
ಚಿಕ್ಕಮಗಳೂರು (ಸೆ.18): ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಹಿಂದೂ ಮಹಿಳೆಯೊಬ್ಬರ ಜೊತೆ ಲಾಡ್ಜ್‌ಗೆ ಹೋಗಿದ್ದ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆತ ಹಿಂದೂ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ (Fake aadhaar Card) ಮಾಡಿಸಿಕೊಂಡಿದ್ದು ಬಯಲಾಗಿದೆ.
ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರು ಮೂಲದ ಅಬ್ದುಲ್ ಸಮದ್ (42) ಎಂಬ ವ್ಯಕ್ತಿ, ಶೃಂಗೇರಿ ತಾಲ್ಲೂಕಿನ 38 ವರ್ಷದ ಹಿಂದೂ ಮಹಿಳೆಯೊಬ್ಬರ ಜೊತೆ ಲಾಡ್ಜ್‌ಗೆ ಹೋಗಿದ್ದನು. ಈ ವೇಳೆ, ಇಬ್ಬರೂ ಗಂಡ-ಹೆಂಡತಿ (Husband and wife) ಎಂದು ಹೇಳಿ ಲಾಡ್ಜ್‌ನಲ್ಲಿ ರೂಮ್ ಪಡೆದಿದ್ದರು. ಆದರೆ, ಲಾಡ್ಜ್ ಸಿಬ್ಬಂದಿಗೆ ಅನುಮಾನ ಬಂದಾಗ, ಸಮದ್ ಕೊಟ್ಟ ಗುರುತಿನ ಚೀಟಿಯನ್ನು ಪರಿಶೀಲಿಸಿದಾಗ, ಅದು ನಕಲಿ ಎಂದು ಗೊತ್ತಾಗಿದೆ. ಅಬ್ದುಲ್ ಸಮದ್ ತನ್ನ ಅಸಲಿ ಹೆಸರನ್ನು ಬದಲಿಸಿ, 'ರಮೇಶ್' ಎಂಬ ಹೆಸರಿನಲ್ಲಿ ಆಧಾರ್ ಕಾರ್ಡ್ ಎಡಿಟ್ ಮಾಡಿಸಿಕೊಂಡಿದ್ದನು.
ಈ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಶೃಂಗೇರಿ ಪೊಲೀಸರು (Sringeri Police Station), ಅಬ್ದುಲ್ ಸಮದ್ ಮತ್ತು ಆತನ ಜೊತೆಗಿದ್ದ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ನಂತರದ ತನಿಖೆಯಲ್ಲಿ, ಅಬ್ದುಲ್ ಸಮದ್ (Abdul Samad) ಬೇರೆ ಕೋಮಿನ ವ್ಯಕ್ತಿಯಾಗಿದ್ದು, ಹಿಂದೂ ಹೆಸರಿನಲ್ಲಿ ಗುರುತಿನ ಚೀಟಿ ನಕಲಿ ಮಾಡಿಸಿಕೊಂಡಿದ್ದು ದೃಢಪಟ್ಟಿದೆ. ಸದ್ಯ, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿರುವುದನ್ನು ತೋರಿಸುತ್ತದೆ. ಹಾಗಾಗಿ ಸಾರ್ವಜನಿಕರು ಈ ಬಗ್ಗೆ ಎಚ್ಚರ ವಹಿಸಬೇಕು.