ಕೋವಿಡ್‌ಗೆ ಶೃಂಗೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಬಲಿ

By Suvarna NewsFirst Published May 12, 2021, 11:28 AM IST
Highlights
  • ಶೃಂಗೇರಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ಕೋವಿಡ್‌ಗೆ ಬಲಿ
  • ಚಿಕಿತ್ಸೆ ಫಲಿಸದೆ ದಾವಣಗೆರೆ ಆಸ್ಪತ್ರೆಯಲ್ಲಿ ನಿಧನ
  • ಮೂಲತಃ ಶಿವಮೊಗ್ಗ ಜಿಲ್ಲೆಯವರಾದ ಡಾ.ನಾಗರಾಜ್ 

 ಚಿಕ್ಕಮಗಳೂರು (ಮೇ.12): ಕೊರೋನಾ ಮಹಾಮಾರಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿನವೂ ಏರಿಕೆಯಾಗುತ್ತಲೇ ಇದೆ. ರಾಜ್ಯದಲ್ಲಿ ಸೋಂಕು ಏರುಗತಿಯಲ್ಲೇ ಸಾಗುತ್ತಿದ್ದು, ಶೃಂಗೇರಿಯ ಬಿಇಒ ಮಹಾಮಾರಿಗೆ ಬಲಿಯಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಬಿಇಒ  ಡಾ. ನಾಗರಾಜ್ (51) ಕೊರೋನಾ ಸೋಂಕು ತಗುಲಿ ಇಂದು ಬೆಳಗ್ಗೆ  ದಾವಣಗೆರೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 

ಮನೆಯವರಿಗೆ ಕೊರೊನಾ ಬರುತ್ತದೆಂದು ಹೆದರಿ ನಿವೃತ್ತ ಉಪತಹಶೀಲ್ದಾರ್ ಆತ್ಮಹತ್ಯೆ ...

ಕಳೆದ ಒಂದು ವಾರದ ಹಿಂದೆ ನಾಗರಾಜ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಆದರೂ ಅವರು ಎಲ್ಲಾ ಕಡೆ ಓಡಾಡಿದ್ದರು. ಆದರೆ ಮಂಗಳವಾರ ಜ್ವರ ತಿವ್ರವಾಗಿದ್ದರಿಂದ ನಾಗರಾಜ್ ದಾವಣಗೆರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. 

ಮೂಲತಃ ಶಿವಮೊಗ್ಗ ಜಿಲ್ಲೆಯವರಾದ ಡಾ.ನಾಗರಾಜ್ ಕಳೆದ 1 ವರ್ಷದಿಂದ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.  ಮಹಾಮಾರಿ ಇದೀಗ ಅವರನ್ನು ಬಲಿಪಡೆದುಕೊಂಡಿದೆ.  ಅವರ ಪತ್ನಿ ಹಾಗೂ ಪುತ್ರ ಶಿವಮೊಗ್ಗದಲ್ಲಿ ವಾಸವಾಗಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!