ರೈತ ವಿರೋಧಿ ಬಿಜೆಪಿಯನ್ನು ಸೋಲಿಸಿ: ಎಸ್‌.ಆರ್‌. ಹಿರೇಮಠ

By Kannadaprabha News  |  First Published Apr 15, 2021, 12:59 PM IST

ಕೃಷಿ ಕಾಯ್ದೆಯು ಸಂಪೂರ್ಣವಾಗಿ ರಾಜ್ಯ ಸರ್ಕಾರದ ಸುಪರ್ದಿಗೆ ಬರುತ್ತದೆ| ಕೇಂದ್ರ ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ, ಕಾಯ್ದೆಗಳನ್ನು ಉಲ್ಲಂಘಿಸಿದೆ: ಹಿರೇಮಠ| 


ಧಾರವಾಡ(ಏ.15): ರೈತ ವಿರೋಧಿ ಮತ್ತು ಸಂವಿಧಾನ ವಿರೋಧಿ ಬಿಜೆಪಿಯನ್ನು ಬೆಳಗಾವಿಯ ಲೋಕಸಭಾ ಮತ್ತು ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯಲ್ಲಿ ಸೋಲಿಸಲು ರಾಜ್ಯದ ಜನತೆ ಪಣ ತೊಡಬೇಕೆಂದು ಎಂದು ಸಂಯುಕ್ತ ಹೋರಾಟ ಕರ್ನಾಟಕದ ಎಸ್‌.ಆರ್‌. ಹಿರೇಮಠ ಆಗ್ರಹಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿದರೂ ಯಾವುದೇ ಪ್ರತಿಕ್ರಿಯೆ ಇಲ್ಲ. ಅದಕ್ಕಾಗಿ ಉಪಚುನಾವಣೆ ಸೂಕ್ತ ಸಮಯವಾಗಿದ್ದು, ಚುನಾವಣೆಯಲ್ಲಿ ಆ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಬೇಕು. ರಾಜ್ಯದಲ್ಲಿ ಪರ್ಯಾಯ ವ್ಯವಸ್ಥೆಗೆ ಚಿಂತನೆ ನಡೆಸಬೇಕಿದೆ ಎಂದರು.

Latest Videos

undefined

ಕರ್ನಾಟಕದಲ್ಲಿ ಲಾಕ್‌ ಡೌನ್; ಕೇಂದ್ರದ ಮಾಹಿತಿ ಕೊಟ್ಟ ಸಚಿವ ಪ್ರಹ್ಲಾದ್ ಜೋಶಿ

ಡಾ. ಎಂ.ಎಸ್‌. ಸ್ವಾಮಿನಾಥನ್‌ ವರದಿ ಪ್ರಕಾರ ಎಲ್ಲ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿ ಮಾಡುವ ಕಾನೂನನ್ನು ರೂಪಿಸಬೇಕು ಮತ್ತು ವಿದ್ಯುಚ್ಛಕ್ತಿ ಬಿಲ್‌ ಹಿಂದಕ್ಕೆ ಪಡೆಯಬೇಕು. ಇದು ಜಾರಿಯಾದರೆ ಖಾಸಗೀಕರಣಕ್ಕೆ ದಾರಿ ಮಾಡಿಕೊಟ್ಟು ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ಅಡಗಿದೆ ಎಂದರು.

ಕೇಂದ್ರದ ಬಿಜೆಪಿ ಸರ್ಕಾರದ ಹಿಂದೆ ಇಂದಿರಾಗಾಂಧಿ ತುರ್ತು ಪರಿಸ್ಥಿತಿಯಲ್ಲಿ ಸಂವಿಧಾನ ವಿರುದ್ಧ ಕೈಗೊಂಡ ಕ್ರಮಗಳಂತೆ ನಡೆದುಕೊಳ್ಳುತ್ತಿದೆ. ಕೃಷಿ ಕಾಯ್ದೆಯು ಸಂಪೂರ್ಣವಾಗಿ ರಾಜ್ಯ ಸರ್ಕಾರದ ಸುಪರ್ದಿಗೆ ಬರುತ್ತದೆ. ಆದರೆ, ಕೇಂದ್ರ ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ, ಕಾಯ್ದೆಗಳನ್ನು ಉಲ್ಲಂಘಿಸಿದೆ ಎಂದು ದೂರಿದ್ದಾರೆ.
 

click me!