ಬಸ್‌ಗಳಿಲ್ಲದೆ ಕಾಲೇಜಿಗೆ ತೆರಳಲು ಗ್ರಾಮೀಣ ವಿದ್ಯಾರ್ಥಿಗಳ ಹರಸಾಹಸ

By Kannadaprabha NewsFirst Published Sep 29, 2021, 12:17 PM IST
Highlights
  • ಬಸ್‌ ಸೌಲಭ್ಯಗಳಿಲ್ಲದೆ ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳ ಹರಸಾಹಸ 
  • ಗ್ರಾಮಾಂತರ ಪ್ರದೇಶಕ್ಕೆ ಹೆಚ್ಚಿನ ಬಸ್‌ ಸೌಲಭ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಆಗ್ರಹ

 ಬೆಟ್ಟದಪುರ (ಸೆ.29): ಬಸ್‌ ಸೌಲಭ್ಯಗಳಿಲ್ಲದೆ ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳು ಹರಸಾಹಸ ಪಡುತ್ತಿದ್ದು, ಗ್ರಾಮಾಂತರ ಪ್ರದೇಶಕ್ಕೆ (Rural Areas) ಹೆಚ್ಚಿನ ಬಸ್‌ ಸೌಲಭ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು (Students) ಆಗ್ರಹಿಸಿದ್ದಾರೆ.

 ಸುತ್ತಮುತ್ತಲಿನ ಗ್ರಾಮಗಳಿಂದ ಬೆಟ್ಟದಪುರದ ಕಾಲೇಜಿಗೆ (College) ಬರುವ ವಿದ್ಯಾರ್ಥಿಗಳು ತಮ್ಮ ತಮ್ಮ ಗ್ರಾಮಗಳಿಗೆ ತೆರಳಲು ಖಾಸಗಿ ವಾಹನಗಳನ್ನೆ ಅವಲಂಬಿಸಿದ್ದಾರೆ ಇದುವರೆಗೂ ಸರ್ಕಾರ ಗ್ರಾಮಾಂತರ ಪ್ರದೇಶಕ್ಕೆ ಹೆಚ್ಚಿನ ಬಸ್ಸಿನ ಸೌಲಭ್ಯ ನೀಡಿಲ್ಲ ಕೇವಲ ಬೆರಳೆಣಿಕೆಯ ಬಸ್‌ಗಳು ಮಾತ್ರ ಓಡಾಡುತ್ತಿದ್ದು, ಅವು ತಾಲೂಕು ಮತ್ತು ಹೋಬಳಿ ಮಟ್ಟಕ್ಕೆ ಮಾತ್ರ ಓಡಾಡುತ್ತಿವೆ.

ವಜಾಗೊಂಡ 4,200 ಸಾರಿಗೆ ನೌಕರರ ಮರುನೇಮಕ!

ಗ್ರಾಮಾಂತರಗಳಿಂದ ಕಾಲೇಜಿಗೆ ತೆರಳಬೇಕಾದರೆ ಕಾಲ್ನಡಿಗೆಯಲ್ಲಿ ಹೋಗಬೇಕು, ಇಲ್ಲವಾದರೆ ಗೂಡ್ಸ್‌ ವಾಹನಗಳನ್ನು ಹತ್ತಬೇಕಾಗಿದೆ, ಗೂಡ್ಸ್ ವಾಹನಗಳು ಅಪಘಾತಕ್ಕೆ ಈಡಾದರೆ ಇದಕ್ಕೆ ಪರಿಹಾರವೂ ಇಲ್ಲ, ಆದರೆ ಸರ್ಕಾರ ಈ ಕೂಡಲೇ ಗ್ರಾಮಾಂತರ ಪ್ರದೇಶಗಳಿಗೆ ಹೆಚ್ಚಿನ ಬಸ್‌ ಸೌಲಭ್ಯವನ್ನು ಒದಗಿಸಬೇಕೆಂದು ವಿದ್ಯಾರ್ಥಿನಿಯರು ಒತ್ತಾಯಿಸಿದ್ದಾರೆ.

