
ಹಾಸನ, (ಫೆ.06): ಹೆತ್ತವರಿಗೆ ಬೇಡವಾದ ಮಗು ಬೀದಿ ನಾಯಿ ಪಾಲಾಗಿದೆ. ಮಗು (Baby) ಮೃತದೇಹವನ್ನು ಬೀದಿ ನಾಯಿಗಳು (Street Dogs) ಎಳೆದಾಡಿಕೊಂಡು ತಿಂದಿವೆ. ಈ ಹೃದಯ ವಿದ್ರಾವಕ ಘಟನೆಗೆ ಹಾಸನದಲ್ಲಿ ನಡೆದಿದೆ. ಇದನ್ನು ನೋಡಿ ಜನತೆ ಮರುಗಿದ್ದಾರೆ.
ಯಾವುದೇ ಜಾತಿ, ಧರ್ಮ ಇರಲಿ, ಸತ್ತ ವ್ಯಕ್ತಿಗೆ ಸಂಪ್ರದಾಯಬದ್ಧವಾಗಿ ಪೂಜೆ ಸಲ್ಲಿಸಿ ಸಂಸ್ಕಾರ ಮಾಡಲಾಗುತ್ತದೆ. ಆದ್ರೆ, ಹಾಸನ(Hassan) ಜಿಲ್ಲೆಯಲ್ಲಿ ಹೆತ್ತ ಹಸುಗೂಸನ್ನ ಬೀದಿಗೆ ಬಿಸಾಡಿ ಹೋಗಿದ್ದಾರೆ.
ಹೆಂಡತಿ ತಂಗಿಯನ್ನೇ ಗರ್ಭಿಣಿಯನ್ನಾಗಿಸಿದ ಭೂಪ, ಕಾಮುಕನ ನೀಚ ಕೃತ್ಯ ಬಯಲು
ಆಸ್ಪತ್ರೆಯಲ್ಲಿ ಹೆರಿಗೆಯಾದ ಬಳಿಕ ಮಗುವನ್ನ ರೈಲ್ವೆ ಟ್ರ್ಯಾಕ್ ಮೇಲೆ ಎಸೆದು ಹೋಗಿದ್ದಾರೆ ಎಂದು ಶಂಕಿಸಲಾಗಿದ್ದು, ಮಗುವಿನ ಮೃತ ದೇಹವನನ್ನು ನಾಯಿ ಬಸ್ ನಿಲ್ದಾಣದತ್ತ ಹೊತ್ತು ತಂದಾಗ ಈ ಘಟನೆ ಬೆಳಕಿಗೆ ಬಂದಿದೆ.
ಬಸ್ ನಿಲ್ದಾಣದ ಬಳಿ ನಾಯಿಯಿಂದ ಬಿಡಿಸಿ ಮಗುವಿನ ಮೃತದೇಹವನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಸ್ಥಳಕ್ಕೆ ಬಡಾವಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಅಪರಿಚಿತ ಮಗುವಿನ ಶವದ ಗುರುತು ಪತ್ತೆಗೆ ಮುಂದಾಗಿದ್ದಾರೆ.
ಯುವತಿಯಿಂದ ಬಿದ್ದು ಪ್ರಾಣ ಕಳೆದುಕೊಂಡ ಯುವಕ
ಹಾವೇರಿ: ಯುವತಿಯೊಬ್ಬಳ ಪ್ರೀತಿಗೆ ಬಿದ್ದು ಯುವಕನೊಬ್ಬ ಪ್ರಾಣ ಕಳಕೊಂಡಿರುವ ದಾರುಣ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೆಡಿಗೊಂಡ ಗ್ರಾಮದಲ್ಲಿ ಘಟನೆ ನಡೆದಿದ್ದು, 29 ವರ್ಷದ ಜಯಪ್ಪ ಬ್ಯಾಡಗಿ ಮೃತ ಯುವಕ. ಈತನ ಶವ ಬಾವಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆಯೋ, ಆತ್ಮಹತ್ಯೆಯೋ ಎಂಬ ಪ್ರಶ್ನೆ ಎದುರಾಗಿದೆ.
