ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ

Kannadaprabha News   | Kannada Prabha
Published : Aug 01, 2025, 08:52 AM ISTUpdated : Aug 01, 2025, 08:53 AM IST
Train

ಸಾರಾಂಶ

ಸ್ವಾತಂತ್ರ್ಯ ದಿನಾಚರಣೆಯ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಒದಗಿಸಲಿದೆ.

ಬೆಂಗಳೂರು :  ಸ್ವಾತಂತ್ರ್ಯ ದಿನಾಚರಣೆಯ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಒದಗಿಸಲಿದೆ.

ಎಸ್ಎಂವಿಟಿ ಬೆಂಗಳೂರು-ಬೀದರ್ ವಿಶೇಷ ಎಕ್ಸ್‌ಪ್ರೆಸ್ ರೈಲು (06519) ಆ.14ರಂದು ರಾತ್ರಿ 9.15ಕ್ಕೆ ಹೊರಟು ಮರುದಿನ ಬೆಳಗ್ಗೆ 11.30ಕ್ಕೆ ಬೀದರ್ ತಲುಪಲಿದೆ. ಮರು ಪ್ರಯಾಣದಲ್ಲಿ ಬೀದರ್-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು (06520) ಆ.15 ರಂದು ಬೀದರ್‌ನಿಂದ ಮಧ್ಯಾಹ್ನ 2.30ಕ್ಕೆ ಹೊರಟು ಮರುದಿನ ಬೆಳಗಿನ ಜಾವ 4.30ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ಈ ವಿಶೇಷ ರೈಲು ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣ, ಯಾದಗಿರಿ, ವಾಡಿ, ಶಹಬಾದ್, ಕಲಬುರಗಿ, ಹುಮನಾಬಾದ್ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ. 20 ಸೆಕೆಂಡ್ ಕ್ಲಾಸ್ ಸ್ಲೀಪರ್ ಬೋಗಿ, 2 ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ದಿವ್ಯಾಂಗ ಸ್ನೇಹಿ ಬೋಗಿ ಸೇರಿ ಒಟ್ಟು 22 ಬೋಗಿಗಳನ್ನು ಒಳಗೊಂಡಿದೆ.

PREV
Read more Articles on
click me!

Recommended Stories

ನಾದಬ್ರಹ್ಮ ಇಡ್ಲಿ ಸೆಂಟರ್‌ ಮಾಲೀಕ, 28 ವರ್ಷದ ಸಂದೇಶ್‌ ಹೃದಯಾಘಾತದಿಂದ ಸಾವು
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