ಶೃಂಗೇರಿ ಬಾಲಕಿ ರೇಪ್‌ ಕೇಸ್‌: ಮತ್ತೊಬ್ಬ ಪೊಲೀಸ್‌ ಅಧಿ​ಕಾರಿ ವರ್ಗ

By Kannadaprabha News  |  First Published Feb 7, 2021, 7:20 AM IST

ಶೃಂಗೇರಿ ತಾಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ನಡೆ​ದಿ​ರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಪೊಲೀಸ್ ಅಧಿಕಾರಿಯನ್ನು ವರ್ಗ ಮಾಡಲಾಗಿದೆ. 


ಚಿಕ್ಕಮಗಳೂರು (ಫೆ.06): ಶೃಂಗೇರಿ ತಾಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ನಡೆ​ದಿ​ರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಶೃಂಗೇರಿ ಪೊಲೀಸ್‌ ಠಾಣೆ SI ಕೀರ್ತಿಕುಮಾರ್‌ ಅವರನ್ನು ವರ್ಗಾವಣೆ ಮಾಡಲಾಗಿದೆ. 

ಕೀರ್ತಿಕುಮಾರ್‌ ಅವರನ್ನು ಕುಮಟಾ ಠಾಣೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಶುಕ್ರವಾರವಷ್ಟೇ ವೃತ್ತ ನಿರೀಕ್ಷಕ ಸಿದ್ದರಾಮಯ್ಯ ಅವರನ್ನು ಸಸ್ಪೆಂಡ್‌ ಮಾಡಲಾಗಿತ್ತು.

Tap to resize

Latest Videos

'ಶೃಂಗೇರಿ ಬಾಲಕಿ ರೇಪ್ ಕೇಸ್ : ಕಾಮುಕರಿಗೆ ಗಲ್ಲು ನಿಶ್ಚಿತ' ..

ಕಳೆದ ವಾರ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲು ಹಾಗೂ ಆರೋಪಿಗಳ ಬಂಧನದ ವಿಷಯದಲ್ಲಿ ಮೃದುಧೋರಣೆ ತಾಳಿರುವ ಹಿನ್ನೆಲೆ ವೃತ್ತ ನಿರೀಕ್ಷಕರು ಹಾಗೂ ಸಬ್‌ಇನ್ಸ್‌ಪೆಕ್ಟರ್ ಅವರನ್ನು ತನಿಖೆಯಿಂದ ಕೈ ಬಿಟ್ಟು ಹೊಸ ತಂಡದೊಂದಿಗೆ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಶ್ರುತಿ ಅವರು ತನಿಖೆ ಕೈಗೊಂಡಿದ್ದಾರೆ.

click me!