ಕೊರೋನಾ ನಿಯಮ ಕಟ್ಟುನಿಟ್ಟಾಗಿ ಪಾಲಸಿ| ಬಿಎಂಟಿಸಿ ನೌಕರರಿಗೆ ರಾಜೇಶ್ ಸೂಚನೆ| ಎಲ್ಲ ಸಿಬ್ಬಂದಿ ಮಾಸ್ಕ್ ಧರಿಸಬೇಕು ಮತ್ತು ಸ್ಯಾನಿಟೈಸರ್ ಬಳಕೆ ಮಾಡಬೇಕು| ಬಸ್‌ಗಳಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಬೇಕು| ಬಸ್ ಏರಿದ ಬಳಿಕ ಮಾಸ್ಕ್ ತೆಗೆಯದಂತೆ ಪ್ರಯಾಣಿಕರಿಗೆ ತಿಳಿ ಹೇಳಬೇಕು|
ಬೆಂಗಳೂರು(ಮಾ.18): ರಾಜಧಾನಿಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಸ್ ಹಾಗೂ ಬಸ್ ನಿಲ್ದಾಣಗಳಲ್ಲಿ ಈ ಹಿಂದಿನಂತೆ ಕೊರೋನಾ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಬಿಎಂಟಿಸಿ ತನ್ನ ನೌಕರರಿಗೆ ಸೂಚಿಸಿದೆ.
ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಬಸ್‌ಗಳು, ಬಸ್ ನಿಲ್ದಾಣಗಳು, ಕಾರ್ಯಾಗಾರ, ಘಟಕಗಳಲ್ಲಿ ಕೊರೋನಾ ನಿಯಮಾವಳಿಗಳನ್ನು ಚಾಚು ತಪ್ಪದೇ ಪಾಲಿಸಬೇಕು. ಎಲ್ಲ ಸಿಬ್ಬಂದಿ ಮಾಸ್ಕ್ ಧರಿಸಬೇಕು ಮತ್ತು ಸ್ಯಾನಿಟೈಸರ್ ಬಳಕೆ ಮಾಡಬೇಕು. ಬಸ್‌ಗಳಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಬೇಕು. ಮಾಸ್ಕ್ ಧರಿಸದ ಪ್ರಯಾಣಿಕರಿಗೆ ಬಸ್ ಒಳಗೆ ಪ್ರವೇಶಿಸಲು ಅವಕಾಶ ನೀಡಬಾರದು. ಬಸ್ ಏರಿದ ಬಳಿಕ ಮಾಸ್ಕ್ ತೆಗೆಯದಂತೆ ಪ್ರಯಾಣಿಕರಿಗೆ ತಿಳಿ ಹೇಳಬೇಕು ಎಂದು ಬಿಎಂಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕ ರಾಜೇಶ್ ಅವರು ಚಾಲನಾ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.
undefined
ಕರ್ನಾಟಕದಲ್ಲಿ ಕೊರೋನಾ ಮಹಾಸ್ಫೋಟ: ಸೋಂಕಿನ ಸಂಖ್ಯೆಯಲ್ಲಿ ಭಾರೀ ಏರಿಕೆ
ಘಟಕಗಳಲ್ಲಿ ಬಸ್‌ಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸೋಂಕು ನಿವಾರಕ ಸಿಂಪಡಣೆ ಮಾಡಬೇಕು. ಬಸ್ ನಿಲ್ದಾಣಗಳು, ಘಟಕಗಳು ಹಾಗೂ ಕಾರ್ಯಾಗಾರಗಳಲ್ಲಿ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.