ಉತ್ತರಕನ್ನಡದ ಏಕೈಕ ಸರಕಾರಿ ಮೆಡಿಕಲ್ ಕಾಲೇಜ್ ವಿರುದ್ಧ ವಿದ್ಯಾರ್ಥಿಗಳು ಗರಂ!

By Suvarna NewsFirst Published Jan 31, 2023, 10:13 PM IST
Highlights

ಉತ್ತರಕನ್ನಡ ಜಿಲ್ಲೆಯಲ್ಲಿರುವ ಏಕೈಕ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಇದೀಗ ಭ್ರಷ್ಟಾಚಾರ ನಡೆಯುತ್ತಿರುವ ಆರೋಪ ಎದುರಾಗಿದೆ. ಕ್ರಿಮ್ಸ್ ನಲ್ಲಿ ಅವ್ಯವಸ್ಥೆ ಹಾಗೂ ಭ್ರಷ್ಟಾಚಾರ ತಾಂಡವ ಆಡುತ್ತಿರುವ ಬಗ್ಗೆ ವಿದ್ಯಾರ್ಥಿಗಳು ದಾಖಲೆ ಸಮೇತ ಗಂಭೀರ ಆರೋಪ ಮಾಡಿದ್ದಾರೆ.

ಉತ್ತರಕನ್ನಡ (ಜ.31): ಉತ್ತರಕನ್ನಡ ಜಿಲ್ಲೆಯಲ್ಲಿರುವ ಏಕೈಕ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಇದೀಗ ಭ್ರಷ್ಟಾಚಾರ ನಡೆಯುತ್ತಿರುವ ಆರೋಪ ಎದುರಾಗಿದೆ. ಈ ಕಾಲೇಜಿನಲ್ಲಿ ಈಗಾಗಲೇ ಒಂದು ಬ್ಯಾಚ್ ವಿದ್ಯಾಭ್ಯಾಸ ಪೂರೈಸಿದ್ದು, ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, ಕಿಮ್ಸ್ (Karwar Institute of Medical Sciences) ನಲ್ಲಿ ಅವ್ಯವಸ್ಥೆ ಹಾಗೂ ಭ್ರಷ್ಟಾಚಾರ ತಾಂಡವ ಆಡುತ್ತಿರುವ ಬಗ್ಗೆ ವಿದ್ಯಾರ್ಥಿಗಳು ದಾಖಲೆ ಸಮೇತ ಗಂಭೀರ ಆರೋಪ ಮಾಡಿದ್ದಾರೆ. ಕಿಮ್ಸ್ ನಿಂದ ಹೊರ ಬಂದು ಮುಖ್ಯದ್ವಾರದ ಬಳಿ ಜಮಾವಣೆಗೊಂಡ 50ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ. ವಿದ್ಯಾರ್ಥಿಗಳನ್ನು ಪರೀಕ್ಷೆಯಲ್ಲಿ ತೇರ್ಗಡೆ ಮಾಡಲು ಪೀಡಿಯಾಟ್ರಿಕ್ ವಿಭಾಗದ ಸಹಾಯಕ ಪ್ರಾಧ್ಯಾಪಕರು ಹಣ ಕೇಳಿದ್ದರು. ಅದರಂತೆ ವಿದ್ಯಾರ್ಥಿ ಓರ್ವ 34 ಸಾವಿರ ರೂ. ಜಮಾ ಮಾಡಿರುವ ಬಗ್ಗೆ ದಾಖಲೆ ಇದೆ. ಅಲ್ಲದೇ, ಈ ಬಗ್ಗೆ ಪ್ರಶ್ನೆ ಮಾಡಿದ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಪ್ರಾಯೋಗಿಕ ಪರೀಕ್ಷೆಗಳಲ್ಲಿ ಫೈಲ್ ಮಾಡಲಾಗುತ್ತಿದೆ.

ದಾವಣಗೆರೆ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆಯಿಂದ ಉಚಿತ ಆರೋಗ್ಯ ಶಿಬಿರ

 ಕಿಮ್ಸ್ ಹಾಸ್ಟೆಲ್‌ಗಳಲ್ಲಿ ಊಟದ ಟೆಂಡರ್ ಬದಲಿಸದೇ ಕಳಪೆ ಮಟ್ಟದ ಊಟ ನೀಡಲಾಗುತ್ತಿದೆ. ರಾತ್ರಿ ತುರ್ತು ಚಿಕಿತ್ಸೆಗೆ ತೆರಳಲು ಅವಕಾಶ ನೀಡುತ್ತಿಲ್ಲ. ಪುಸ್ತಕ ಖರೀದಿಗೆ ಆನ್ಲೈನ್ ಟೆಂಡರ್ ಕರೆಯುವ ನಿಯಮವಿದ್ದರೂ, ಕಾನೂನು ಬಾಹಿರವಾಗಿ 40 ಲಕ್ಷ ರೂ. ವೆಚ್ಚದ ಪುಸ್ತಕ ಖರೀದಿ ಮಾಡಲಾಗಿದೆ.

 

ಚಿತ್ರದುರ್ಗ ಮೆಡಿಕಲ್ ಕಾಲೇಜು ಕಾಮಗಾರಿ ವಿಳಂಬದ ವಿರುದ್ದ ಕರುನಾಡ ಸೇನೆ ಆಕ್ರೋಶ‌

 ಈ ಎಲ್ಲಾ ಅವ್ಯವಹಾರಗಳ ಬಗ್ಗೆ ಮಾಹಿತಿ ಹಕ್ಕಿನಲ್ಲಿ ಅರ್ಜಿ ಹಾಕಿದರೂ ಈವರೆಗೆ ಯಾವ ಅರ್ಜಿಗೂ ಸ್ಪಂದಿಸಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಬಗ್ಗೆ ಮಾನವ ಹಕ್ಕು ಆಯೋಗ, ಜಿಲ್ಲಾಧಿಕಾರಿ, ಆರೋಗ್ಯ ಸಚಿವ ಡಾ. ಕೆ. ಸುಧಾಕರ ಅವರಿಗೂ ಮನವಿ ಸಲ್ಲಿಸಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ನಮಗೆ ನ್ಯಾಯ ಬೇಕು ಎಂದು ಆಗ್ರಹಿಸಿರುವ ವಿದ್ಯಾರ್ಥಿಗಳು ತಮ್ಮಲ್ಲಿರುವ ದಾಖಲೆಗಳನ್ನು ಲೋಕಾಯುಕ್ತಕ್ಕೂ ಸಲ್ಲಿಸಿದ್ದಾರೆ.

click me!