ಮಂಗಳೂರು: ದಲಾಯಿಲಾಮ ಮಂಗಳೂರಿಗೆ ಆಗಮನ

Published : Aug 29, 2019, 02:51 PM IST
ಮಂಗಳೂರು: ದಲಾಯಿಲಾಮ ಮಂಗಳೂರಿಗೆ ಆಗಮನ

ಸಾರಾಂಶ

ಟಿಬೆಟಿಯನ್ ಆಧ್ಯಾತ್ಮಿಕ ಗುರು ದಲಾಯಿಲಾಮ ಅವರು ಮಂಗಳೂರಿಗೆ ಭೇಟಿ ನೀಡಿದ್ದಾರೆ. ವಿಮಾನ ನಿಲ್ದಾಣದ ಹೊರಗಡೆ ಟಿಬೇಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕ ಅವರನ್ನು ಸ್ವಾಗತಿಸಲಾಯಿತು‌. ದಲಾಯಿಲಾಮ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಮಂಗಳೂರು(ಆ.29): ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರು ಮಂಗಳೂರಿಗೆ ಆಗಮಿಸಿದರು.  ಗುರುವಾರ ಮಧ್ಯಾಹ್ನ  ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿ ಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತರಾದ ಅರುಣಾಂಶು ಗಿರಿ,ಲಕ್ಷ್ಮೀ ಗಣೇಶ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು.

ವಿಮಾನ ನಿಲ್ದಾಣದ ಹೊರಗಡೆ ಟಿಬೇಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕ ಅವರನ್ನು ಸ್ವಾಗತಿಸಲಾಯಿತು‌. ದಲಾಯಿಲಾಮ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ  ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಭಾರೀ ಭದ್ರತೆ ಯಲ್ಲಿ ಝೀರೋ ಟ್ರಾಫಿಕ್ ನಲ್ಲಿ ವಿಮಾನ ನಿಲ್ದಾಣದಿಂದ ನಗರಕ್ಕೆ ಕರೆ ತರಲಾಯಿತು‌.  ನಗರದ ಖಾಸಗಿ ಹೋಟೆಲ್‌ನಲ್ಲಿ ಅವರು ತಂಗಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೂರು ದಿನಗಳ ಕಾಲ ಮಂಗಳೂರು  ನಗರದಲ್ಲಿ  ತಂಗಲಿರುವ ದಲಾಯಿಲಾಮ ಅವರು  ಆ. 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ನಯನ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸುವರು.  ಆ.31 ರಂದು  ಅವರು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

PREV
click me!

Recommended Stories

5 ಸಾವಿರ ಕೊಡ್ತೀನಿ ರೂಮ್‌ಗೆ ಬಾ ಅಂದ್ರು? ಬ್ರಹ್ಮಾನಂದ ಗುರೂಜಿಯ ವಿಡಿಯೋ ವೈರಲ್
ಬೆಂಗಳೂರಿಗಾಗಿ ಶ್ರಮಿಸಿದೆವು ಆದ್ರೂ ತಮ್ಮನನ್ನು ಸೋಲಿಸಿದ್ರಿ: ಅಪಾರ್ಟ್‌ಮೆಂಟ್‌ ನಿವಾಸಿಗಳ ವಿರುದ್ಧ ಕಿಡಿಯಾದ ಡಿಕೆಶಿ