ಜಾನಪದ ಕ್ರೀಡೆಗಳು ಒಮ್ಮೊಮ್ಮೆ ಪ್ರಾಣಕ್ಕೆ ಸಂಚಕಾರ ತರುವ ಸುದ್ದಿಗಳನ್ನು ಕೇಳುತ್ತಿರುತ್ತೇವೆ. ಅಂಥದ್ದೇ ಒಂದು ಪ್ರಕರಣ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಹಾವೇರಿ[ಫೆ.24] ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದಲ್ಲಿ ಭಾನುವಾರ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ವಿದ್ಯಾರ್ಥಿಯೊಬ್ಬ ಸಾವಿಗೀಡಾಗಿದ್ದಾನೆ.
ಶಿಕಾರಿಪುರ ತಾಲೂಕಿನ ಮಳವಳ್ಳಿ ಗ್ರಾಮದ ಅರುಣ್ (19) ಹೋರಿ ತಿವಿತಕ್ಕೆ ಬಲಿಯಾಗಿದ್ದಾರೆ ಹಂಸಭಾವಿ ಕಾಲೇಜಿನಲ್ಲಿ ಬಿಎಸ್ ಸಿ ಅಧ್ಯಯನ ಮಾಡುತ್ತಿದ್ದ ಯುವಕ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.