ದತ್ತಪೀಠದ ಬಗ್ಗೆ ವಿವಾದಾತ್ಮಕ ಹೇಳಿಕೆ: ಕೊನೆಗೂ ಕ್ಷಮೆಯಾಚಿಸಿದ ಶಾಸಕ ಟಿ.ಡಿ.ರಾಜೇಗೌಡ

By Govindaraj S  |  First Published Jan 25, 2023, 8:42 PM IST

ದತ್ತಪೀಠ ಹಾಗೂ ಅಯೋಧ್ಯೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಕೊನೆಗೂ ಕ್ಷಮೆಯಾಚಿಸಿದ್ದಾರೆ. ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳಿರುವ ಟಿ.ಡಿ ರಾಜೇಗೌಡ ವಿಡಿಯೋ ಮೂಲಕ ಕ್ಷಮೆಯಾಚಿಸಿದ್ದಾರೆ. 


ವರದಿ: ಆಲ್ದೂರು ಕಿರಣ್,ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ಜ.25): ದತ್ತಪೀಠ ಹಾಗೂ ಅಯೋಧ್ಯೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಕೊನೆಗೂ ಕ್ಷಮೆಯಾಚಿಸಿದ್ದಾರೆ. ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳಿರುವ ಟಿ.ಡಿ ರಾಜೇಗೌಡ ವಿಡಿಯೋ ಮೂಲಕ ಕ್ಷಮೆಯಾಚಿಸಿದ್ದಾರೆ. ವಿಡಿಯೋದಲ್ಲಿ ಹಳ್ಳಿಗಳಲ್ಲಿ ರೂಡಿಯಿರುವ ಶಬ್ದವನ್ನು ಬಳಸಿದ್ದೇನೆ. ಆ ಶಬ್ದ ಬಳಕೆ ಯಾರ ಸಂಸ್ಕೃತಿಯೂ ಆಗಬಾರದು. ಆ ಶಬ್ದ ಬಳಸಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕ್ಷಮೆಯಾಚಿಸಿದ್ದಾರೆ. 

Latest Videos

undefined

ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಮಾಡುತ್ತಿದ್ದಾರೆ ಆದ್ದರಿಂದ ಆಕ್ರೋಶವಾಗಿ ಮಾತನಾಡಿದೆ. ದತ್ತಮಾಲೆ ಹಾಕಲಿಲ್ಲ ಎಂದು ದಲಿತ ವಿದ್ಯಾರ್ಥಿಗೆ ಹಲ್ಲೆ ಮಾಡಿದರು. ಹಲ್ಲೆ ವಿಷಯವಾಗಿ ಬುದ್ದಿ ಹೇಳುವ ಕೆಲಸವನ್ನು ಮಾಡಿದ್ದೇನೆ. ಶಾಸಕ ಟಿ.ಡಿ.ರಾಜೇಗೌಡ ಅವರ ಮಾತಿಗೆ ಹಿಂದೂ ಸಂಘಟನೆಗಳು ಆಕ್ರೋಶ ಹೊರ ಹಾಕಿದರು. 

Chikkamagaluru: ಅಯೋಧ್ಯೆ, ಬಾಬ್ರಿ ಮಸೀದಿ ವಿಚಾರ;ಮತ್ತೆ ನಾಲಗೆ ಹರಿಬಿಟ್ಟ ಕಾಂಗ್ರೆಸ್ ಶಾಸಕ!

ಕ್ಷಮೆ ಕೇಳಿದ್ರು ನಿಲ್ಲದ ಹಿಂದೂ ಸಂಘಟನೆಗಳ ಆಕ್ರೋಶ: ದತ್ತಪೀಠ, ಅಯೋಧ್ಯೆ ಹೋರಾಟದ ಬಗ್ಗೆ ಕೈ ಶಾಸಕರ ವಿವಾದಾತ್ಮಕ ಹೇಳಿಕೆ ಹಿನ್ನೆಲೆ ಮಲೆನಾಡಿನಲ್ಲಿ ಶಾಸಕ ರಾಜೇಗೌಡರ ವಿರುದ್ದ ಸಾಲು ಸಾಲು ಪ್ರತಿಭಟನೆಗಳು ನಡೆದಿವೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರೀ ಪ್ರತಿಭಟನೆ ನಡೆದಿದ್ದು, ಶಾಸಕ ಹೇಳಿಕೆಗೆ ವ್ಯಾಪಾಕ ಟೀಕೆ ವ್ಯಕ್ತವಾಗಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೊಪ್ಪ, ಎನ್.ಆರ್.ಪುರ, ಬಾಳೆಹೊನ್ನೂರಿನಲ್ಲಿ ಪ್ರತಿಭಟನೆ ನಡೆಸಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕೈ ಶಾಸಕ ಹೇಳಿಕೆಯನ್ನು ಖಂಡಿಸಿದರು. 

ಶಾಸಕರ ಕಛೇರಿಗೆ ಮುತ್ತಿಗೆ ಯತ್ನ: ಕಾರ್ಯಕರ್ತರ ಬಂಧನ ಬಿಡುಗಡೆ: ಶಾಸಕ ರಾಜೇಗೌಡರ ವಿವಾದಾತ್ಮಕ ಆಡಿಯೋವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ಎನ್.ಆರ್.ಪುರದ ಅಂಬೇಡ್ಕರ್ ವೃತ್ತದ ಬಳಿಯಿರುವ ಶಾಸಕ ಟಿ.ಡಿ.ರಾಜೇಗೌಡ ಕಛೇರಿಗೆ ಮುತ್ತಿಗೆ ಹಾಕುವ ಯತ್ನವನ್ನು ನಡೆಸಿದರು. ಶಾಸಕರ ಕಛೇರಿಗೆ ಮುತ್ತಿಗೆ ಯತ್ನ ನಡೆಸಿದ ಹಿನ್ನೆಲೆ ನೂರಾರು ಭಜರಂಗದಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು. 

Ramanagara: ರಾಜ್ಯದಲ್ಲೇ ಮೊದಲ ಬ್ರೈನ್ ಮ್ಯಾಪಿಂಗ್ ಮೂಲಕ ಕೊಲೆ ರಹಸ್ಯ ಬಯಲು!

ಶಾಸಕ ರಾಜೇಗೌಡರ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ: ಶಾಸಕ ಟಿ.ಡಿ ರಾಜೇಗೌಡರ ಕಛೇರಿಗೆ ಮುತ್ತಿಗೆ ಯತ್ನ ನಡೆಸುವ ಮುನ್ನ ಅಂಬೇಡ್ಕರ್ ವೃತ್ತದಲ್ಲಿ ಶಾಸಕ ಪ್ರತಿಕೃತಿಗೆ ಚಪ್ಪಲಿ ಹಾಕಿ ಅದನ್ನು ದಹಿಸಿ ಮೂಲಕ ಭಜರಂಗದಳದ ಕಾರ್ಯಕರ್ತರು ಆಕ್ರೋಶವನ್ನು ಹೊರಹಾಕಿದರು. ಶಾಸಕ ರಾಜೇಗೌಡರ ಪ್ರತಿಕೃತಿ ದಹಿಸುವ ಮೂಲಕ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ನೂರಾರು ಬಜರಂಗದಳದ ಕಾರ್ಯಕರ್ತರು ಭಾಗವಹಿಸಿದ್ದರು.

click me!