'ಮತಾಂತರ ತಡೆಗೆ ರಾಜ್ಯದಲ್ಲೂ ಕಾನೂನು ತನ್ನಿ'

By Kannadaprabha NewsFirst Published Sep 22, 2021, 9:24 AM IST
Highlights
  •  ಮತಾಂತರ ತಡೆಗೆ ಉತ್ತರ ಪ್ರದೇಶದ ರೀತಿಯಲ್ಲಿ ರಾಜ್ಯದಲ್ಲೂ ಕಾನೂನು ತರಬೇಕಿದೆ ಎಂದು ಶಾಸಕ ಕೆ. ಜಿ. ಬೋಪಯ್ಯ ವಿಧಾನಸಭೆಯಲ್ಲಿ ಒತ್ತಾಯಿಸಿದರು.
  • ಎಲ್ಲ ಕಡೆ ಮತಾಂತರ ಜಾಸ್ತಿ ಆಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕೆಂದರೆ ಕಾಯ್ದೆ ಜಾರಿಗೊಳಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಮಡಿಕೇರಿ (ಸೆ.22): ಮತಾಂತರ ತಡೆಗೆ ಉತ್ತರ ಪ್ರದೇಶದ ರೀತಿಯಲ್ಲಿ ರಾಜ್ಯದಲ್ಲೂ ಕಾನೂನು ತರಬೇಕಿದೆ ಎಂದು ಶಾಸಕ ಕೆ. ಜಿ. ಬೋಪಯ್ಯ ವಿಧಾನಸಭೆಯಲ್ಲಿ ಒತ್ತಾಯಿಸಿದರು.

ಎಲ್ಲ ಕಡೆ ಮತಾಂತರ ಜಾಸ್ತಿ ಆಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕೆಂದರೆ ಕಾಯ್ದೆ ಜಾರಿಗೊಳಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಗೂಳಿಹಟ್ಟಿಶೇಖರ್‌, ಚಿತ್ರದುರ್ಗದಲ್ಲಿ 20 ಸಾವಿರಕ್ಕೂ ಹೆಚ್ಚು ಜನ ಮತಾಂತರವಾಗಿದ್ದಾರೆ. ನನ್ನ ಹೆತ್ತ ತಾಯಿಯನ್ನೂ ಮತಾಂತರ ಮಾಡಿದ್ದಾರೆ ಎಂದು ಹೇಳಿದರು. ಕೆಲವು ಚಚ್‌ರ್‍ಗಳಲ್ಲಿ ಬ್ರೈನ್‌ ವಾಶ್‌ ಮಾಡುತ್ತಿದ್ದಾರೆ. ತಾಯಿಗೂ ಬ್ರೈನ್‌ ವಾಶ್‌ ಮಾಡಿದ್ದಾರೆ ಎಂದು ದೂರಿದರು.

ನನ್ನ ತಾಯಿಯೇ ಕ್ರೈಸ್ತ ಧರ್ಮಕ್ಕೆ ಮತಾಂತರ: ಗೂಳಿಹಟ್ಟಿ ಗೋಳು!

ದಲಿತರು, ಹಿಂದುಳಿದ ವರ್ಗದವರನ್ನು ಜಾಸ್ತಿ ಮತಾಂತರ ಮಾಡುತ್ತಿದ್ದಾರೆ. ಇದೊಂದು ದೊಡ್ಡ ಪಿಡುಗು. ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಸದಸ್ಯರ ಮಾತುಗಳನ್ನು ಕೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಆಮಿಷವೊಡ್ಡಿ ಮತಾಂತರ ಮಾಡುವುದು ಅಪರಾಧ. ಶಾಂತಿ ಭಂಗವುಂಟು ಮಾಡುವ ಆತಂಕವೂ ಇದೆ. ಮುಂದೆ ಏನು ಮಾಡಬೇಕು ಎಂಬ ಕುರಿತು ರಾಜ್ಯ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಹೇಳಿದರು.

click me!