ಈ ಹಿಂದೆ 26 ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಆದರೂ, 112 ಜನರ ಮೇಲಿನ ಮೂರು ಪ್ರಕರಣಗಳು ಬಾಕಿಯಾಗಿದ್ದವು. ಈಗ ರಾಜ್ಯ ಬಿಜೆಪಿ ಸರ್ಕಾರ 112 ಜನರ ಮೇಲಿನ ಪ್ರಕರಣಗಳನ್ನು ಹಿಂಪಡೆದು ಆದೇಶ ಹೊರಡಿಸಿದೆ.
ಕಾರವಾರ, ಉತ್ತರಕನ್ನಡ (ಫೆಬ್ರವರಿ 21, 2023): 2017ರಲ್ಲಿ ಅನುಮಾನಾಸ್ಪದವಾಗಿ ಸಾವು ಕಂಡಿದ್ದ ಹೊನ್ನಾವರದ ಪರೇಶ್ ಮೇಸ್ತಾ ಪ್ರಕರಣ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದ ಕೂಮು ಸಂಘರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಪರೇಶ್ ಮೇಸ್ತಾ ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದ ಬಳಿಕ ಶಿರಸಿ ಸೇರಿ ಜಿಲ್ಲೆಯ ಹಲವೆಡೆ ಗಲಭೆ ನಡೆದಿತ್ತು. ಈ ಗಲಭೆ ಸಂಬಂಧಿಸಿ 122 ಜನರ ಮೇಲಿದ್ದ ಮೂರು ಪ್ರಕರಣ ಹಿಂಪಡೆದು ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಮಾಡಿದ್ದಾರೆ.
ಈ ಹಿಂದೆ 26 ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಆದರೂ, 112 ಜನರ ಮೇಲಿನ ಮೂರು ಪ್ರಕರಣಗಳು ಬಾಕಿಯಾಗಿದ್ದವು. ಅಂದು ಶಾಸಕ ಹಾಗೂ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಕಾರ್ಯಕರ್ತರು, ಬಜರಂಗದಳ ಕಾರ್ಯಕರ್ತರು ಸೇರಿದಂತೆ ಹಲವರ ಮೇಲೆ ಪ್ರಕರಣ ದಾಖಲಾಗಿತ್ತು. ಈಗ ರಾಜ್ಯ ಬಿಜೆಪಿ ಸರ್ಕಾರ 112 ಜನರ ಮೇಲಿನ ಪ್ರಕರಣಗಳನ್ನು ಹಿಂಪಡೆದು ಆದೇಶ ಹೊರಡಿಸಿದೆ.
undefined
ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಸಾವಿನ ಪ್ರಕರಣ ರಾಜ್ಯದಲ್ಲೇ ದೊಡ್ಡ ಸದ್ದು ಮಾಡಿತ್ತು. ಆದರೆ, ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಸಿಬಿಐ ಇದು ಕೊಲೆಯಲ್ಲ, ಆಕಸ್ಮಿಕ ಸಾವೆಂದು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿತ್ತು. ಈ ಮೂಲಕ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿತ್ತು. ಅನ್ಯ ಕೋಮಿನವರು ಪರೇಶ್ ಮೇಸ್ತಾನನ್ನು ಕೊಲೆ ಮಾಡಿ ಕೆರೆಯಲ್ಲಿ ಬಿಸಾಕಿ ಹೋಗಿದ್ದಾರೆಂದು ಬಿಜೆಪಿ ಸೇರಿದಂತೆ ಹಲವು ಹಿಂದೂ ಸಂಘಟನೆಗಳು ಆರೋಪ ಮಾಡಿದ್ದವು. ಆದರೆ, ತನಿಖೆ ನಡೆಸಿದ ಸಿಬಿಐ ಇದು ಕೊಲೆಯಲ್ಲ, ಆಕಸ್ಮಿಕ ಸಾವೆಂದು ನ್ಯಾಯಾಲಯಕ್ಕೆ "ಬಿ" ರಿಪೋರ್ಟ್ ಸಲ್ಲಿಸಿದ್ದು , ಇದು ಪರೇಶ್ ಮೇಸ್ತಾ ಕುಟುಂಬಸ್ಥರ ಅಸಮಾಧಾನಕ್ಕೆ ಸಹ ಕಾರಣವಾಗಿತ್ತು.
ಸಿಬಿಐ ವರದಿ ಹೇಳಿದ್ದೇನು..?
ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ ನಡೆದಿದ್ದ ಪರೇಶ್ ಮೇಸ್ತಾ ಸಾವು ಪ್ರಕರಣ ಜಿಲ್ಲೆಯಲ್ಲಿ ಮಾತ್ರವಲ್ಲದೇ ರಾಜ್ಯದಲ್ಲಿ ಕೂಡಾ ಸಾಕಷ್ಟು ಸದ್ದು ಮಾಡಿತ್ತು. 2017ರ ಡಿಸೆಂಬರ್ ವೇಳೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ಹೊನ್ನಾವರದ ಗುಡ್ ಲಕ್ ವೃತ್ತದಲ್ಲಿ ಕೋಮ ಗಲಭೆ ನಡೆದಿತ್ತು. ಈ ವೇಳೆ ಪಟ್ಟಣದ ತುಳುಸಿ ನಗರದ ಪರೇಶ್ ಮೇಸ್ತಾ ಎನ್ನುವ ಮೀನುಗಾರ ಯುವಕ ನಾಪತ್ತೆಯಾಗಿದ್ದ. ಎರಡು ದಿನಗಳ ನಂತರ ಹೊನ್ನಾವರದ ಶೆಟ್ಟಿಕೆರೆಯಲ್ಲಿ ಪರೇಶ್ ಮೇಸ್ತಾನ ಶವ ಪತ್ತೆಯಾಗಿತ್ತು. ಅನ್ಯ ಕೋಮಿನವರು ಪರೇಶ್ ಮೇಸ್ತಾನನ್ನ ಹೊಡೆದು ಕೊಲೆ ಮಾಡಿ ಕೆರೆಗೆ ಶವವನ್ನು ಎಸೆದಿದ್ದಾರೆಂದು ಆರೋಪಿಸಲಾಗಿತ್ತು. ಕಾಂಗ್ರೆಸ್ ಸರ್ಕಾರವೇ ಈ ಕೊಲೆಗೆ ನೇರ ಕಾರಣ ಎಂದು ಬಿಜೆಪಿಗರು ರಸ್ತೆಗೆ ಇಳಿದು ಹೋರಾಟ ನಡೆಸಿದ್ದರು.
ಜಿಲ್ಲೆಯ ಕುಮಟಾ, ಹೊನ್ನಾವರ, ಕಾರವಾರ ಹಾಗೂ ಶಿರಸಿಯಲ್ಲಿ ಪ್ರತಿಭಟನೆ ವೇಳೆ ಗಲಭೆಗಳು ಕೂಡಾ ನಡೆದಿದ್ದು, ಐಜಿಪಿಯ ವಾಹನಕ್ಕೆ ಪ್ರತಿಭಟನಾಕಾರರು ಬೆಂಕಿ ಹಾಕಿದ್ದರು. ಸಿಒಡಿಗೆ ತನಿಖಾ ಜವಾಬ್ದಾರಿ ನೀಡಬೇಕೆಂದಿದ್ದ ಸರಕಾರ ಜನರ ಒತ್ತಾಯದ ಮೇರೆಗೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿತ್ತು. ಸುದೀರ್ಘ ನಾಲ್ಕೂವರೆ ವರ್ಷ ತನಿಖೆ ನಡೆಸಿದ ಸಿಬಿಐ ಕಳೆದ ಅಕ್ಟೋಬರ್‌ನಲ್ಲಿ ಪ್ರಕರಣಕ್ಕೆ ಬಿ ರಿಪೋರ್ಟ್ ನೀಡಿ ಹೊನ್ನಾವರದ ನ್ಯಾಯಾಲಯಕ್ಕೆ ಸಲ್ಲಿಸಿತ್ತು.
ಈ ರಿಪೋರ್ಟ್‌ನಲ್ಲಿ ಪರೇಶ್ ಮೇಸ್ತಾ ಸಾವು ಕೊಲೆಯಲ್ಲ, ಆಕಸ್ಮಿಕ ಸಾವು. ಕೊಲೆಯಾದ ಯಾವುದೇ ಕುರುಹುಗಳಿಲ್ಲ. ನೀರಿನಲ್ಲಿ ಮುಳುಗಿ ಪರೇಶ್ ಮೇಸ್ತಾ ಸಾವನ್ನಪ್ಪಿದ್ದಾನೆ ಎಂದು ವರದಿ ನೀಡಿತ್ತು. ಆದರೆ, ಸಿಬಿಐ ಸಲ್ಲಿಸಿರುವ ಬಿ ರಿಪೋರ್ಟ್ ವಿರುದ್ಧ ಪರೇಶ್ ಮೇಸ್ತಾ ತಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲಾ ಪಕ್ಷದವರು ನಮ್ಮನ್ನು ಚುನಾವಣೆಗೆ ಬಳಸಿಕೊಂಡರೇ ಹೊರತು ಯಾವ ಸರಕಾರವೂ ನಮಗೆ ಆರ್ಥಿಕವಾಗಿಯೂ ಸಹಾಯ ಮಾಡಿಲ್ಲ. ಪ್ರಕರಣ ಸಂಬಂಧಿಸಿ ಎನ್ಐಎ ತನಿಖೆಗೆ ಆಗ್ರಹಿಸಲು ಚಿಂತಿಸುತ್ತೇನೆ ಅಂತ ಪರೇಶ್ ಮೇಸ್ತಾ ತಂದೆ ಕಮಲಾಕರ್ ಮೇಸ್ತಾ ತಿಳಿಸಿದ್ದರು.