ರೈಲು ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ದಸರಾ ಹಿನ್ನೆಲೆ ಬೆಂಗಳೂರು-ಬೆಳಗಾವಿಗೆ ಸ್ಪೆಷಲ್‌ ಎಕ್ಸ್‌ಪ್ರೆಸ್!

Kannadaprabha News   | Kannada Prabha
Published : Oct 07, 2026, 06:51 AM IST
Bengaluru to Belagavi special train

ಸಾರಾಂಶ

ದಸರಾ ಹಬ್ಬದ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ನೈಋತ್ಯ ರೈಲ್ವೆಯು ಬೆಂಗಳೂರು ಮತ್ತು ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸುತ್ತಿದೆ. ಈ ರೈಲುಗಳು ಅಕ್ಟೋಬರ್ 16 ಮತ್ತು 17 ರಂದು ಸಂಚರಿಸಲಿದ್ದು, ಹುಬ್ಬಳ್ಳಿ, ಧಾರವಾಡ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ.

ಹುಬ್ಬಳ್ಳಿ (ಅ.7): ವಾರಾಂತ್ಯ ಹಾಗೂ ದಸರಾ ಹಬ್ಬ(Dasara festival)ದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು, ನೈಋತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೆಳಗಾವಿ ನಡುವೆ ಎರಡು ಮಾರ್ಗಗಳಲ್ಲಿ ತಲಾ ಒಂದು ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ನಡೆಸಲಿದೆ.

ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ರೈಲು

ರೈಲು ಸಂಖ್ಯೆ 06563 ಎಸ್‌ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ರೈಲು ಅ. 16ರಂದು ಎಸ್‌ಎಂವಿಟಿ ಬೆಂಗಳೂರಿನಿಂದ ಸಂಜೆ 7ಕ್ಕೆ ಹೊರಟು, ಮರುದಿನ ಬೆಳಗ್ಗೆ 8.25 ಗಂಟೆಗೆ ಬೆಳಗಾವಿ ತಲುಪಲಿದೆ. ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06564 ಬೆಳಗಾವಿ-ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಅ. 17ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ 5 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.

ಬೆಂಗಳೂರು-ಬೆಳಗಾವಿ ಟ್ರೈನ್ ಎಲ್ಲೆಲ್ಲಿ ನಿಲುಗಡೆ?

ಮಾರ್ಗ ಮಧ್ಯದಲ್ಲಿ ಈ ರೈಲು ಎರಡೂ ಮಾರ್ಗಗಳಲ್ಲಿ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ವಿಶೇಷ ಎಕ್ಸ್‌ಪ್ರೆಸ್ ರೈಲು ಎಷ್ಟು ಬೋಗಿಗಳನ್ನ ಹೊಂದಿದೆ?

ಈ ರೈಲು 18 ಬೋಗಿಗಳನ್ನು ಹೊಂದಿದ್ದು, ಇದರಲ್ಲಿ 1 ಎಸಿ, 2-ಟೈರ್, 3 ಎಸಿ 3-ಟೈರ್, 8 ಸ್ಲೀಪರ್ ಕ್ಲಾಸ್, 4 ಜನರಲ್ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ದಿವ್ಯಾಂಗ ಸ್ನೇಹಿ ಕಂಪಾರ್ಟ್‌ಮೆಂಟ್‌ಗಳನ್ನು ಹೊಂದಿರುವ ದ್ವಿತೀಯ ದರ್ಜೆ ಲಗೇಜ್- ಕಮ್- ಬ್ರೇಕ್ ವ್ಯಾನ್‌ಗಳು ಇರಲಿವೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

PREV
Read more Articles on
click me!

Recommended Stories

ಪ್ರತಿ ವರ್ಷ 2.11 ಲಕ್ಷ ಶುಲ್ಕ ಭರಿಸಲಾಗದೇ MBBS ಅರ್ಧಕ್ಕೆ ನಿಲ್ಲಿಸಿದ ಕೊಪ್ಪಳ ಯುವತಿ!
ಕರ್ನಾಟಕ ರಾಜ್ಯೋತ್ಸವ ಪಕ್ಷಿ ಗಣತಿ 2026: ರಾಜ್ಯದಲ್ಲಿ ಮೊದಲ ಸಲ ಪಕ್ಷಿ ಗಣತಿ' ನೀವೂ ಪಾಲ್ಗೊಳ್ಳಿ! ಇಲ್ಲಿದೆ ಸಂಪೂರ್ಣ ವಿವರ