ಶಿರಾದಲ್ಲಿ ಜೆಡಿಎಸ್‌ ಟಿಕೆಟ್‌ ಯಾರಿಗೆ..? ಎಚ್ಡಿಕೆಯಿಂದ ಸ್ಪಷ್ಟನೆ

By Kannadaprabha NewsFirst Published Dec 7, 2022, 6:02 AM IST
Highlights

ಶಿರಾ ಕ್ಷೇತ್ರದಲ್ಲಿ ಜೆಡಿಎಸ್‌ ಪಕ್ಷದಿಂದ ವಿಧಾನಸಭೆಗೆ ಸ್ಪರ್ಧಿಸಲು ಐವರು ಆಕಾಂಕ್ಷಿಗಳು ಇದ್ದಾರೆ. ಅವರೆಲ್ಲರನ್ನು ಕರೆದು ಒಂದು ಸಭೆ ಮಾಡಿ ಶೀಘ್ರದಲ್ಲಿಯೇ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಕುಮಾರಸ್ವಾಮಿ ಹೇಳಿದರು.

  ಶಿರಾ (ಡಿ.07):  ಶಿರಾ ಕ್ಷೇತ್ರದಲ್ಲಿ ಜೆಡಿಎಸ್‌ ಪಕ್ಷದಿಂದ ವಿಧಾನಸಭೆಗೆ ಸ್ಪರ್ಧಿಸಲು ಐವರು ಆಕಾಂಕ್ಷಿಗಳು ಇದ್ದಾರೆ. ಅವರೆಲ್ಲರನ್ನು ಕರೆದು ಒಂದು ಸಭೆ ಮಾಡಿ ಶೀಘ್ರದಲ್ಲಿಯೇ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಕುಮಾರಸ್ವಾಮಿ ಹೇಳಿದರು.

ತಾಲೂಕಿನ ಹುಂಜನಾಳು ಗ್ರಾಮದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಕಳೆದ ವಿಧಾನಸಭಾ ಉಪಚುನಾವಣೆಯಲ್ಲಿ (By Election)  ದಲ್ಲಿ ಹಿನ್ನಡೆಯಾಗಿದೆ. ಈಗ ಪ್ರತಿಯೊಂದು ಗ್ರಾಮಗಳಲ್ಲಿ ಹೆಣ್ಣು ಮಕ್ಕಳು ನಾವು ಬಿಜೆಪಿಗೆ (BJP) ಮತ ಕೊಟ್ಟು ಮನೆಗಳು ಹಾಳಾಗಿವೆ. ನಾವು ತಪ್ಪು ಮಾಡಿದ್ದೇವೆ. ಈ ಬಾರಿ ಜೆ ಡಿ ಎಸ್‌ಗೆ ಮತ ನೀಡಲು ಮಾನಸಿಕವಾಗಿ ಸಿದ್ದರಾಗಿದ್ದೇವೆ ಎಂದು ಹೇಳುತ್ತಿದ್ದಾರೆ. ಚಿಕ್ಕ ಮಕ್ಕಳೂ ಸಹ ಕುಮಾರಣ್ಣನ ನೋಡಬೇಕು ಎಂದು ಕಾದಿದ್ದು, ನನ್ನ ಮನಕಲಕಿದೆ. ಜನರ ಭಾವನೆಗಳನ್ನು ಗಮನಿಸಿದ್ದೇನೆ. ಈ ಬಾರಿ ನನ್ನ ಗುರಿ ತಲುಪಲು ಯಾವುದೇ ಸಂಶಯ ಕಾಣುತ್ತಿಲ್ಲ. ಸ್ಪಷ್ಟಬಹುಮತದ ಸರ್ಕಾರ ತರಬೇಕೆಂಬ ನನ್ನ ಗುರಿಗೆ ಹತ್ತಿರವಾಗುತ್ತಿದ್ದೇನೆ ಎಂದರು.

ಶಿರಾ ತಾಲೂಕಿನಲ್ಲಿ ಪಂಚರತ್ನ ರಥಯಾತ್ರೆ ಯಶಸ್ವಿಯಾಗಿ ನಡೆಯಿತು. ಜನತೆ ಬೆಳಗಿನ ಜಾವದವರೆಗೂ ಕಾದು ನಮಗೆ ಬೆಂಬಲ ನೀಡಿದ್ದಾರೆ. ರಥಯಾತ್ರೆಯ 18ನೇ ದಿನ ಗುಬ್ಬಿ ಕ್ಷೇತ್ರದಲ್ಲಿ ಮುಗಿದ ನಂತರ ಪಂಚರತ್ನ ರಥಯಾತ್ರೆಗೆ ತಾತ್ಕಾಲಿಕವಾಗಿ ತೆರೆ ಎಳೆದಿದ್ದೇವೆ. ಡಿ.11ರಿಂದ ಚಿಕ್ಕನಾಯಕನಹಳ್ಳಿ ಮತ್ತೆ ಆರಂಭ ಆಗುತ್ತೆ ಎಂದರು.

