ಸಿದ್ದರಾಮಯ್ಯ ವಿರುದ್ಧ ಹೇಳಿಕೆ ಕೇಸ್: ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್ ಆಗ್ತಾರಾ?

Published : Aug 18, 2025, 02:32 PM IST
Mahesh Shetty Thimarody

ಸಾರಾಂಶ

ಎರಡು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಪರಮೇಶ್ವರ್ ಸೂಚನೆ ನೀಡಿದ್ದಾರೆ. 

ಬೆಂಗಳೂರು: ಎರಡು ವರ್ಷಗಳ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಸುರೇಶ್ ಕುಮಾರ್ ಪ್ರಶ್ನೆಗೆ ಉತ್ತರಿಸುವ ವೇಳೆ ಸಚಿವ ಪರಮೇಶ್ವರ್ ಈ ಮಾಹಿತಿಯನ್ನು ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ ಹೇಳಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಗೃಹ ಸಚಿವರು ಹೇಳಿದ್ದಾರೆ. ಹಾಗಾಗಿ ಯಾವುದೇ ಕ್ಷಣದಲ್ಲಿಯೂ ಮಹೇಶ್ ಶೆಟ್ಟಿ ತಮರೋಡಿ ಬಂಧನವಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಫ್‌ಐಆರ್ ದಾಖಲಿಸಲು ಪೊಲೀಸರ ಸಿದ್ಧತೆ ?

ಮಹೇಶ್ ಶೆಟ್ಟಿ ತಿಮರೋಡಿಗೆ ಸಂಬಂಧಿಸಿದ ಹಳೆಯ ಪ್ರಕರಣಗಳನ್ನು ಸಹ ಗಮನದಲ್ಲಿಟ್ಟುಕೊಂಡು ಎಫ್‌ಐಆರ್ ದಾಖಲಿಸಲು ಪೊಲೀಸರು ಮುಂದಾಗಿರುವ ಮಾಹಿತಿ ಲಭ್ಯವಾಗಿದೆ. ಆಡಳಿತ ಶಾಸಕರೆಲ್ಲರೂ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದರು. ಗೃಹ ಸಚಿವರು ಸಹ ಸೂಚನೆ ನೀಡಿರುವ ಮಾಹಿತಿಯನ್ನು ಸಿಎಂ ಗಮನಕ್ಕೂ ತಂದಿದ್ದಾರೆ ಎನ್ನಲಾಗಿದೆ. ಗೃಹ ಸಚಿವರ ಸೂಚನೆ ಬೆನ್ನಲ್ಲೇ ಸ್ಥಳೀಯ ಪೊಲೀಸರು ಕಾನೂನು ಕ್ರಮ ಪ್ರಕ್ರಿಯೆಯನ್ನು ಆರಂಭಿಸುತ್ತಿದ್ದಾರೆ ಎನ್ನಲಾಗಿದೆ.

 

 

ಕಾಂಗ್ರೆಸ್ ಶಾಸಕ ಆಕ್ರೋಶ

ಇಂದು ಮೈಸೂರಿನಲ್ಲಿ ಮಾತನಾಡಿದ್ದ ಕಾಂಗ್ರೆಸ್ ಶಾಸಕ ಹರೀಶ್ ಗೌಡ, ಮಹೇಶ್ ಶೆಟ್ಟಿ ತಿಮರೋಡಿಗೆ ಹುಚ್ಚು ಹಿಡಿದಿದೆ. ಅವನಿಗೆ ತಲೆ ಕೆಟ್ಟಿದೆ, ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾನೆ. ಕಾನೂನಾತ್ಮಕವಾಗಿ ತಕ್ಕ ಪಾಠ ಕಲಿಸುತ್ತೇವೆ. ಕಾಂಗ್ರೆಸ್ ಪಕ್ಷದಿಂದಲೇ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ನೂರಕ್ಕೆ ನೂರಷ್ಟು ಎಫ್‌ಐಆರ್ ದಾಖಲಿಸುತ್ತೇವೆ. ಇನ್ನು ಗಿರೀಶ್ ಮಟ್ಟಣವರ್ ಒಬ್ಬ ಹುಚ್ಚ ಎಂದು ವಾಗ್ದಾಳಿ ನಡೆಸಿದ್ದರು.

 

 

PREV
Read more Articles on
click me!

Recommended Stories

ಬೆಂಗಳೂರು: ಸೈಬರ್ ವಂಚನೆ ತಡೆಗೆ ಎಐ ಅಸ್ತ್ರ ಪ್ರಯೋಗ
ಮಿರ್ಜಾ ಇಸ್ಮಾಯಿಲ್ ಮೊಮ್ಮಗಳ ಹಂತಕನಿಗೆ ಜೈಲೇ ಗತಿ, ಏನಿದು ಪ್ರಕರಣ?