ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಇಬ್ಬರು ವ್ಯಕ್ತಿಗಳು ಮೂರು ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್‌ನಿಂದ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪನವರು ಪಕ್ಷದ ಬಿ ಫಾರಂ ಸಹಿತ ಶನಿವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಎಂ.ಟಿ.ಕೃಷ್ಣಪ್ಪನವರು ತಮ್ಮ ಪತ್ನಿ ಸರಳಾ, ಪುತ್ರ ವೆಂಕಟೇಶ್, ತಾಲೂಕು ಜೆಡಿಎಸ್ ಅಧ್ಯಕ್ಷ ಸ್ವಾಮಿ, ತಾಲೂಕು ಯುವ ಜೆಡಿಎಸ್ ಅಧ್ಯಕ್ಷ ಬಾಣಸಂದ್ರ ರಮೇಶ್‌ರವರೊಂದಿಗೆ ಕಚೇರಿಗೆ ತೆರಳಿ ನಾಮಪತ್ರವನ್ನು ಚುನಾವಣಾಧಿಕಾರಿ ಮಂಜುನಾಥ್ ರವರಿಗೆ ಸಲ್ಲಿಸಿದರು.
ತುರುವೇಕೆರೆ : ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಇಬ್ಬರು ವ್ಯಕ್ತಿಗಳು ಮೂರು ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್‌ನಿಂದ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪನವರು ಪಕ್ಷದ ಬಿ ಫಾರಂ ಸಹಿತ ಶನಿವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಎಂ.ಟಿ.ಕೃಷ್ಣಪ್ಪನವರು ತಮ್ಮ ಪತ್ನಿ ಸರಳಾ, ಪುತ್ರ ವೆಂಕಟೇಶ್, ತಾಲೂಕು ಜೆಡಿಎಸ್ ಅಧ್ಯಕ್ಷ ಸ್ವಾಮಿ, ತಾಲೂಕು ಯುವ ಜೆಡಿಎಸ್ ಅಧ್ಯಕ್ಷ ಬಾಣಸಂದ್ರ ರಮೇಶ್‌ರವರೊಂದಿಗೆ ಕಚೇರಿಗೆ ತೆರಳಿ ನಾಮಪತ್ರವನ್ನು ಚುನಾವಣಾಧಿಕಾರಿ ಮಂಜುನಾಥ್ ರವರಿಗೆ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಎಂ.ಟಿ.ಕೃಷ್ಣಪ್ಪ ಹಾಗೂ ಕುಟುಂಬದ ಸದಸ್ಯರು ಮತ್ತು ಬೆಂಬಲಿಗರೊಂದಿಗೆ ಹಲವಾರು ದೇವಾಲಯಗಳಿಗೆ ತೆರಳಿ, ತಮಗೆ ನೀಡಿರುವ ಬಿ ಫಾರಂಗೆ ಪೂಜೆ ಮಾಡಿಸಿದರು.ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಏ.20ಕ್ಕೆ ತುರುವೇಕೆರೆಗೆ ಆಗಮಿಸಲಿದ್ದು ಅಂದು ಸಹಸ್ರಾರು ಜೆಡಿಎಸ್ ಕಾರ್ಯಕರ್ತರ ಸಮ್ಮುಖ ಮತ್ತೊಮ್ಮೆ ನಾಮಪತ್ರವನ್ನು ಸಲ್ಲಿಸುವ ಸಾಧ್ಯತೆ ಇದೆ.
ಕೆಆರ್‌ಎಸ್ ಪಕ್ಷದ ವತಿಯಿಂದ ರಾಮಪ್ರಸಾದ್ ಎಂಬುವವರು ಬಿ ಫಾರಂ ಸಹಿತ ಚುನಾವಣಾಧಿಕಾರಿ ಮಂಜುನಾಥ್‌ರವರಿಗೆ ಎರಡು ನಾಮಪತ್ರ ಸಲ್ಲಿಸಿದರು. ಇವರೊಂದಿಗೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಕಲ್ಪತರು ನಾಡಲ್ಲಿ ರಂಗೇರಿದ ಪ್ರಚಾರ
ತುಮಕೂರು : ಚುನಾವಣೆಗೆ ಕೇವಲ 24 ದಿವಸಗಳು ಬಾಕಿಯಿರುವಾಗಲೇ ಸುಡು ಬಿಸಿಲಲ್ಲಿ ಅಭ್ಯರ್ಥಿಗಳು ಪ್ರಚಾರಕ್ಕೆ ಹೊರಟಿದ್ದಾರೆ.