ಅದ್ಧೂರಿ ಸ್ವಾಗತ: ಶಿರಾ ತಾಲೂಕಿನಲ್ಲಿ ಪಂಚರತ್ನ ರಥಯಾತ್ರೆ ಬೆಳಗಿನ ಜಾವ 4 ಗಂಟೆಗೆ ನಡೆಯಿತು. ರಸ್ತೆಯುದ್ದಕ್ಕೂ ಕಿಕ್ಕಿರಿದು ಜನರು ಸೇರಿದ್ದರು. ಕಾರ್ಯಕರ್ತರು ಕಡಲೆಕಾಯಿ ಹಾರ, ಕ್ಯಾಪ್ಸಿಕಂ ಹಾರ, ಎಳನೀರು, ಮುಸುಕಿನ ಜೋಳದ ಹಾರ, ಸೇಬಿನ ಹಾರ, ಕಡಲೇಕಾಯಿ ಹಾರ, ಕೊಬ್ಬರಿ ಹಾರ, ಕೊತ್ತಂಬರಿ ಸೊಬ್ಬಿನ ಹಾರ, ಅಡಕೆ ಹಾರ ಹಾಕಿ ಹೂ ಮಳೆ ಸುರಿಸಿ ಅದ್ಧೂರಿಯಾಗಿ ಸ್ವಾಗತ ಕೋರಿದ್ದಾರೆ. ಜನರ ಅಭಿಮಾನವನ್ನು ಮರೆಯಲು ಸಾಧ್ಯವಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್‌ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ತಾಲೂಕು ಜೆಡಿಎಸ್‌ ಅಧ್ಯಕ್ಷ ಆರ್‌.ಉಗ್ರೇಶ್‌, ರೇಷ್ಮೆ ನಿಗಮದ ಮಾಜಿ ಅಧ್ಯಕ್ಷ ಎಸ್‌.ಆರ್‌.ಗೌಡ, ತಾಪಂ ಮಾಜಿ ಅಧ್ಯಕ್ಷ ಸತ್ಯಪ್ರಕಾಶ್‌, ಜಿಪಂ ಮಾಜಿ ಉಪಾಧ್ಯಕ್ಷ ಮುದಿಮಡು ರಂಗಶಾಮಯ್ಯ, ಮುಖಂಡರಾದ ಕಲ್ಕೆರೆ ರವಿಕುಮಾರ್‌ ಸೇರಿದಂತೆ ಹಲವರು ಹಾಜರಿದ್ದರು.

6ಶಿರಾ1: ಶಿರಾ ತಾಲೂಕು ಹುಂಜನಾಳು ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ಕಾಂಗ್ರೆಸ್ ಮುಖಂಡರು ಜೆಡಿಎಸ್ ಸೇರ್ಪಡೆ

 ಬೆಟ್ಟದಪುರ :  ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಸಮೀಪದ ಮುರದೂರು ಗ್ರಾಮದ ಕಾಂಗ್ರೆಸ್‌ ಮುಖಂಡರು ಶಾಸಕ ಕೆ. ಮಹದೇವ್‌ ನೇತೃತ್ವದಲ್ಲಿ ಜೆಡಿಎಸ್‌ ಸೇರ್ಪಡೆಯಾದರು.

ಶಾಸಕ ಮಹದೇವ್‌ ಅವರು ಗ್ರಾಮದ ಅಭಿವೃದ್ಧಿಗಾಗಿ . 20 ಲಕ್ಷದRoad)  ಕಾಮಗಾರಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ತಾಲೂಕು ಅಭಿವೃದ್ಧಿಗಾಗಿ ಶಾಸಕನಾಗಿದ್ದೇನೆ ಹೊರತು ಹಣ ಮಾಡುವ ಉದ್ದೇಶವಿಲ್ಲ. ಕಡು ಬಡತನದಲ್ಲಿ ಹುಟ್ಟಿದ ನನಗೆ ಬಡವರ ಕಷ್ಟಗೊತ್ತು. ಆದ್ದರಿಂದವನ್ನು (money) ಯಾವುದೇ ಸಂದರ್ಭದಲ್ಲಿ ಸಂಪಾದನೆ ಮಾಡಬಹುದು. ಆದರೆ ಬಡವರ ಕಷ್ಟವನ್ನು ತಿಳಿಯುವುದು ಬಹಳ ಕಷ್ಟಎಂದರು.

