ಶಿಕಾರಿಪುರ: ಸ್ಪರ್ಧೆ ವೇಳೆ ಹೋರಿ ತಿವಿತದಿಂದ ವಿದ್ಯಾರ್ಥಿ ಸಾವು

Published : Feb 14, 2024, 12:34 PM IST
ಶಿಕಾರಿಪುರ: ಸ್ಪರ್ಧೆ ವೇಳೆ ಹೋರಿ ತಿವಿತದಿಂದ ವಿದ್ಯಾರ್ಥಿ ಸಾವು

ಸಾರಾಂಶ

ಕಲ್ಮನೆ ಗ್ರಾಮದಲ್ಲಿ ನಡೆಯುತ್ತಿದ್ದ ಹೋರಿ ಬೆದರಿಸುವ ಸ್ಪರ್ಧೆಗೆ ಸ್ನೇಹಿತರ ಜತೆ ತೆರಳಿದ್ದ ಸಂದರ್ಭದಲ್ಲಿ ಹೋರಿ ತಿವಿತದಿಂದ ತೀವ್ರವಾಗಿ ಗಾಯಗೊಂಡಿದ್ದ. ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. 

ನವದೆಹಲಿ(ಫೆ.14): ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸಲು ತೆರಳಿದ್ದ ಐಟಿಐ ಕಾಲೇಜು ವಿದ್ಯಾರ್ಥಿಯೋರ್ವ ಹೋರಿ ತಿವಿತದಿಂದ ಸಾವಿಗೀಡಾದ ಧಾರುಣ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ಸೋಮವಾರ ನಡೆದಿದೆ. 

ಸಾವಿಗೀಡಾದ ವಿದ್ಯಾರ್ಥಿಯನ್ನು ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ಪುನೀತ್ ಆಚಾರ್ (19) ಎಂದು ಗುರುತಿಸಲಾಗಿದೆ. ಈತ ಪಟ್ಟಣದ ಎಸ್ಎಸ್ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಹಾಸ್ಚೆಲ್‌ನಲ್ಲಿ ಉಳಿದುಕೊಂಡಿದ್ದ ಎನ್ನಲಾಗಿದೆ. 

ಅಭದ್ರತೆ ಕಾಡಿದಾಗಷ್ಟೇ ಬಿಜೆಪಿಗೆ ದೇಶಪ್ರೇಮ: ಆಯನೂರು ಮಂಜುನಾಥ್ ಕಿಡಿ

ಸೋಮವಾರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆಯುತ್ತಿದ್ದ ಹೋರಿ ಬೆದರಿಸುವ ಸ್ಪರ್ಧೆಗೆ ಸ್ನೇಹಿತರ ಜತೆ ತೆರಳಿದ್ದ ಸಂದರ್ಭದಲ್ಲಿ ಹೋರಿ ತಿವಿತದಿಂದ ತೀವ್ರವಾಗಿ ಗಾಯಗೊಂಡಿದ್ದ. ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತನ ತಂದೆ ಗಜೇಂದ್ರ ಆಚಾರ್ ಸ್ಪರ್ಧೆ ಆಯೋಜಕರ ವಿರುದ್ಧ ದೂರು ನೀಡಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Read more Articles on
click me!

Recommended Stories

ಬೆಂಗಳೂರು ಕಬ್ಬನ್‌ಪಾರ್ಕ್‌ ಪುಷ್ಪ ಪ್ರದರ್ಶನಕ್ಕೆ ಇಂದು ತೆರೆ
ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