ಶೃಂಗೇರಿ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ಐವರನ್ನು ಅರೆಸ್ಟ್ ಮಾಡಲಾಗಿದೆ. 30ರಲ್ಲಿ ಈಗ 13 ಆರೋಪಿಗಳು ಬಂಧಿತರಾಗಿದ್ದಾರೆ.
ಚಿಕ್ಕಮಗಳೂರು (ಫೆ.08): ಶೃಂಗೇರಿ ತಾಲೂಕಿನಲ್ಲಿ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಐವರು ಆರೋಪಿಗಳನ್ನು ಶೃಂಗೇರಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಚಿಕ್ಕಮ್ಮ ಸ್ಲಾಲ್ ಅಭಿ (ಎ1) ಸೇರಿದಂತೆ 8 ಮಂದಿಯನ್ನು ಶೃಂಗೇರಿ ಪೊಲೀಸರು ಬಂಧಿಸಿದ್ದರು. ಭಾನುವಾರ 5 ಮಂದಿಯನ್ನು ಬಂಧಿಸಲಾಗಿದ್ದು ಒಟ್ಟು ಬಂಧಿತರ ಸಂಖ್ಯೆ 13ಕ್ಕೇರಿದೆ.
ಮಲೆನಾಡ ನಿರ್ಭಯ.. ಶೃಂಗೇರಿಯ ನೀಚರು ಒಬ್ಬಿಬ್ಬರಲ್ಲ! ...
ಕಳೆದ ನಾಲ್ಕು ತಿಂಗಳಲ್ಲಿ ತನ್ನ ಮೇಲೆ ಸುಮಾರು 30 ಮಂದಿ ಅತ್ಯಾಚಾರ ನಡೆಸಿದ್ದು, ಈ ಪೈಕಿ ಬಾಲಕಿ ಕೆಲವರ ಹೆಸರು ತಿಳಿಸಿದ ಮೇರೆಗೆ ಅವರ ಚಿಕ್ಕಮ್ಮ ಸೇರಿದಂತೆ 17 ಮಂದಿಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಸದ್ಯ ಬಾಲಕಿ ಚಿಕ್ಕಮಗಳೂರಿನ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಸೇರಿರುವ ಸ್ವಾಧಾರ ಸಂಸ್ಥೆಯಲ್ಲಿ ಆಶ್ರಯ ಪಡೆದಿದ್ದಾಳೆ.