ತಾಲೂಕಿನ ಬಿಳಿಕೆರೆ ಹೋಬಳಿ ಬೆಂಕಿಪುರ ಗ್ರಾಮದ ಮಹಿಳೆಯೊಬ್ಬರಿಗೆ ಕಣ್ಣಿನಿಂದ ಕಲ್ಲುಗಳು ಹೊರ ಬರುತ್ತಿದ್ದು, ಕುಟುಂಬಸ್ಥರು ಕಂಗಾಲಾಗಿದ್ದಾರೆ.
ಹುಣಸೂರು ( ಡಿ. 24): ತಾಲೂಕಿನ ಬಿಳಿಕೆರೆ ಹೋಬಳಿ ಬೆಂಕಿಪುರ ಗ್ರಾಮದ ಮಹಿಳೆಯೊಬ್ಬರಿಗೆ ಕಣ್ಣಿನಿಂದ ಕಲ್ಲುಗಳು ಹೊರ ಬರುತ್ತಿದ್ದು, ಕುಟುಂಬಸ್ಥರು ಕಂಗಾಲಾಗಿದ್ದಾರೆ.
ಗ್ರಾಮದ ಶಿವಮ್ಮ ಅವರ ಪುತ್ರಿ 35ರ ಹರೆಯದ ವಿಜಯ ಎಂಬವರ ಎರಡೂ (Eyes) ಕಳೆದೊಂದು ವಾರದಿಂದ ಇದ್ದಕ್ಕಿದ್ದಂತೆ ಗಳು (Stone) ಉದುರುತ್ತಿವೆ. ಅರ್ಧ ತಾಸಿಗೊಮ್ಮೆ ಎಡ ಮತ್ತು ಬಲ ಕಣ್ಣಿನಿಂದ ಕಲ್ಲುಗಳು ಹೊರ ಬರುತ್ತಿವೆ. ರಾತ್ರಿ ಮಲಗಿ ಬೆಳಗ್ಗೆ ಏಳುವಾಗ ಕಣ್ಣು ನೋವಿನಿಂದ ಕೆಂಪಾಗಿ ಹೋಗಿರುತ್ತಿವೆ. ಸೂರ್ಯಯ ಬೆಳಕು ನೋಡಲು ಆಗದ ಪರಿಸ್ಥಿತಿ ಕೆಲಕಾಲ ಇರುತ್ತದೆ. ನಂತರ ಕಣ್ಣಿನಿಂದ ಕಲ್ಲುಗಳು ಹೊರಬರಲು ಆರಂಭಿಸುತ್ತವೆ.
undefined
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜರೀನಾ ತಾಜ್ ಈ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ. ವಿಜಯ ಅವರ ತಾಯಿ ಶಿವಮ್ಮ ಬೆಣ್ಣೆ ಮಾರಾಟ ಮಾಡಿ ಜೀವನೋಪಾಯ ನಡೆಸುತ್ತಾರೆ. ವಿಜಯ ಅವರ ಇಬ್ಬರು ಮಕ್ಕಳ ಪೈಕಿ ಪುತ್ರಿ ಶಾಲೆಗೆ ಗೈರಾಗಿದ್ದುದರ ಕುರಿತು ಹಾಗೂ ಬೆಣ್ಣೆ ಖರೀದಿಗೆಂದು ಶಿಕ್ಷಕಿ ಅವರ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಜರೀನಾ ತಾಜ್ ಅವರನ್ನು ಚಲ್ಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ವೈದ್ಯರಲ್ಲಿ ತಿಳಿಸಿದಾಗ, ಡಾ. ಮಮತಾ ಕೆ.ಆರ್. ಆಸ್ಪತ್ರೆಗೆ ತೆರಳಲು ಸೂಚಿಸಿದ್ದಾರೆ.