ಕಳೆದ ಐದು ದಿನಗಳ ಹಿಂದೆ ಪ್ರೀತಿಗೆ ಸಂಬಂಧಿಸಿದಂತೆ ಎರಡೂ ಕುಟುಂಬಗಳ ನಡುವೆ ಜಗಳವಾಗಿತ್ತು. ಜಗಳ ವಿಪರೀತಕ್ಕೆ ಹೋಗಿ ಜಯಪ್ಪನನ್ನು ಹುಡುಗಿಯ ಸಂಬಂಧಿಕರು ಮನಸ್ಸಿಗೆ ಬಂದಂತೆ ಥಳಿಸಿದ್ದರು.
ಈ ಘಟನೆ ಬೆನ್ನಲ್ಲೆ ರಾತ್ರೋರಾತ್ರಿ ಯುವಕನ ದೇಹ ಬಾವಿಯಲ್ಲಿ ಪತ್ತೆಯಾಗಿದೆ. ಮೆಲ್ನೋಟಕ್ಕೆ ಬಾವಿಗೆ ಹಾರಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆದರೆ ಇದನ್ನು ಯುವಕನ ಕುಟುಂಬಸ್ಥರು ಅಲ್ಲಗಳೆದಿದ್ದಾರೆ. ನಮ್ಮ ಮಗನನ್ನು ಹುಡುಗಿಯ ಕಡೆಯವರು ಹೊಡೆದು ಬಾವಿಗೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಅವರೇ ಮಗನ ಕೊಲೆ ಮಾಡಿದ್ದಾರೆಂದು ಪಾಲಕರು ಹೇಳಿದ್ದಾರೆ.
ಸ್ಥಳಕ್ಕೆ ಪೋಲಿಸರ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಕಾಗಿನಲೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಒಂದೇ ಕುಟುಂಬದ ಐವರ ಹತ್ಯೆ
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಗ್ರಾಮದಲ್ಲಿ ಒಂದೇ ಕುಟುಂಬದ (Family) ಐವರ ಕೊಲೆಯಾಗಿದೆ (Murder). ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ನಾಲ್ವರು ಮಕ್ಕಳು, ಮಹಿಳೆಯನ್ನು ಹತ್ಯೆಗೈದಿದ್ದಾರೆ. ಲಕ್ಷ್ಮೀ(26), ರಾಜ್(12), ಕೋಮಲ್(7), ಕುನಾಲ್(4), ಗೋವಿಂದ(8) ಕೊಲೆಯಾದವರು. ಸ್ಥಳಕ್ಕೆ ಕೆಆರ್‌ಎಸ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಭೀಕರ ಕೃತ್ಯಕ್ಕೆ ಕೆಆರ್‌ಎಸ್ ಗ್ರಾಮ ಬೆಚ್ಚಿಬಿದ್ದಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಲಕ್ಷ್ಮೀ ಪತಿ ಗಂಗಾರಾಮ್ 10 ದಿನದ ಹಿಂದೆ ವ್ಯಾಪಾರಕ್ಕೆ ಹೋಗಿದ್ದರು. ಗಂಗಾರಾಮ್ ಪ್ಲಾಸ್ಟಿಕ್ ಹೂವು ಸೇರಿ ಹಲವು ವಸ್ತುಗಳ ಮಾರಾಟ ಮಾಡುತ್ತಿದ್ದರು. ಒಮ್ಮೆ ವ್ಯಾಪಾರಕ್ಕೆ ಹೋದರೆ 15 ದಿನ, 1 ತಿಂಗಳು ಬಿಟ್ಟು ಬರುತ್ತಿದ್ದರು. ಗಂಗಾರಾಮ್ ಅಣ್ಣ ಗಣೇಶ್ ಪತ್ನಿ ಚಂಪಾಡಿ ಸಹಾ ವ್ಯಾಪಾರಕ್ಕೆ ತೆರಳಿದ್ದರು. ಇವರೆಲ್ಲಾ ಒಟ್ಟಿಗೆ ವಾಸವಾಗಿದ್ದರು. ಮಧ್ಯರಾತ್ರಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ಈ ವಿಚಾರ ಬೆಳಕಿಗೆ ಬಂದಿದೆ.