ನಮಗೆ ಕಾಲೇಜಿನಲ್ಲಿ ಪಾಠ ಪ್ರವಚನಗಳು ಪ್ರಾರಂಭವಾಗಿದ್ದು, ಒಂದು ದಿನ ಗೈರು ಹಾಜರು ಆದರೂ ನಮಗೆ ತೊಂದರೆಯಾಗುತ್ತದೆ, ಆದ್ದರಿಂದ ಸರ್ಕಾರ ಇತ್ತ ಗಮನಹರಿಸಿ ಗ್ರಾಮಾಂತರ ಪ್ರದೇಶಕ್ಕೆ ಹೆಚ್ಚಿನ ಬಸ್ಸಿನ ಸೌಲಭ್ಯ ಕಲ್ಪಿಸಿಕೊಡಬೇಕಾಗಿ ಆಗ್ರಹಿಸಿದ್ದಾರೆ.

ಸ್ಥಗಿತವಾದ ಕಡೆ ಬಸ್ ಸಂಚಾರ : ಶಾಲಾ-ಕಾಲೇಜು ಮಾರ್ಗಕ್ಕೆ ಆದ್ಯತೆ

ಕೋವಿಡ್‌ (covid ) ನಿಂದಾಗಿ ಸ್ಥಗಿತಗೊಳಿಸಲಾಗಿದ್ದ ಬಸ್‌ಗಳ ಸಂಚಾರವನ್ನು ಪುನಃ ಆರಂಭಿಸಲು ಕ್ರಮ ಕೈಗೊಳ್ಳಲಿದ್ದು,  ಮಕ್ಕಳು ಶಾಲಾ-ಕಾಲೇಜಿಗೆ  ತೆರಳಲು ಮೊದಲ ಆದ್ಯತೆ ನೀಡಲಾಗುವುದು ಎಂದು ಸಾರಿಗೆ ಸಚಿವ  ಶ್ರೀ ರಾಮುಲು  ಭರವಸೆ ನೀಡಿದ್ದಾರೆ. 

ಸಾರಿಗೆ ನೌಕರರಿಗೆ ಗುಡ್‌ನ್ಯೂಸ್: ಎಲ್ಲಾ ಕೇಸ್‌ಗಳನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಶಾಲೆ- ಕಾಲೇಜು ಪ್ರಾರಂಭವಾಗಿದೆ.  ಮಕ್ಕಳ ಅನುಕೂಲಕ್ಕಾಗಿ ಕೋವಿಡ್ ವೇಳೆ ಸ್ಥಗಿತಗೊಳಿಸಿದ್ದ ಮಾರ್ಗದಲ್ಲಿ ಸಂಚಾರವನ್ನು ಮತ್ತೆ ಆರಂಭಿಸಲಾಗುವುದು. ಹೊಸ ಬಸ್‌ (Bus) ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಿದ ವೇಳೆ  ರಾಯಚೂರಿನ  ಘಟಕ್ಕೆ ಹೊಸ ಬಸ್‌ಗಳನ್ನು ಒದಗಿಸಲಾಗುವುದು.  ಹೊಸ  ವಾಹನಗಳ ಖರೀದಿ ಕುರಿತು ಪರಿಸ್ತಿತಿಗೆ ಅನುಗುನವಾಗಿ ತಿರ್ಮಾನ ಕೈಗೊಳ್ಳಲಾಗುವುದು ಎಂದರು. 

ದಸರಾ ದೀಪಾವಳಿಗೆ ಹೆಚ್ಚುವರಿ ಬಸ್ 

ದಸರಾ ಹಾಗೂ ದೀಪಾವಳಿ ಹಬ್ಬದ ಅವಧಿಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ (KSRTC) ಬೆಂಗಳೂರಿನಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಗೆ ಒಂದು ಸಾವಿರ ಹೆಚ್ಚುವರಿ ಬಸ್‌ ಕಾರ್ಯಾಚರಣೆ ಮಾಡಲಿದೆ.

ದಸರಾ ಪ್ರಯುಕ್ತ ಅ.13ರಿಂದ 21ರ ವರೆಗೆ ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ಅ.29ರಿಂದ ನ.11ರ ವರೆಗೆ ಒಂದು ಸಾವಿರ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುವುದು. ರಾಜ್ಯದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌ ಮೊದಲಾದ ಸ್ಥಳಗಳಿಗೆ ಹೆಚ್ಚುವರಿ ಬಸ್‌ ಸಂಚರಿಸಲಿವೆ.

click me!