ಗಂಗಾವತಿ: ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪತ್ರಕರ್ತ ರಾಮಮೂರ್ತಿ ನವಲಿಗೆ ವಿಶೇಷ ಆಹ್ವಾನ

By Girish Goudar  |  First Published Dec 31, 2022, 2:48 PM IST

ರಾಮಮೂರ್ತಿ ನವಲಿ ಅವರಿಗೆ ಪತ್ರ ಬರೆದು ಸಾಹಿತ್ಯ ಸಮ್ಮೇಳನಾದ್ಯಕ್ಷರಾಗಿ ಹಿರಿಯ ಕವಿ ಡಾ.ದೊಡ್ಡರಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಮೂರು ದಿನಗಳ ಕಾಲ ನಡೆಯುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಸುವಂತೆ ಕೋರಿದ ಡಾ.ಮಹೇಶ ಜೋಷಿ


ಹಾವೇರಿ(ಡಿ.31):  ಹಾವೇರಿಯಲ್ಲಿ ಜ.6ರಿಂದ 8 ರವರಿಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಪತ್ರಕರ್ತ ರಾಮಮೂರ್ತಿ ನವಲಿ ಇವರನ್ನು ವಿಶೇಷ ಅಹ್ವಾನಿತರಾಗಿದ್ದಾರೆಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಷಿ ತಿಳಿಸಿದ್ದಾರೆ.

ಈ ಕುರಿತು ರಾಮಮೂರ್ತಿ ನವಲಿ ಅವರಿಗೆ ಡಾ.ಮಹೇಶ ಜೋಷಿ ಪತ್ರ ಬರೆದಿದ್ದು ಸಾಹಿತ್ಯ ಸಮ್ಮೇಳನಾದ್ಯಕ್ಷರಾಗಿ ಹಿರಿಯ ಕವಿ ಡಾ.ದೊಡ್ಡರಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಮೂರು ದಿನಗಳ ಕಾಲ ನಡೆಯುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವಂತೆ ಕೋರಿದ್ದಾರೆ.

Tap to resize

Latest Videos

undefined

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಮರನ್ನು ಕಡೆಗಣಿಸಿಲ್ಲ: ಮಹೇಶ ಜೋಶಿ

ರಾಮಮೂರ್ತಿ ನವಲಿ ಅವರು ಕಳೆದ 30 ವರ್ಷಗಳಿಂದ ಕಲೆ, ಸಾಹಿತ್ಯ, ಸಂಸ್ಕೃತಿ ಸೇರಿದಂತೆ ವಿವಿಧ ಸಂಘಟನೆಗಳನ್ನು ಕಟ್ಟಿ ಬೆಳೆಸಿದ್ದಾರೆ. ಜಿಲ್ಲಾ ಮತ್ತು ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನಗಳು ಮತ್ತು ಹಂಪಿ, ಆನೆಗೊಂದಿ, ಕನಕಗಿರಿ ಉತ್ಸವಗಳಲ್ಲಿ ಭಾಗವಹಿಸಿದ್ದಾರೆ. ಕೆಲ ಚಿತ್ರಗಳಲ್ಲಿ ನಟಿಸಿದ್ದು, ಸರ್ಕಾರದ ಯುವ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳನ್ನು ಪಡೆದಿದ್ದಾರೆ.

click me!