ನೇಣುಬಿಗಿದು SSLC ವಿದ್ಯಾರ್ಥಿ ಆತ್ಮಹತ್ಯೆ

Kannadaprabha News   | Asianet News
Published : May 22, 2020, 11:55 AM IST
ನೇಣುಬಿಗಿದು SSLC ವಿದ್ಯಾರ್ಥಿ ಆತ್ಮಹತ್ಯೆ

ಸಾರಾಂಶ

ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಂಬಾರು ಗದ್ದೆ ಮನೆ ನಿವಾಸಿ ತಿಮ್ಮಪ್ಪ ಗೌಡ ಎಂಬುವರ ಪುತ್ರ, ಹತ್ತನೇ ತರಗತಿ ವಿದ್ಯಾರ್ಥಿ ನಂದನ್‌ ಕುಮಾರ್‌ ನೇಣುಬಿಗಿದು ಆತ್ಮಹತ್ಯೆ ಮಾಡಿದ ಘಟನೆ ಗುರುವಾರ ನಡೆದಿದೆ.

ಉಪ್ಪಿನಂಗಡಿ(ಮೇ 22): ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಂಬಾರು ಗದ್ದೆ ಮನೆ ನಿವಾಸಿ ತಿಮ್ಮಪ್ಪ ಗೌಡ ಎಂಬುವರ ಪುತ್ರ, ಹತ್ತನೇ ತರಗತಿ ವಿದ್ಯಾರ್ಥಿ ನಂದನ್‌ ಕುಮಾರ್‌ ನೇಣುಬಿಗಿದು ಆತ್ಮಹತ್ಯೆ ಮಾಡಿದ ಘಟನೆ ಗುರುವಾರ ನಡೆದಿದೆ.

ಸುಬ್ರಹ್ಮಣ್ಯ ಕೆ.ಎಸ್‌.ಎಸ್‌. ಕಾಲೇಜಿನಲ್ಲಿ ಹತ್ತನೇ ತರಗತಿಯಲ್ಲಿ ಕಲಿಯುತ್ತಿದ್ದ ಈತ, ಕಳೆದ ಒಂದು ವರ್ಷದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ. ಈತ ಗುರುವಾರ ಬೆಳಗ್ಗಿನ ಉಪಹಾರ ಸೇವಿಸಿ ಮನೆಯಿಂದ ಹೊರ ಹೋದವನು ಹಿಂತಿರುಗಲಿಲ್ಲ.

ದುಬೈ ಮೂಲದ ಸೋಂಕು ಪ್ರಬಲ: ಮಂಗಳೂರಲ್ಲಿ ಹೆಚ್ಚಿದ ಪ್ರಕರಣ

ಹುಡುಕಾಡಿದಾಗ ಮನೆ ಸಮೀಪ ಮರದಕೊಂಬೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಮೃತನು ತಂದೆ, ತಾಯಿ, ಇಬ್ಬರು ಸಹೋದರಿಯರನ್ನು ಅಗಲಿದ್ದಾನೆ. ಕಡಬ ಪೊಲೀಸರಿಂದ ತನಿಖೆ ನಡೆಯುತ್ತಿದೆ.

[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]

PREV
click me!

Recommended Stories

ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!
'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!