ಈಗಾಗಲೇ 3 ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ತನ್ನ ಗಳನ್ನು ಘೋಷಿಸಿದ್ದು, ಬಹುತೇಕರಿಗೆ ಬಿ ಫಾರಂ ನೀಡಿದೆ. ಆಮ್ ಆದ್ಮಿ ಪಕ್ಷ ಕೂಡ ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಜಿಲ್ಲೆಯಲ್ಲಿ ಸ್ಟಾರ್ ನಾಯಕರೂ ಕೂಡ ಕಣದಲ್ಲಿದ್ದಾರೆ. ಮಾಜಿ ಡಿಸಿಎಂ ಹಾಗೂ ಮಾಜಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಮಾಜಿ ಸಚಿವ ಟಿ.ಬಿ. ಜಯಚಂದ್ರ, ಮಾಜಿ ಶಾಸಕ, ಅಧ್ಯಕ್ಷ ಕೆ.ಎನ್. ರಾಜಣ್ಣ ಕಣದಲ್ಲಿದ್ದಾರೆ.
ಸತತವಾಗಿ 4 ಬಾರಿ ವಿಧಾನಸಭೆಗೆ ಪ್ರವೇಶಿಸಿರುವ ಗುಬ್ಬಿ ಕಾಂಗ್ರೆಸ್ ಅಭ್ಯರ್ಥಿ ಜೆಡಿಎಸ್‌ನಿಂದ ಬಂದಿದ್ದು, ಅಭ್ಯರ್ಥಿಯಾಗಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಈ ಬಾರಿ ಪಕ್ಷಾಂತರ ಪರ್ವ ಕೂಡ ದೊಡ್ಡ ಮಟ್ಟದಲ್ಲಾಗಿದೆ. ಜೆಡಿಎಸ್‌ನಿಂದ ಬೆಮೆಲ್ ಕಾಂತರಾಜು, ಎಸ್.ಆರ್. ಶ್ರೀನಿವಾಸ್ ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬಂದಿದ್ದು, ಇಬ್ಬರೂ ಅಭ್ಯರ್ಥಿಗಳಾಗಿದ್ದಾರೆ. ಕಾಂಗ್ರೆಸ್‌ನಿಂದ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಬಿಜೆಪಿ ಬಂದಿದ್ದು, ಗುಬ್ಬಿಯಿಂದ ಬಿಜೆಪಿಯ ಬೆಟ್ಟಸ್ವಾಮಿ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ. ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಸೊಗಡು ಶಿವಣ್ಣ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.
3 ಪ್ರಮುಖ ರಾಜಕೀಯ ಪಕ್ಷಗಳಲ್ಲೂ ಬಂಡಾಯವಿದ್ದು, ಬಂಡಾಯದ ಮಧ್ಯೆಯೇ ಚುನಾವಣೆ ರಂಗು ಪಡೆದುಕೊಳ್ಳುತ್ತಿದೆ. ಜಿಲ್ಲೆಯಲ್ಲಿ 25 ಲಕ್ಷಕ್ಕೂ ಮತದಾರರಿದ್ದು, ಪುರುಷರಿಗಿಂತ ಅತಿ ಹೆಚ್ಚು ಮಹಿಳಾ ಮತದಾರರಿದ್ದು, ಯಾವೊಂದು ಪಕ್ಷವೂ ಮಹಿಳೆಗೆ ಟಿಕೆಟ್ ನೀಡಿಲ್ಲ. ಶೇ. 33ರಷ್ಟುಮಹಿಳಾ ಮೀಸಲಾತಿ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದ್ದರೂ, ಮಹಿಳೆರಿಗೆ ಟಿಕೆಟ್ ನೀಡದಿರುವ ಬಗ್ಗೆ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.