ಕಣ್ಣಿಗೆ ಸೋಂಕು ತಗುಲಿದಾಗ ಕಣ್ಣಿನಿಂದ ಈ ರೀತಿಯಾದ ಗಟ್ಟಿಪದಾರ್ಥ ಹೊರಬರುತ್ತದೆ. ಗ್ರಾಮೀಣರಲ್ಲಿ ಇದು ಹೆಚ್ಚಾಗಿ ಕಂಡು ಬರುತ್ತದೆ. ಸೋಂಕು ನಿವಾರಣೆಗೆ ಚಿಕಿತ್ಸೆ ನೀಡಬಹುದಾಗಿದ್ದು, ಗಾಬರಿಯಾಗಬೇಕಾದ ಅವಶ್ಯಕತೆ ಇಲ್ಲವೆಂದು ಪಟ್ಟಣದ ಡಿ. ದೇವರಾಜ ಅರಸು ಸಾರ್ವಜನಿಕ ಆಸ್ಪತ್ರೆಯ ನೇತ್ರ ತಜ್ಞೆ ಡಾ. ಲತಾ ತಿಳಿಸಿದ್ದಾರೆ.
ಅರ್ಧ ಕೆಜಿ ಕಲ್ಲು
ಉಡುಪಿ (ನ.25): ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿನ ಮೂತ್ರಶಾಸ್ತ್ರಜ್ಞರ ತಂಡವು ಅತಿದೊಡ್ಡ ಮೂತ್ರಕೋಶದ ಕಲ್ಲು ಯಶಸ್ವಿಯಾಗಿ ತೆಗೆದು ಹಾಕಿದೆ. 60 ವರ್ಷ ವಯಸ್ಸಿನ ಮಹಿಳೆ ಕಳೆದ ಆರು ವರ್ಷಗಳಿಂದ ಉರಿ ಮೂತ್ರ ದೂರುಗಳೊಂದಿಗೆ ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು. ಈ ರೋಗಲಕ್ಷಣಗಳ ಪ್ರತಿ ಭೇಟಿಯಲ್ಲಿ ಮೂತ್ರನಾಳದ ಸೋಂಕಿಗೆ ಪ್ರಾಯೋಗಿಕವಾಗಿ ಚಿಕಿತ್ಸೆ ನೀಡಲಾಗಿತ್ತು. ಇತ್ತೀಚೆಗೆ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದರು. ರೋಗಿಗೆ ಸರಳ ಸಿಟಿ ಸ್ಕ್ಯಾನ್ ಮಾಡಲಾಯಿತು.
ಇದು ಸಂಪೂರ್ಣ ಮೂತ್ರಕೋಶವನ್ನು ಆಕ್ರಮಿಸಿಕೊಂಡಿರುವ ಗಮನಾರ್ಹವಾದ ವಸ್ತು ಇರುವುದನ್ನು ಬಹಿರಂಗಪಡಿಸಿತು. ಮೂತ್ರಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಉಪ ವೈದ್ಯಕೀಯ ಅಧೀಕ್ಷಕರಾದ ಡಾ ಪದ್ಮರಾಜ್ ಹೆಗ್ಡೆ ಅವರ ಮಾರ್ಗದರ್ಶನದಲ್ಲಿ ಈ ವಸ್ತುವನ್ನು ಹೊರತೆಗೆದಾಗ ಅಚ್ಚರಿ ಕಾದಿತ್ತು. ಬರೋಬ್ಬರಿ, 11.5 x 7.5 ಸೆಂ.ಮೀ ಅಳತೆಯ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲನ್ನು ಡಾ.ಅಂಶುಮನ್, ಡಾ.ಕಾಶಿ ವಿಶ್ವನಾಥ್, ಡಾ.ನಿಶಾ ಡಾ ವಿವೇಕ್ ಪೈ ಮತ್ತು ಡಾ ಕೃಷ್ಣ ಅವರ ತಂಡವು ತೆರೆದ ಸಿಸ್ಟೊಲಿಥೊಟಮಿ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದರು. ಎರಡನೇ ದಿನ ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.