ಉನ್ನತ ಶಿಕ್ಷಣದಲ್ಲೂ ಕ್ರೀಡೆ ಅತ್ಯಂತ ಅವಶ್ಯಕವಾಗಿದೆ

By Kannadaprabha News  |  First Published Jul 1, 2023, 7:23 AM IST

ಉನ್ನತ ಶಿಕ್ಷಣದಲ್ಲಿ ಕ್ರೀಡೆಯು ಇಂದು ಅತ್ಯಂತ ಅವಶ್ಯಕವಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಮೈಸೂರು ವಿಭಾಗದ ಜಂಟಿ ನಿರ್ದೇಶಕಿ ಪ್ರೊ. ವಿಜಯಲಕ್ಷ್ಮಿ ತಿಳಿಸಿದರು.


  ಮೈಸೂರು :  ಉನ್ನತ ಶಿಕ್ಷಣದಲ್ಲಿ ಕ್ರೀಡೆಯು ಇಂದು ಅತ್ಯಂತ ಅವಶ್ಯಕವಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಮೈಸೂರು ವಿಭಾಗದ ಜಂಟಿ ನಿರ್ದೇಶಕಿ ಪ್ರೊ. ವಿಜಯಲಕ್ಷ್ಮಿ ತಿಳಿಸಿದರು.

ಮೈಸೂರು ವಿಶ್ವವಿದ್ಯಾನಿಲಯ ದೈಹಿಕ ವಿಭಾಗ, ವಿಶ್ವವಿದ್ಯಾಲಯ ಅಧ್ಯಾಪಕರ ಸಂಘ, ದೈಹಿಕ ಶಿಕ್ಷಣ ಅಧ್ಯಾಪಕರ ಸಂಘದ ವತಿಯಿಂದ ಸ್ಪೋಟ್ಸ್‌ರ್‍ ಪೆವಿಲಿಯನ್‌ನಲ್ಲಿ ಆಯೋಜಿಸಲಾಗಿದ್ದ ಉನ್ನತ ಶಿಕ್ಷಣದಲ್ಲಿ ದೈಹಿಕ ಶಿಕ್ಷಣದ ಮಹತ್ವ ಕುರಿತ ಒಂದು ದಿನದ ಕಾರ್ಯಾಗಾರವನ್ನು ಅವರು ಉದ್ಘಾಟಿಸಿ ಮಾತನಾಡಿದರು.

Latest Videos

undefined

ಉನ್ನತ ಶಿಕ್ಷಣದಲ್ಲಿ ಹಲವಾರು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಂತಹ ಗಳಲ್ಲಿ ದೈಹಿಕ, ಮಾನಸಿಕ, ಭಾವನಾತ್ಮಕ ಆರೋಗ್ಯ ಕಾಪಾಡುವುದಲ್ಲದೆ ಅವರ ಬೌದ್ಧಿಕ ಗುಣಮಟ್ಟವು ಸಹ ಉತ್ತಮವಾಗಿದ್ದು, ಇಂತಹ ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳನ್ನು ಕೂಡ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಕ್ರೀಡೆಯಲ್ಲಿ ಭಾಗವಹಿಸುವಂತಹ ವಿದ್ಯಾರ್ಥಿಗಳು ಇಂದು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಪದಕ ತಂದುಕೊಡುತ್ತಿರುವುದು ಸಹ ಹೆಮ್ಮೆಯ ವಿಷಯವಾಗಿದೆ ಎಂದು ಅವರು ಹೇಳಿದರು.

ಕಾಲೇಜು ಶಿಕ್ಷಣ ಇಲಾಖೆಯ ಕೇಂದ್ರ ಕಚೇರಿ ನೋಡಲ್‌ ಅಧಿಕಾರಿ ಡಾ.ಆರ್‌. ಶ್ರೀಕಾಂತ್‌ ಮಾತನಾಡಿ, ದೈಹಿಕ ಶಿಕ್ಷಣ ಮತ್ತು ಕ್ರೀಡೆಯು ಹಲವಾರು ಆಯಾಮಗಳಲ್ಲಿ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೀತಿ ಜೀವನ ನಿರ್ವಹಣೆಗೆ ಅತ್ಯಂತ ವಿಪುಲವಾದ ಅವಕಾಶವನ್ನು ಕಲ್ಪಿಸುವ ಒಂದು ಉತ್ತಮ ವೇದಿಕೆಯಾಗಿದೆ ಎಂದರು.

ದೈಹಿಕ ಶಿಕ್ಷಣ ಮತ್ತು ಕ್ರೀಡೆ ಯೋಗ ಇವುಗಳ ಮೂಲಕ ಸ್ವಾಸ್ಥ್ಯ ಆರೋಗ್ಯವಂತ ಸಮಾಜವನ್ನು ನಿರ್ಮಿಸುವುದರ ಜೊತೆಗೆ, ಇಂದಿನ ಯುವ ಜನತೆ ಆರೋಗ್ಯದ ಕಡೆ ಹೆಚ್ಚು ಹೆಚ್ಚು ಕಾಳಜಿ ವಹಿಸುತ್ತಿರುವುದರಿಂದ ಇಂದು ಕ್ರೀಡೆಯು ಆರೋಗ್ಯ, ಮನೋರಂಜನದಾಯಕ ಚಟುವಟಿಕೆಯ ಜೊತೆಗೆ ಸಾವಿರಾರು ಜನಗಳಿಗೆ ಉದ್ಯೋಗ ಅವಕಾಶ ಕಲ್ಪಿಸುವ ಉತ್ತಮ ವೇದಿಕೆಯಾಗಿದೆ. ಆರ್ಥಿಕ ಪುನಶ್ಚೇತನಕ್ಕೂ ಸಹ ದಾರಿಯಾಗಿದೆ ಎಂದು ಅವರು ತಿಳಿಸಿದರು.

ಇದೇ ವೇಳೆ ಡಾ.ಪಿ. ಕೃಷ್ಣಯ್ಯ ಅವರನ್ನು ಸನ್ಮಾನಿಸಲಾಯಿತು. 100 ಹೆಚ್ಚು ವಿವಿಧ ಕಾಲೇಜುಗಳ ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕರು ಕಾರ್ಯಗಾರದಲ್ಲಿ ಭಾಗವಹಿಸಿದ್ದರು.

ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗ ನಿರ್ದೇಶಕ ಡಾ.ಸಿ. ವೆಂಕಟೇಶ್‌, ನಿವೃತ್ತ ನಿರ್ದೇಶಕ ಡಾ.ಸಿ. ಕೃಷ್ಣ, ದೈಹಿಕ ಶಿಕ್ಷಣ ಅಧ್ಯಾಪಕರ ಸಂಘದ ಅಧ್ಯಕ್ಷ ಡಾ.ಎಚ್‌.ವಿ. ಉದಯಕುಮಾರ್‌, ಕಾರ್ಯದರ್ಶಿ ಡಾ.ಕೆ.ಎಸ್‌. ಭಾಸ್ಕರ್‌, ಖಜಾಂಚಿ ಡಾ.ಬಿ.ವಿ. ಗಣೇಶ್‌ ಇದ್ದರು. ಡಾ. ಶಾಂತರಾಜು ನಿರೂಪಿಸಿದರು. ಆಂತೋನಿ ಮೊಸಸ್‌ ಪ್ರಾರ್ಥಿಸಿದರು. ಡಾ.ಎಚ್‌.ಎನ್‌. ಭಾಸ್ಕರ ವಂದಿಸಿದರು.

click me!