ಈ ವೇಳೆ ತಾಲೂಕು ಜೆಡಿಎಸ್‌ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಮುಖಂಡರಾದ ಕುಮಾರ್‌, ಪಂಚ್ವಳ್ಳಿ ಸಂತೋಷ್‌, ಕೆಂಪಣ್ಣ ಮರದುರು, ಮಹದೇವ್‌, ಸಂತೋಷ್‌ ಹಾಗೂ ಜಿಪಂ ಎಇಇ ಮಲ್ಲಿಕಾರ್ಜುನ್‌ ಇದ್ದರು.

ಜೆಡಿಎಸ್‌ ಪಕ್ಷಕ್ಕೆ ರಾಜ್ಯದಲ್ಲಿ ಒಂದು ಬಾರಿ ಪೂರ್ಣ ಬಹುಮತದ ಸರ್ಕಾರ ಕೊಟ್ಟು ನೋಡಿ

ಚಿಕ್ಕಬಳ್ಳಾಪುರ : ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಬಡತನವನ್ನ ಹೋಗಲಾಡಿಸಲಾಗಿಲ್ಲ. ಜೆಡಿಎಸ್‌ ಪಕ್ಷಕ್ಕೆ ರಾಜ್ಯದಲ್ಲಿ ಒಂದು ಬಾರಿ ಪೂರ್ಣ ಬಹುಮತದ ಸರ್ಕಾರ ಕೊಟ್ಟು ನೋಡಿ ನಿರುದ್ಯೋಗಿ ಯುವಕರಿಗೆ ಸರ್ಕಾರಿ ಉದ್ಯೋಗ ಕೊಡುವ ಕೆಲಸವನ್ನು ನಾವು ಪ್ರಾಮಾಣಿಕವಾಗಿ ಮಾಡುತ್ತೇವೆಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಪಂಚರತ್ನ ರಥಯಾತ್ರೆಯ 10ನೇ ದಿನವಾದ ಭಾನುವಾರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಮೂಲಕ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿ ಮಂಚೇನಹಳ್ಳಿ, ಮುಸ್ಟೂರು, ಗೊಲ್ಲಹಳ್ಳಿ, ಪೆರೇಸಂದ್ರ, ಹೊನೇಗಲ್ಲು, ದಿಬ್ಬೂರು, ನಾಯನಹಳ್ಳಿ ಗ್ರಾಮಗಳಲ್ಲಿ ನಡೆದ ರಥಯಾತ್ರೆ ವೇಳೆ ಜನರನ್ನು ಉದ್ದೇಶಿಸಿ ಮಾತನಾಡಿದರು.

ಆರೋಗ್ಯ ಲೆಕ್ಕಿಸದೇ ಯಾತ್ರೆ: ಇಂದು ನನ್ನ ಆರೋಗ್ಯವನ್ನು ಲೆಕ್ಕಿಸದೆ ಪಂಚರತ್ನ ರಥಯಾತ್ರೆ ಕಾರ್ಯಕ್ರಮವನ್ನು ರಾಜ್ಯದಲ್ಲಿ ನೂರು ದಿನ ಹಮ್ಮಿಕೊಂಡಿದ್ದೇನೆ. ನಿಮಗೆ ನಮ್ಮ ಪಂಚರತ್ನ ಯೋಜನೆ ಬಗ್ಗೆ ತಿಳಿಸಲು ಓಡಾಡುತ್ತಿದ್ದೇನೆ. ಕಳೆದ 10 ದಿನಗಳಿಂದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಉತ್ತಮ ಸ್ಪಂದನೆ ಸಿಗುತ್ತಿದೆಂದರು. ಸ್ವಾತಂತ್ರ್ಯ ಬಂದ ಬಳಿಕ ಎಷ್ಟೋ ನೇಮಕಾತಿಯಾಗಿಲ್ಲ. ಸರಿಯಾಗಿ ಕಟ್ಟಡ ಕಟ್ಟಿಲ್ಲ. ಎರಡು ವರ್ಷದಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಸೈಕಲ್‌ ಕೊಟ್ಟಿಲ್ಲ. ಈ ಭಾಗದಲ್ಲಿ ಬಸ್‌ ವ್ಯವಸ್ಥೆ ಕೂಡ ಸರಿಯಾಗಿಲ್ಲ. 

click me!