ಶ್ರೀರಂಗಪಟ್ಟಣ ದಸರಾ ಅ.16 ರಿಂದ ಆರಂಭ: ಪೊಲೀಸ್ ಬ್ಯಾಂಡ್ ಮತ್ತು ಅಶ್ವಪಡೆಗಳು ಭಾಗಿ

By Sathish Kumar KH  |  First Published Aug 19, 2023, 7:16 PM IST

ಶ್ರೀರಂಗಪಟ್ಟಣ ದಸರಾ-2023 ಮಹೋತ್ಸವವನ್ನು ಅಕ್ಟೋಬರ್ 16 ರಿಂದ ಆಚರಿಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.


ಮಂಡ್ಯ (ಆ.19): ಮಂಡ್ಯ ಜಿಲ್ಲಾಡಳಿತದ ವತಿಯಿಂದ ಶ್ರೀರಂಗಪಟ್ಟಣ ದಸರಾ-2023 ಮಹೋತ್ಸವವನ್ನು ಅಕ್ಟೋಬರ್ 16 ರಿಂದ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶ್ರೀರಂಗಪಟ್ಟಣ ದಸರಾ ಕುರಿತು ಶನಿವಾರ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಮಾತನಾಡಿದರು. ದಸರಾ ಮಹೋತ್ಸವ ಅಚ್ಚುಕಟ್ಟಾಗಿ, ಪಾರಂಪರಿಕವಾಗಿ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅಧಿಕಾರಿಗಳು ಪೂರ್ವಭಾವಿಯಾಗಿ ಸಿದ್ಧತೆಗಳನ್ನು ಮಾಡಿಕೊಂಡು ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು. ಜಿಲ್ಲೆಯ ಸಂಸ್ಕೃತಿಯ ಬಗ್ಗೆ ಹೆಚ್ಚಿನ ಕಾರ್ಯಕ್ರಮ ಆಯೋಜಿಸಿ ಎಂದು ಸೂಚನೆ ನೀಡಿದರು.

Latest Videos

undefined

ಮಾಜಿ ರಾಷ್ಟ್ರಪತಿ ಸರ್ವೇಪಲ್ಲಿ ರಾಧಾಕೃಷ್ಣನ್‌ರಂತೆ, ಬೆಳ್ಳಿ ಸಾರೋಟಿನಲ್ಲಿ ಶಿಕ್ಷಕಿ ಮೆರವಣಿಗೆ ಮಾಡಿದ ವಿದ್ಯಾರ್ಥಿಗಳು

ಕಿರಂಗೂರು ಬನ್ನಿಮಂಟಪ, ಜಂಬೂ ಸವಾರಿಗೆ ಸಿದ್ಧತೆ ಮಾಡಿ: ಕಿರಂಗೂರು ಬನ್ನಿಮಂಟಪ, ಜಂಬೂ ಸವಾರಿ ಸಾಗುವ ರಸ್ತೆ, ಕಾರ್ಯಕ್ರಮ ನಡೆಯುವ ವೇದಿಕೆ ಸ್ಥಳಗಳನ್ನು ಪರಿಶೀಲನೆ ನಡೆಸಿ ದುರಸ್ತಿ ಕೆಲಸಗಳಿದ್ದಲ್ಲಿ ಪ್ರಾರಂಭಿಸಿ ಬೇಗನೇ ಪೂರ್ಣಗೊಳಿಸಬೇಕು. ಶ್ರೀರಂಗಪಟ್ಟಣ ದಸರಾ ನಡೆಯುವ ದಿನಗಳಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಆಕರ್ಷಣೀಯ ದೀಪಾಲಂಕಾರವನ್ನು ಮಾಡಬೇಕು. ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಂದ ದೀಪಾಲಂಕಾರ ಆಯೋಜಿಸಿ ಶ್ರೀರಂಗಪಟ್ಟಣ ದಸರಾಗೆ ವಿಶೇಷ ಮೆರಗು ನೀಡುವಂತೆ ತಿಳಿಸಿದರು.

ಶ್ರೀರಂಗಪಟ್ಟಣದಲ್ಲಿ ಪೊಲೀಸ್‌ ಬ್ಯಾಂಡ್‌ ಆಯೋಜನೆಗೆ ಚಿಂತನೆ: ಮೆರವಣಿಗೆಯಲ್ಲಿ ಪೊಲೀಸ್ ಬ್ಯಾಂಡ್ ಮತ್ತು ಅಶ್ವಪಡೆ ಭಾಗವಹಿಸಲು ವ್ಯವಸ್ಥೆ ಮಾಡಿಕೊಡುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆಯಬೇಕು. ಶ್ರೀರಗಪಟ್ಟಣ  ದಸರಾ ಮಹೋತ್ಸವವನ್ನು 5 ದಿನಗಳ ಕಾಲ ಆಯೋಜಿನೆ ಮಾಡುವುದರಿಂದ ರೈತ, ಮಹಿಳಾ, ಮಕ್ಕಳ ದಸರಾ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬಹುದು‌ ಎಂದು ಶ್ರೀರಂಗಪಟ್ಟಣ ಶಾಸಕ ರಾಮೇಶ ಬಾಬು ಬಂಡೀಸಿದ್ದೇಗೌಡ ತಿಳಿಸಿದರು. ಇನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ಈ ಬಾರಿ ಹೆಚ್ಚಿನ‌ ಅನುದಾನ ನೀಡುವಂತೆ ಮನವಿ ಮಾಡಲಾಗಿದ್ದು, ಕೃಷಿ ಸಚಿವರು‌‌ ಚರ್ಚಿಸುವಂತೆ ಕೋರಿದರು.

ಬೆಂಗಳೂರು ಮೆಟ್ರೋಗೆ ಕಾಲಿಟ್ಟ ಒನ್‌ ನೇಷನ್‌ ಒನ್‌ ಕಾರ್ಡ್‌: ದೇಶದೆಲ್ಲೆಡೆ ಬಳಸಲು ಅನುಕೂಲ

ದಸರಾ ಆಯೋಜನೆಗೆ ವಿವಿಧ ಸಮಿತಿಗಳ ರಚನೆ:  ದಸರಾ ಮಹೋತ್ಸವ ಆಯೋಜನೆಗೆ ಸಂಬಂಧಿಸಿದಂತೆ ಜಿಲ್ಲೆಯ ವಿಧಾನಸಭಾ ಹಾಗೂ ವಿಧಾನಪರಿಷತ್ ಶಾಸಕರನ್ನೊಳಗೊಂಡ ಸಂಪೂರ್ಣ ದಸರಾ ಆಚರಣಾ ಸಮಿತಿ, ವೇದಿಕೆ ಸಮಿತಿ, ಸಾಂಸ್ಕೃತಿಕ ಸಮಿತಿ, ಮೆರವಣಿಗೆ, ವಸ್ತು ಪ್ರದರ್ಶನ, ಆರೋಗ್ಯ, ನಗರ ಅಲಂಕಾರ, ಕ್ರೀಡಾ, ಆಹಾರ ಹಾಗೂ ಹಣಕಾಸು ಸಮಿತಿ ರಚಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್‌ ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಪಿ.ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ವಿಧಾನ ಪರಿಷತ್ ಶಾಸಕರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಅರಣ್ಯಾಧಿಕಾರಿ ರುದ್ರನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

click me!