ಗದಗ: ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮೇಲೆ ಕಲ್ಲು ತೂರಾಟ

By Kannadaprabha News  |  First Published Jun 1, 2023, 1:37 PM IST

ರಾಮನವಮಿ ಹಾಗೂ ಹನುಮ ಜಯಂತಿ ಅಂಗವಾಗಿ ಗ್ರಾಮದ ಚೌತಮನಿ ಕಟ್ಟೆಯ ಹತ್ತಿರ ನಡೆಯುತ್ತಿದ್ದ ಮೆರವಣಿಗೆಯಲ್ಲಿ ಶಾಸಕರು ಪಾಲ್ಗೊಂಡಿದ್ದರು. ಮೆರವಣಿಗೆಯಲ್ಲಿ ಹೂವು ತೂರುತ್ತಿದ್ದ ವೇಳೆ ಯಾರೋ ಕಿಡಿಗೇಡಿ ಶಾಸಕರ ಮೇಲೆ ಕಲ್ಲು ತೂರಿದ್ದಾರೆ. ಕಲ್ಲು ತೂರಿದವರು ಯಾರೆಂದು ಗೊತ್ತಾಗಿಲ್ಲ ಎನ್ನಲಾಗಿದೆ. 

ಲಕ್ಷ್ಮೇಶ್ವರ(ಜೂ.01): ಸಮೀಪದ ಸೂರಣಗಿ ಗ್ರಾಮದಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಅನಾಮಿಕನೊಬ್ಬ ಕಲ್ಲು ತೂರಿದ ಘಟನೆ ಕಳೆದ ಶನಿವಾರ (ಮೇ 27) ರಾತ್ರಿ 8 ಗಂಟೆಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ರಾಮನವಮಿ ಹಾಗೂ ಹನುಮ ಜಯಂತಿ ಅಂಗವಾಗಿ ಗ್ರಾಮದ ಚೌತಮನಿ ಕಟ್ಟೆಯ ಹತ್ತಿರ ನಡೆಯುತ್ತಿದ್ದ ಮೆರವಣಿಗೆಯಲ್ಲಿ ಶಾಸಕರು ಪಾಲ್ಗೊಂಡಿದ್ದರು. ಮೆರವಣಿಗೆಯಲ್ಲಿ ಹೂವು ತೂರುತ್ತಿದ್ದ ವೇಳೆ ಯಾರೋ ಕಿಡಿಗೇಡಿ ಶಾಸಕರ ಮೇಲೆ ಕಲ್ಲು ತೂರಿದ್ದಾರೆ. ಕಲ್ಲು ತೂರಿದವರು ಯಾರೆಂದು ಗೊತ್ತಾಗಿಲ್ಲ ಎನ್ನಲಾಗಿದೆ.

Tap to resize

Latest Videos

undefined

ನನಗೂ 200 ಯೂನಿಟ್‌ ಕರೆಂಟ್‌ ಬೇಕು, ಇಲ್ಲವಾದರೆ ಪ್ರತಿಭಟನೆ: ಶಾಸಕ ಸಿ.ಸಿ.ಪಾಟೀಲ್‌ ಎಚ್ಚರಿಕೆ

ಈ ಕುರಿತು ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಶಾಸಕರು ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ. 

click me!