ಮನೆಯಿಂದ ಶಾಲೆಗೆ ಹೊರಟಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿಯೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಮೃತಪಟ್ಟ ದಾರುಣ ಘಟನೆ ತಲ್ಲೂರಿನಲ್ಲಿ ಸಂಭವಿಸಿದೆ.
ಕುಂದಾಪುರ (ಅ.22): ಮನೆಯಿಂದ ಶಾಲೆಗೆ ಹೊರಟಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿಯೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಮೃತಪಟ್ಟ ದಾರುಣ ಘಟನೆ ತಲ್ಲೂರಿನಲ್ಲಿ ಸಂಭವಿಸಿದೆ. ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಅರುಣ್ ಶೆಟ್ಟಿ ಹಾಗೂ ಹಕ್ಲಾಡಿ ಪೌಢಶಾಲೆಯ ಶಿಕ್ಷಕಿ ಭಾರತಿ ದಂಪತಿಗಳ ಪುತ್ರ, ಹಟ್ಟಿಯಂಗಡಿ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಪ್ರಥ್ವಿರಾಜ್ ಶೆಟ್ಟಿ ಮೃತ ಬಾಲಕ.
ಮನೆಯಿಂದ ಪೋಷಕರಿಗೆ ಟಾಟಾ ಹೇಳಿ ಓಡುತ್ತಲೆ ಹೋಗಿದ್ದ ಪ್ರಥ್ವಿರಾಜ್ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದನು. ಪುತ್ರ ಬಿದ್ದಿರುವುದನ್ನು ನೋಡಿ ದೌಡಾಯಿಸಿದ ತಂದೆ, ಮಗನನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆ ತಂದಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆತರಲಾಗಿತ್ತು. ಬಾಲಕನನ್ನು ಪರೀಕ್ಷಿಸಿದ ವೈದ್ಯರು ಮೃತರಾಗಿರುವ ಮಾಹಿತಿ ನೀಡಿದ್ದಾರೆ.
undefined
ಚೈತ್ರಾ ಕುಂದಾಪುರ ಮಾದರಿಯಲ್ಲಿ ಮತ್ತೊಂದು ವಂಚನೆ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ಪಂಗನಾಮ!
ಪ್ರಥ್ವಿರಾಜ್ ಅವರ ಮರಣಕ್ಕೆ ಹೃದಯಾಘಾತ ಆಗಿರಬಹುದು ಎಂದು ಶಂಕಿಸಲಾಗಿದೆ. ಓರ್ವ ಪುತ್ರಿ ಹಾಗೂ ಪುತ್ರರನ್ನು ಹೊಂದಿದ್ದ, ಅರುಣ್ ಶೆಟ್ಟಿ ಹಾಗೂ ಭಾರತಿ ದಂಪತಿಗಳಿಗೆ ಪ್ರಥ್ವಿರಾಜ್ ಸಾವು ಎರಡನೇ ದುರಂತ.ಕಳೆದ ವರ್ಷ ಪುತ್ರಿ ಅನುಶ್ರೀ ಮನೆಯ ಮೊದಲ ಮಹಡಿಯಲ್ಲಿ ಓದುತ್ತಿದ್ದಾಗ, ಇದೇ ರೀತಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗದೆ ಆಕೆ ಮೃತಪಟ್ಟಿದ್ದರು.
ಉಮ್ರಾ ಯಾತ್ರೆ ಮಧ್ಯೆ ಇಮಾಮ್ ಪತ್ನಿ ಸಾವು: ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದ ಮಸೀದಿಯ ಇಮಾಮ್ ಜಹೀರ್ ಹುಸೇನ್ ತನ್ನ ಪತ್ನಿ ಸೀಮಾ ಬೇಗಂ (52) ಪವಿತ್ರ ಉಮ್ರಾ ಯಾತ್ರೆಗೆ ಹೋಗುವ ಮಾರ್ಗಮಧ್ಯೆ ಬಹ್ರೇನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಳಿಕ ಕರ್ನಾಟಕ ಕಲ್ಚರಲ್ ಸಂಘಟನೆ ಸಹಾಯದಿಂದ ಬಹ್ರೇನಲ್ಲೇ ಅವರ ಅಂತ್ಯಕ್ರಿಯೆ ನಡೆಸಲಾಗಿದೆ. ಕೂಡ್ಲಿಗಿ ತಾಲೂಕಿನ ಗುಡೇಕೋಟೆಯಲ್ಲಿ 6 ವರ್ಷಗಳಿಂದ ಇಲ್ಲಿಯ ಮಸೀದಿಯಲ್ಲಿ ಇಮಾಮ್ ಆಗಿ ಜಹೀರ್ ಹುಸೇನ್ ಸೇವೆ ಸಲ್ಲಿಸುತ್ತಿದ್ದಾರೆ.
