಮತ್ತೊಮ್ಮೆ ಸಂಪುಟ ವಿಸ್ತರಣೆಯಾದ ಬಳಿಕ ಉಳಿದ ಸಚಿವ ಸ್ಥಾನಾಕಾಂಕ್ಷಿಗಳು ಸಂಪುಟ ಸೇರ್ಪಡೆಗೊಳ್ಳಲಿದ್ದಾರೆ. ಕಾದು ನೋಡಿ  ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

click me!