ರಮೇಶ್ ಕುಮಾರ್, ಖಾದರ್ ವಿರುದ್ಧ ನೂರಾರು ಕೋಟಿ ರು. ಅವ್ಯವಹಾರ ಆರೋಪ

By Web DeskFirst Published Aug 6, 2019, 4:19 PM IST
Highlights

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಮಾಜಿ ಸಚಿವ ಯುಟಿ ಖಾದರ್ ವಿರುದ್ಧ ನೂರಾರು ಕೋಟಿ ರೂಪಾಯಿಯ ಅವ್ಯವಹಾರ ನಡೆದಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. 

ಹುಬ್ಬಳ್ಳಿ, (ಆ.06): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 500 ಕೋಟಿ ರೂಪಾಯಿ ಅವ್ಯವಹಾರ  ನಡೆದಿದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖಂಡ ಎಸ್.ಆರ್. ಹಿರೇಮಠ ಗಂಭೀರ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು (ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಿನ ಸಚಿವರಾಗಿದ್ದ ರಮೇಶ್‌ ಕುಮಾರ ಮತ್ತು ಯು.ಟಿ.ಖಾದರ್ ಅಧಿಕಾರ ಅವಧಿಯಲ್ಲಿ ಈ ಹಗರಣ ನಡೆದಿದೆ ಎಂದು ಆರೋಪಿಸಿದ್ದಾರೆ.

‘ಇವರ ಕಿರುಕುಳದಿಂದಲೇ ಕಾಫಿ ಡೇ ಕಿಂಗ್ ಸಿದ್ಧಾರ್ಥ ಆತ್ಮಹತ್ಯೆ’

ಔಷಧ ಹಾಗೂ ತುರ್ತುವಾಹನ ಖರೀದಿಯಲ್ಲಿ500 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ. ಈ ಹಗರಣದ ಕುರಿತು ಪಾರದರ್ಶಕ ಹಾಗೂ ಸ್ವತಂತ್ರ ಸಂಸ್ಥೆಯಿಂದ ತನಿಖೆ ಆಗಬೇಕೆಂದು ಆಗ್ರಹಿಸಿದರು. 

ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಯು.ಟಿ.ಖಾದರ್ ಆರೋಗ್ಯ ಸಚಿವರಾಗಿದ್ದರು. ಬಳಿಕ ಈ ಖಾತೆಯನ್ನು ರಮೇಶ್ ಕುಮಾರ್ ಅವರಿಗೆ ನೀಡಲಾಗಿತ್ತು. 

click me!