ತಮ್ಮ ಬೇಡಿಕೆಯನ್ನೂ ಮುಂದಿಟ್ಟರು ST ಸೋಮಶೇಖರ್

Kannadaprabha News   | Asianet News
Published : Feb 09, 2020, 08:12 AM IST
ತಮ್ಮ ಬೇಡಿಕೆಯನ್ನೂ ಮುಂದಿಟ್ಟರು  ST ಸೋಮಶೇಖರ್

ಸಾರಾಂಶ

ಬೆಂಗಳೂರು ಅಭಿವೃದ್ಧಿ ಮಾಡುವ ಆಸಕ್ತಿ ನನಗಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಜವಾಬ್ದಾರಿ ನೀಡಿದರೆ ನಿರ್ವಹಿಸುತ್ತೇನೆ ಎಂದು ಎಸ್ ಟಿ ಸೋಮಶೇಖರ್ ಹೇಳಿದರು. 

ಬೆಂಗಳೂರು [ಫೆ.09]:  ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ನೂತನ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಶನಿವಾರ ಕನಕಪುರ ರಸ್ತೆಯ ಆರ್ಟ್‌ ಆಫ್‌ ಲಿವಿಂಗ್‌ ಆಶ್ರಮಕ್ಕೆ ಭೇಟಿ ನೀಡಿ ರವಿಶಂಕರ್‌ ಗುರೂಜಿ ಅವರ ಆರ್ಶೀವಾದ ಪಡೆದರು.

ಈ ವೇಳೆ ವಿಷೇಶ ಪೆನ್‌ ನೀಡಿದ ರವಿಶಂಕರ್‌ ಗುರೂಜಿ, ಇದೇ ರೀತಿಯ ಪೆನ್‌ವೊಂದನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೂ ನೀಡಿದ್ದೆ. ಅದನ್ನು ಅವರು ಇಂದಿಗೂ ತಮ್ಮಲ್ಲಿರಿಸಿಕೊಂಡಿದ್ದಾರೆ. ಇದೀಗ ನಿಮಗೆ ನೀಡುತ್ತಿದ್ದೇನೆ. ನಿಮ್ಮ ಬಳಿ ಇಟ್ಟುಕೊಂಡರೆ ಒಳ್ಳೆಯದಾಗಲಿದೆ ಎಂದು ಹೇಳಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್‌, ಎಲ್ಲ ನೂತನ ಸಚಿವರಿಗೂ ಸೋಮವಾರ ಖಾತೆ ಹಂಚುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ. ಇಂತಹದ್ದೇ ಖಾತೆ ನೀಡಬೇಕು ಎಂದು ನಾವು ಮುಖ್ಯಮಂತ್ರಿಗಳಲ್ಲಿ ಒತ್ತಡ ಹೇರುವುದಿಲ್ಲ. ಆದರೆ, ಆಸಕ್ತಿಯ ಕ್ಷೇತ್ರಗಳ ಖಾತೆ ನೀಡುವಂತೆ ಕೇಳಿದ್ದೇವೆ. ಬೆಂಗಳೂರು ಅಭಿವೃದ್ಧಿ ಮಾಡುವುದು ನನಗೆ ಆಸಕ್ತಿಯ ಕ್ಷೇತ್ರವಾಗಿದೆ. ಹೀಗಾಗಿ, ಅದೇ ಖಾತೆ ನೀಡುವಂತೆ ಕೇಳಿದ್ದೇನೆ ಎಂದರು.

ಇಂತಹದ್ದೇ ಖಾತೆ ನೀಡಬೇಕು ಎನ್ನುವುದು ಮುಖ್ಯವಲ್ಲ. ಆ ಖಾತೆಯಲ್ಲಿ ಯಾವ ರೀತಿಯ ಕೆಲಸ ಮಾಡುತ್ತೇವೆ ಎನ್ನುವುದು ಮುಖ್ಯವಾಗಲಿದೆ ಎಂದೂ ಅವರು ತಿಳಿಸಿದರು.

PREV
click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