ಬೆಳಗಾವಿಯಲ್ಲಿ ಅಧಿವೇಶನ ನಡೆಸಿ: ಸಿಎಂಗೆ ಹೊರಟ್ಟಿ ಪತ್ರ

Kannadaprabha News   | Asianet News
Published : Jun 30, 2021, 08:36 AM IST
ಬೆಳಗಾವಿಯಲ್ಲಿ ಅಧಿವೇಶನ ನಡೆಸಿ: ಸಿಎಂಗೆ ಹೊರಟ್ಟಿ ಪತ್ರ

ಸಾರಾಂಶ

* ಅಧಿವೇಶನ ಬೆಳಗಾವಿಯಲ್ಲಿ ಮಾಡಿದರೆ ಸೂಕ್ತ  * ಬೆಳಗಾವಿಯಲ್ಲಿ 2 ವರ್ಷದಿಂದ ಅಧಿವೇಶನ ನಡೆದಿಲ್ಲ * ವಿಧಾನಸಭೆ ಸ್ಪೀಕರ್‌ ಹಾಗೂ ನಾನೂ ಒಮ್ಮತ ಸೂಚಿಸಿದ್ದೇನೆ: ಹೊರಟ್ಟಿ

ಹುಬ್ಬಳ್ಳಿ(ಜೂ.30): ಮುಂಬರುವ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಸರ್ಕಾರ ತೀರ್ಮಾನ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. 

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಅಧಿವೇಶನವನ್ನು ಜೂನ್‌ನಲ್ಲಿ ಮಾಡಲಾಗುತ್ತದೆ. ಆದರೆ, ಈ ವರ್ಷ ಈ ಬಗ್ಗೆ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಹೀಗಾಗಿ ಜುಲೈನಲ್ಲಿ ಅಧಿವೇಶನ ನಡೆಯಬಹುದು. ಈ ಅಧಿವೇಶನವನ್ನು ಬೆಳಗಾವಿಯಲ್ಲಿ ಮಾಡಿದರೆ ಸೂಕ್ತ ಎಂದರು.

ಬೆಳಗಾವಿ ಅಧಿವೇಶನ ವೇಳೆ ಶಾಸಕರು ಗೋವಾಕ್ಕೆ ಹೋಗಬೇಡಿ : ಎಚ್ಚರಿಕೆ !

ಬೆಳಗಾವಿಯಲ್ಲಿ 2 ವರ್ಷದಿಂದ ಅಧಿವೇಶನ ನಡೆದಿಲ್ಲ. ವಿಪ ಸದಸ್ಯ ಮಹಾಂತೇಶ ಕವಟಗಿಮಠ ಕೂಡ ಈ ಬಗ್ಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ವಿಧಾನಸಭೆ ಸ್ಪೀಕರ್‌ ಹಾಗೂ ನಾನೂ ಒಮ್ಮತ ಸೂಚಿಸಿದ್ದೇನೆ. ಸರ್ಕಾರ ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು. ಈ ಬಗ್ಗೆ ಇನ್ನೊಮ್ಮೆ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದರು.
 

PREV
click me!

Recommended Stories

ಹೋರಾಟದಲ್ಲೇ ಉರುಳಿದ 2025ರ ವರ್ಷ, ಬಿಡದಿ ಟೌನ್ ಶಿಪ್ ಯೋಜನೆ ರಾಮನಗರ ಬೆಂಗಳೂರು ದಕ್ಷಿಣವಾಗಿ ಬದಲಾಗಿದ್ದೆ ಸಾಧನೆ!
ಹೊಸ ವರ್ಷದ ಕಿಕ್‌ನಲ್ಲಿ ಡ್ರಿಂಕ್ ಆಂಡ್ ಡ್ರೈವ್ ಮಾಡಿದ್ರೆ ಅಷ್ಟೇ.. ಬೆಂಗಳೂರಿನ 50 ಫ್ಲೈ ಓವರ್‌ಗಳು ಬಂದ್; ರಸ್ತೆಗಿಳಿಯುವ ಮುನ್ನ ತಿಳಿಯಿರಿ