ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ-2024: ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ, ತುಷಾರ್ ಗಿರಿನಾಥ್

Published : Feb 15, 2024, 11:57 AM IST
ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ-2024: ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ, ತುಷಾರ್ ಗಿರಿನಾಥ್

ಸಾರಾಂಶ

ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗುತ್ತದೆ. ಮತದಾನದ ದಿನದಂದು ಮೇಲ್ವಿಚಾರಣೆಗಾಗಿ ಎಫ್.ಎಸ್.ಟಿ, ಎಸ್.ಎಸ್.ಟಿ ತಂಡಗಳನ್ನು ನಿಯೋಜನೆ ಮಾಡಲಾಗಿದೆ.  ಮತಗಟ್ಟೆಗಳ ಬಳಿ 144 ಸೆಕ್ಷನ್ ಜಾರಿಯಿರಲಿದ್ದು, ಮತಗಟ್ಟೆಯ 100 ಮೀಟರ್ ಅಂತರದಲ್ಲಿ 5 ಜನಕ್ಕಿಂತ ಹೆಚ್ಚುಮಂದಿ ಸೇರುವಂತಿಲ್ಲ. ಜೊತೆಗೆ ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ಪ್ರಚಾರ ಮಾಡುವಂತಿಲ್ಲ: ತುಷಾರ್ ಗಿರಿನಾಥ್ 

ಬೆಂಗಳೂರು(ಫೆ.15): ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಫೆ. 16ರಂದು ನಗರ 43 ಮತಗಟ್ಟೆಗಳಲ್ಲಿ ಬೆಳಗ್ಗೆ 8.00 ರಿಂದ ಸಂಜೆ 4.00 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ತಿಳಿಸಿದ್ದಾರೆ.

ನಿನ್ನೆ(ಬುಧವಾರ) ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಯ ಸಂಬಂಧ ಅಂತಿಮ ಹಂತದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಮಲ್ಲೇಶ್ವರ ಐಪಿಪಿ ಸಭಾಂಗಣದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ತುಷಾರ್ ಗಿರಿನಾಥ್ ಅವರು, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 14,432 ಮತದಾರರಿದ್ದು, ಫೆ. 16 ರಂದು ಮತದಾನ ನಡೆಯಲಿದೆ ಎಂದು ತಿಳಿಸಿದರು.

ಬೆಂಗಳೂರಿನ ವಾಣಿಜ್ಯ ಮಳಿಗೆಗಳಿಗೆ ದೊಡ್ಡ ಕನ್ನಡ ನಾಮಫಲಕ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಪರವಾನಗಿ ರದ್ದು!

ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗುತ್ತದೆ. ಮತದಾನದ ದಿನದಂದು ಮೇಲ್ವಿಚಾರಣೆಗಾಗಿ ಎಫ್.ಎಸ್.ಟಿ, ಎಸ್.ಎಸ್.ಟಿ ತಂಡಗಳನ್ನು ನಿಯೋಜನೆ ಮಾಡಲಾಗಿದೆ.  ಮತಗಟ್ಟೆಗಳ ಬಳಿ 144 ಸೆಕ್ಷನ್ ಜಾರಿಯಿರಲಿದ್ದು, ಮತಗಟ್ಟೆಯ 100 ಮೀಟರ್ ಅಂತರದಲ್ಲಿ 5 ಜನಕ್ಕಿಂತ ಹೆಚ್ಚುಮಂದಿ ಸೇರುವಂತಿಲ್ಲ. ಜೊತೆಗೆ ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ಪ್ರಚಾರ ಮಾಡುವಂತಿಲ್ಲ ಎಂದು ತಿಳಿಸಿದರು. 

43 ಮತಗಟ್ಟೆಗಳಲ್ಲಿ ಮತದಾನ:

ಬೆಂಗಳೂರು ಶಿಕ್ಷಕರ ಕ್ಷೇತ್ರದ 43 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಹಾಗೂ ಮತ ಎಣಿಕೆ ಕೇಂದ್ರವು ಸರ್ಕಾರಿ ಕಲಾ ಕಾಲೇಜು, ನೃಪತುಂಗ ರಸ್ತೆ, ಅಂಬೇಡ್ಕರ್ ವೀಧಿ, ಕೆ.ಆರ್ ವೃತ್ತ, ಸಂಪಂಗಿರಾಮನಗರ, ಬೆಂಗಳೂರು-560001ರಲ್ಲಿ ಸ್ಥಾಪಿಸಲಿದ್ದು, ಫೆ. 20 ರಂದು ಮತ ಎಣಿಕೆ ನಡೆಯಲಿದೆ ಎಂದು ಹೇಳಿದರು.

ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತಆರ್. ಸೆಲ್ವಮಣಿ, ಅಪರ ಜಿಲ್ಲಾ ಚುನಾವಣಾಧಿಕಾರಿಗಳು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಮಾಂಸದ ಮುದ್ದೆಯಂಥಾದ ಮೃತದೇಹದ ಮುಂದೆ ಮಗನ ಕಣ್ಣೀರು, ಪಂಚಭೂತದಲ್ಲಿ ಲೀನರಾದ ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ!