'ಕೊರೋನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ'

Kannadaprabha News   | Asianet News
Published : May 13, 2021, 10:07 AM IST
'ಕೊರೋನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ'

ಸಾರಾಂಶ

* ಇಂತಹ ನಿರ್ಜೀವ ಹಾಗೂ ದುರಾಡಳಿತ ನಡೆಸಿದ ಸರ್ಕಾರ ಹಿಂದೆಂದೂ ಕಂಡಿರಲಿಲ್ಲ * ಲಾಕ್‌ಡೌನ್‌ ನಿಯಮ ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ.  * ರಾಜ್ಯದ ಜನರ ನೆರವಿಗೆ ಆರ್ಥಿಕ ಹಾಗೂ ಪಡಿತರ ಪ್ಯಾಕೇಜ್‌ ಘೋಷಿಸಬೇಕು 

ಗಜೇಂದ್ರಗಡ(ಮೇ.13): ಕೋವಿಡ್‌ 2ನೇ ಅಲೆ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಪರಿಣಾಮ ಸಾವಿರಾರು ಅಮಾಯಕರು ಆಕ್ಸಿಜನ್‌, ವೆಂಟಿಲೇಟರ್‌ ಕೊರತೆಯಿಂದ ಸಾವಿಗೆ ತುತ್ತಾಗುತ್ತಿದ್ದಾರೆ ಎಂದು ರೋಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವೀರಣ್ಣ ಶೆಟ್ಟರ ಆರೋಪಿಸಿದ್ದಾರೆ.

ಈ ಕುರಿತು ಬುಧವಾರ ಪ್ರಕಟಣೆ ನೀಡಿರುವ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ತಮ್ಮ ಆಡಳಿತ ಬಂದರೆ ಸ್ವರ್ಗವನ್ನು ಧರೆಗೆ ಇಳಿಸುತ್ತೇವೆ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಈಗ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಹಿಂದೇಟು ಹಾಕುತ್ತಿದ್ದಾರೆ. ತಮ್ಮ ಕಷ್ಟ ಹೇಳಿಕೊಳ್ಳಲು ಕರೆ ಮಾಡುವ ಜನರಿಗೆ ನೋವುಂಟು ಮಾಡುವ ಮತ್ತು ಅವಮಾನಿಸುವ ಮಾತುಗಳನ್ನು ಸಚಿವರು, ಶಾಸಕರು ಆಡುತ್ತಿದ್ದಾರೆ. ಇತ್ತ ಸರ್ಕಾರ ಕೋವ್ಯಾಕ್ಸಿನ್‌ ಮತ್ತು ಕೋವಿಶೀಲ್ಡ್‌ ಲಸಿಕೆ ಪಡೆಯಲು ನೋಂದಣಿ ಮಾಡುವಂತೆ ಸೂಚಿಸಿದೆ. ಆದರೆ ನೋಂದಣಿ ಮಾಡುವ ಸಂದರ್ಭದಲ್ಲಿ ತಾಂತ್ರಿಕ ತೊಂದರೆ ಒಂದೆಡೆಯಾದರೆ ಇನ್ನೊಂದೆಡೆ ಲಸಿಕೆ ಸಿಗುತ್ತಿಲ್ಲ. ಇಂತಹ ನಿರ್ಜೀವ ಹಾಗೂ ದುರಾಡಳಿತ ನಡೆಸಿದ ಸರ್ಕಾರವನ್ನು ಹಿಂದೆಂದೂ ಕಂಡಿರಲಿಲ್ಲ ಎಂದು ಅವರು ದೂರಿದರು.

"

ನಾಲ್ವರ ಸಾವಿನ ಬೆನ್ನಲ್ಲೇ ವೆಂಟಿಲೇಟರ್‌ ಖರೀದಿಗೆ ಮುಂದಾದ ಗದಗ ಜಿಲ್ಲಾಡಳಿತ

ಲಾಕ್‌ಡೌನ್‌ ನಿಯಮ ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ. ಆದರೆ ಸರ್ಕಾರ ಸಹ ಸಂಕಷ್ಟದಲ್ಲಿರುವ ಜನರ ನೆರವಿಗೆ ಬರಬೇಕು. ಈ ಕುರಿತು ನ್ಯಾಯಾಲಯವೇ ಸರ್ಕಾರಕ್ಕೆ ಚಾಟಿ ಬೀಸಿದೆ. ಹೀಗಾಗಿ ತಕ್ಷಣವೇ ರಾಜ್ಯದ ಜನರ ನೆರವಿಗೆ ಆರ್ಥಿಕ ಹಾಗೂ ಪಡಿತರ ಪ್ಯಾಕೇಜ್‌ ಘೋಷಿಸಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ನ್ಯೂಸ್‌ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

PREV
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC