ಬೆಂಗಳೂರು ವಿವಿ ಹಾಸ್ಟೆಲ್‌ನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿ ಆತ್ಮಹತ್ಯೆ

Published : Feb 03, 2025, 03:11 PM ISTUpdated : Feb 03, 2025, 03:17 PM IST
ಬೆಂಗಳೂರು ವಿವಿ ಹಾಸ್ಟೆಲ್‌ನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿ ಆತ್ಮಹತ್ಯೆ

ಸಾರಾಂಶ

ಬೆಂಗಳೂರು ವಿಶ್ವವಿದ್ಯಾಲಯದ ರಾಮಭಾಯಿ ಹಾಸ್ಟೆಲ್‌ನಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಪಾವನಾ ಹೆಚ್.ಎನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಮಧ್ಯಾಹ್ನ ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಬೆಂಗಳೂರು (ಫೆ.3): ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು ಕಂಡಿದ್ದಾರೆ.  ರಾಮಭಾಯಿ ಹಾಸ್ಟೆಲ್‌ನಲ್ಲಿ ಘಟನೆ ನಡೆದಿದ್ದು ಮೃತ ವಿದ್ಯಾರ್ಥಿನಿಯನ್ನು 22 ವರ್ಷದ ಪಾವನಾ ಹೆಚ್.ಎನ್  ಎಂದು ಗುರುತಿಸಲಾಗಿದೆ. ಪಾವನಾ MA ಕನ್ನಡ ಅಧ್ಯಯನ ವಿಭಾಗದ ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದು ಎನ್ನಲಾಗಿದೆ ಮೂಲತಃ ಎಚ್ ಡಿ ಕೋಟೆಯ ಹೆಬ್ಬಲಗುಪ್ಪೆ ಹಳ್ಳಿಯವರು ಎಂದು ಗೊತ್ತಾಗಿದೆ. ತಾನು ವಾಸವಿದ್ದ ಲೇಡಿಸ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಮಧ್ಯಾಹ್ನ 12 ರ ಸುಮಾರಿಗೆ ನೇಣಿಗೆ ಶರಣಾಗಿರುವ ಸಾಧ್ಯತೆ ಇದೆ. ಹಾಸ್ಟೆಲ್‌ನಲ್ಲಿದ್ದ ಕೆಲ ಯುವತಿಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸೋಕೋ ಟೀಂ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಅಡಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿ ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ಹಿನ್ನಲೆ ಮೃತವನ್ನು ಕಳಿಸಿಕೊಡಲಾಗಿದೆ  ಎಂದು ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಜ್ಞಾನ ಭಾರತೀ ಪೊಲೀಸರಿಂದ ಪಾವನಾ ಕುಟುಂಬಸ್ಥರಿಗೆ ಆತ್ಮಹತ್ಯೆ ಬಗ್ಗೆ ಮಾಹಿತಿ. ನೀಡಲಾಗಿದೆ. ಕಾಲೇಜಿನಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಕಾರ್ಯಕ್ರಮದ ಅರ್ಧದಲ್ಲೇ ವಿದ್ಯಾರ್ಥಿನಿ ಹಾಸ್ಟಲ್ ಗೆ ಹೋಗಿದ್ದಳು. ಬಳಿಕ ಹಾಸ್ಟೇಲ್ ನ ರೂಮ್ ನಲ್ಲಿ ನೇಣಿಗೆ ಶರಣಾಗಿದ್ದಾಳೆ ಎಂದು ಪ್ರಾಥಮಿಕ ಮಾಹಿತಿಯಿಂದ ಗೊತ್ತಾಗಿದೆ.

PREV
Read more Articles on
click me!

Recommended Stories

ಕರೆಂಟ್‌ ಅಕೌಂಟಲ್ಲಿ ₹150 ಕೋಟಿಅಲ್ಲ, ₹1 ಸಾವಿರ ಕೋಟಿ ವಹಿವಾಟು
ಬಾಗಲಕೋಟೆ: ಬುದ್ಧಿಮಾಂದ್ಯನ ಮೇಲೆ ಅಮಾನವೀಯ ಹಲ್ಲೆ