ಅತ್ಯಾಚಾರ ಅರೋಪಿ ಶಿಕ್ಷಕನಿಗೆ ಕಠಿಣ ಶಿಕ್ಷೆಗೆ ಕ್ರಮ: ಸಚಿವ ಮಧು ಬಂಗಾರಪ್ಪ

By Suvarna News  |  First Published May 29, 2024, 12:23 AM IST

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಪ್ರಾಪ್ತೆ ಮೇಲೆ ಶಿಕ್ಷಕನಿಂದ ಅತ್ಯಾಚಾರ ನಡೆದಿದ್ದು, ಇಂತ ವಿಚಾರ ಬಂದಾಗ ಕಾನೂನು ರೀತಿ ಕಠಿಣ ಶಿಕ್ಷೆಗೆ ಒಳಪಡಿಸಲಾಗುತ್ತೆ. ಎಸ್.ಡಿ.ಎಂ.ಸಿ ಹಾಗೂ  ಸರ್ಕಾರ ಹೊಂದಾಣಿಕೆ ಮಾಡಿಕೊಂಡು ಎಚ್ಚರ ವಹಿಸುತ್ತೇವೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ. 


ವರದಿ: ರವಿ.ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್

ಕೊಡಗು (ಮೇ.29): ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಪ್ರಾಪ್ತೆ ಮೇಲೆ ಶಿಕ್ಷಕನಿಂದ ಅತ್ಯಾಚಾರ ನಡೆದಿದ್ದು, ಇಂತ ವಿಚಾರ ಬಂದಾಗ ಕಾನೂನು ರೀತಿ ಕಠಿಣ ಶಿಕ್ಷೆಗೆ ಒಳಪಡಿಸಲಾಗುತ್ತೆ. ಎಸ್.ಡಿ.ಎಂ.ಸಿ ಹಾಗೂ  ಸರ್ಕಾರ ಹೊಂದಾಣಿಕೆ ಮಾಡಿಕೊಂಡು ಎಚ್ಚರ ವಹಿಸುತ್ತೇವೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ. 

Latest Videos

undefined

ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮಡಿಕೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಲು ಬಂದಿದ್ದ ಸಂದರ್ಭ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಇಂತ ಘಟನೆಯನ್ನ ನಾನು ಖಂಡಿಸುತ್ತೇನೆ, ಕಾನೂನಿನಲ್ಲಿ ಯಾವ ರೀತಿ ಶಿಕ್ಷೆ ಇದೆ ಅದೇ ರೀತಿ ಕಠಿಣ ಶಿಕ್ಷೆ ಆಗಬೇಕು. ಯಾವುದೇ ವಿಚಾರ ಬಂದ್ರೆ ನಮ್ಮ ಸರ್ಕಾರ ಇಮಿಡಿಯಟ್ ಕ್ರಮ ತೆಗೆದು ಕೊಳ್ಳುತ್ತದೆ. ಎಸ್.ಡಿ.ಎಂ.ಸಿ ಹಾಗೂ ಶಿಕ್ಷರಿಂದಲೂ ಇಂತಹ ಘಟನೆಗಳು ನಡೆಯದಂತೆ ಸಹಕಾರ ಬರಬೇಕು ಎಂದು ಹೇಳಿದ್ದಾರೆ. 

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ಕೊಟ್ಟ ಶಿಕ್ಷಣ ಸಚಿವ; ಈ ಬಾರಿ ಪಠ್ಯಪರಿಷ್ಕರಣೆ ಇಲ್ಲ!

ರಾಜ್ಯದಲ್ಲಿ ನಾಳೆಯಿಂದ ಶಾಲೆಗಳು ಆರಂಭವಾಗುತ್ತಿದ್ದು, ಶಾಲಾ ಆರಂಭಕ್ಕೆ ಎಲ್ಲಾ ಸಿದ್ಧತೆ ಆಗಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಪಠ್ಯಪುಸ್ತಕ, ಸಮವಸ್ತ್ರಗಳನ್ನು ಎಲ್ಲಾ ಶಾಲೆಗಳಿಗೆ ಕಳುಹಿಸಲಾಗಿದೆ. ಮೂಲಭೂತ ಸೌಕರ್ಯಕ್ಕೆ ಅಷ್ಟೇ ನಾವೀಗ ಗಮನ ಹರಿಸುತ್ತಿದ್ದೇವೆ ಎಂದಿದ್ದಾರೆ. 

ಅನುದಾನಿತ ಶಾಲೆಗಳಲ್ಲಿ ಒಂಭತ್ತು ವರ್ಷಗಳಿಂದ ಶಿಕ್ಷಕರ ನೇಮಕ ಆಗಿಲ್ಲ. ಎಷ್ಟೋ ವಿದ್ಯಾರ್ಥಿಗಳು ಓದಿ ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ. ಅದನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಸರ್ಕಾರಿ ಶಾಲೆಯಲ್ಲಿ 53 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇದ್ದವು, ಕಳೆದ ಬಾರಿ 43 ಸಾವಿರ ಶಿಕ್ಷಕರ ತೆಗೆದುಕೊಂಡಿದ್ದೆವು. ಮತ್ತೆ ಶಿಕ್ಷಕರನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದರು. 

ರಾಜ್ಯದಲ್ಲಿ ಕೆಪಿಎಸ್ ಶಾಲೆಗಳ ಬೇಡಿಕೆ ಹೆಚ್ಚಿದ್ದು, ಈಗ ಬರೀ 300 ಕೆಪಿಎಸ್ ಶಾಲೆಗಳಿವೆ. ಮುಂದಿನ ವರ್ಷದೊಳಗೆ ಸಿಎಸ್ಆರ್ ಅನುದಾನದ ಅಡಿಯಲ್ಲಿ 600 ಕೆಪಿಎಸ್ ಶಾಲೆಗಳನ್ನು ಮಾಡಲಾಗುವುದು. ಮುಂದಿನ ಮೂರು ವರ್ಷಗಳಲ್ಲಿ 3 ಸಾವಿರ ಕೆಪಿಎಸ್ ಶಾಲೆಗಳನ್ನು ಮಾಡಲಾಗುವುದು ಎಂದಿದ್ದಾರೆ. 

ಅಪ್ರಾಪ್ತ ಬಾಲಕಿಯ ಫೋಟೊ ಮಾರ್ಫ್ ಮಾಡಿ ಹರಿಬಿಡ್ತಿದ್ದ ಯುವಕನ ಬಂಧನ!

ಮಂಗಳೂರಿನ ಕಂಕನಾಡಿಯಲ್ಲಿ ರಸ್ತೆ ಮಧ್ಯೆಯಲ್ಲಿ  ನಮಾಜ್ ಮಾಡಿರುವುದು ಕಾನೂನು ಬಾಹಿರ ಅಂದ್ರೆ ಅದನ್ನು ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ. ಆದರೆ ಇದು ಕಾನೂನು ಬಾಹಿರ ಅಂತ ನನಗೆ ಅನಿಸುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಡಿಕೇರಿಯಲ್ಲಿ ಹೇಳಿದ್ದಾರೆ. ಇದರ ಬಗ್ಗೆ ನಾನು ಹೆಚ್ಚು ಮಾತನಾಡಲು ಹೋಗುವುದಿಲ್ಲ. ಏನೇ ಇದ್ದರೂ ಅಲ್ಲಿನ ಆಡಳಿತ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

click me!