ದಂಪತಿ ಬಿಹಾರ ಮೂಲದವರು. ಈ ಹಿಂದೆ ಬಳ್ಳಾರಿಯಲ್ಲಿ ಹಲವು ವರ್ಷಗಳ ಕಾಲ ಇಮಾಮ್ ಸೇವೆ ಮಾಡಿದ್ದಾರೆ. ಇವರಿಗೆ ಇಬ್ಬರು ಪುತ್ರರಿದ್ದು, ಓರ್ವ ಬಿಹಾರನಲ್ಲಿ ಮತ್ತೋರ್ವ ಓಡಿಶಾದಲ್ಲಿ ಇದ್ದಾರೆ. ಸೌದಿ ಅರೇಬಿಯಾಕ್ಕೆ ಹೋಗಲು ನೇರ ವಿಮಾನ ಸಿಗದೇ ಇದ್ದ ಕಾರಣ ಈ ದಂಪತಿ ಭಾರತದಿಂದ ಬಹ್ರೇನ್ ಮಾರ್ಗವಾಗಿ ಟಿಕೆಟ್ ಪಡೆದಿದ್ದರು. ಬಹ್ರೇನಲ್ಲಿ ಇಳಿದು ಸೌದಿ ಅರೇಬಿಯಾ ವಿಮಾನ ಹತ್ತುವ ವೇಳೆಗೆ ಇಮಾಮ್ ಜಹೀರ್ ಹುಸೇನ್ ಅವರ ಪತ್ನಿ ಸೀಮಾ ಬೇಗಂ ಅವರಿಗೆ ಹೃದಯಾಘಾತವಾಗಿ ಮರಣ ಹೊಂದಿದರು. ಮೃತದೇಹ ಕೊಂಡೊಯ್ಯಲು ಕಾನೂನು ಸಮಸ್ಯೆ ಎದುರಾಯಿತು.
ಗುಮ್ಮಟನಗರಿಯಲ್ಲಿ ಸಂಭ್ರಮದ ನವರಾತ್ರಿ: ಪ್ರತಿವರ್ಷ ಪ್ರತಿಷ್ಟಾಪನೆಯಾಗುತ್ತೆ ವಿಸ್ಮಯಕಾರಿ ಮೂರ್ತಿ!
ಆಗ ಆಲ್ ಇಂಡಿಯಾ ಮುಸ್ಲಿಂ ಡೆವಲಪ್‌ಮೆಂಟ್‌ನ ಕರ್ನಾಟಕ ಪೋರಂ ರಾಜ್ಯಾಧ್ಯಕ್ಷ ಬೆಂಗಳೂರಿನ ಸಯ್ಯದ್ ನಜೀರ್ ಅವರ ನೆರವಿಗೆ ಬಂದರು. ಬಹ್ರೇನಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಕಲ್ಚರನ್ ಫೌಂಡೇಶನ್ ಎನ್ನುವ ಸಮಾಜಸೇವಾ ಧಾರ್ಮಿಕ ಸಂಘಟನೆಯ ಪದಾಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆ ವಿವರಿಸಿದರು. ಕೆಸಿಎಫ್ ಅಧ್ಯಕ್ಷ ಜಮಾಲ್ ಬಾಯಿ ಹಾಗೂ ಕಲಂದರ್ ಬಾಯಿ ಅವರ ಸತತ ಪ್ರಯತ್ನದಿಂದ ಬಹ್ರೇನಲ್ಲೇ ಅಂತ್ಯಕ್ರಿಯೆ (ದಫನ್) ನಡೆಸಿದರು. ಆನಂತರ ಜಹೀರ್ ಹುಸೇನ್ ಸೌದಿ ಅರೇಬಿಯಾಕ್ಕೆ ಉಮ್ರಾ ಯಾತ್ರೆಗೆ ಹೋಗಲು ಅನುಕೂಲ ಮಾಡಿಕೊಟ್ಟರು.